ಪುನೀತ್ 'ಜೇಮ್ಸ್' ಸಿನಿಮಾದಲ್ಲಿ ಬಾಲಿವುಡ್ ಖ್ಯಾತ ನಟ ನಾಸಿರುದ್ದೀನ್ ಶಾ
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸದ್ಯ ಜೇಮ್ಸ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈಗಾಗಲೇ ಮೊದಲ ಹಂತದ ಚಿತ್ರೀಕರಣ ಮುಗಿಸಿರುವ ಜೇಮ್ಸ್ ಎರಡನೇ ಹಂತದ ಚಿತ್ರೀಕರಣಕ್ಕೆ ಸಜ್ಜಾಗಿದ್ದಾರೆ. ಇತ್ತೀಚಿಗಷ್ಟೆ ಉತ್ತರ ಕರ್ನಾಟಕ ಭಾಗಗಳಲ್ಲಿ ಚಿತ್ರೀಕರಣ ಮಾಡಿದ್ದು, ಚಿತ್ರೀಕರಣದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ಇದೀಗ ಜೇಮ್ಸ್ ಸಿನಿಮಾದಿಂದ ಮತ್ತೊಂದು ಸುದ್ದಿ ಕೇಳಿ ಬರುತ್ತಿದೆ. ಪವರ್ ಸ್ಟಾರ್ ಜೇಮ್ಸ್ ಸಿನಿಮಾದಲ್ಲಿ ಬಾಲಿವುಡ್ ಖ್ಯಾತ ನಟ ನಾಸಿರುದ್ದೀನ್ ಶಾ ನಟಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಇತ್ತೀಚಿಗಷ್ಟೆ ಬಹುಭಾಷಾ ನಟ ಮುಖೇಶ್ ರಿಷಿ ಎಂಟ್ರಿ ಕೊಡಲಿದ್ದಾರೆ ಎನ್ನುವ ಸುದ್ದಿ ಕೇಳಿಬಂದಿತ್ತು. ಇದರ ಬೆನ್ನಲ್ಲೇ ಈಗ ನಾಸಿರುದ್ದೀನ್ ಶಾ ಹೆಸರು ಸಹ ಕೇಳಿ ಬರುತ್ತಿದೆ. ಈಗಾಗಲೇ ಸಿನಿಮಾತಂಡ ನಾಸಿರುದ್ದೀನ್ ಶಾ ಜೊತೆ ಮಾತುಕತೆ ನಡೆಸಿದ್ದು, ಸಿನಿಮಾದಲ್ಲಿ ನಟಿಸಲು ನಾಸಿರುದ್ದೀನ್ ಶಾ ಗ್ರೀನ್ ಸಿಗ್ನಲ್ ನೀಡಿದ್ದಾರಂತೆ. ಮುಂದೆ ಓದಿ..

ಕನ್ನಡದ ಎರಡು ಸಿನಿಮಾಗಳಲ್ಲಿ ನಟಿಸಿರುವ ನಾಸಿರುದ್ದೀನ್ ಶಾ
ಅಂದಹಾಗೆ ನಾಸಿರುದ್ದೀನ್ ಶಾ ಈ ಮೊದಲು ಕನ್ನಡದ ಎರಡು ಸಿನಿಮಾಗಳಲ್ಲಿ ನಟಿಸಿದ್ದಾರೆ. ಗಿರೀಶ್ ಕಾರ್ನಾಡ್ ಅವರ 'ತಬ್ಬಲಿಯು ನೀನಾದೆ ಮಗನೆ' ಮತ್ತು ಗಿರೀಶ್ ಕಾಸರವಳ್ಳಿ ಅವರ 'ಮನೆ' ಸಿನಿಮಾ ಮೂಲಕ ಕನ್ನಡ ಸಿನಿಮಾ ಪ್ರೇಕ್ಷಕರ ಮುಂದೆ ಬಂದಿದ್ದಾರೆ. ಇದೀಗ ಅನೇಕ ವರ್ಷಗಳ ಬಳಿಕ ಮತ್ತೆ ಕನ್ನಡ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿರುವುದು ಕನ್ನಡಿಗರಿಗೆ ಸಂತಸ ವಿಚಾರವಾಗಿದೆ.
Recommended Video

ಚೇತನ್ ನಿರ್ದೇಶನ
ಬಹದ್ಧೂರ್, ಭರ್ಜರಿ ಚಿತ್ರಗಳನ್ನು ನಿರ್ದೇಶಿಸಿದ್ದ ಚೇತನ್ ಕುಮಾರ್ ಜೇಮ್ಸ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದು, ಕಿಶೋರ್ ಪತ್ತಿಕೊಂಡ ಬಂಡವಾಳ ಹಾಕುತ್ತಿದ್ದಾರೆ. ಇನ್ನುಳಿದಂತೆ ಅನು ಪ್ರಭಾಕರ್, ತೆಲುಗು ನಟ ಶ್ರೀಕಾಂತ್, ಆದಿತ್ಯ ಮೆನನ್ ಸಹ ಈ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.


Click it and Unblock the Notifications











