For Quick Alerts
  ALLOW NOTIFICATIONS  
  For Daily Alerts

  ಉಪೇಂದ್ರ 'ಕಬ್ಜ' ಸಿನಿಮಾಗೆ ಎಂಟ್ರಿ ಕೊಟ್ಟ ಬಾಲಿವುಡ್ ನಟ

  By ಫಿಲ್ಮಿಬೀಟ್ ಡೆಸ್ಕ್
  |

  ರಿಯಲ್ ಸ್ಟಾರ್ ಉಪೇಂದ್ರ ನಟನೆಯ 'ಕಬ್ಜ' ಸಿನಿಮಾದ ಚಿತ್ರೀಕರಣ ಭರ್ಜರಿಯಾಗಿ ನಡೆಯುತ್ತಿದೆ. ಈಗಾಗಲೇ ಸಾಕಷ್ಟು ಚಿತ್ರೀಕರಣ ನಡೆಸಿರುವ ಸಿನಿಮಾತಂಡ ಸದ್ಯ 5ನೇ ಹಂತದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಪೋಸ್ಟರ್ ಮತ್ತು ಮೋಷನ್ ಪೋಸ್ಟರ್ ಮೂಲಕ ಅಭಿಮಾನಿಗಳ ಗಮನ ಸೆಳೆಯುತ್ತಿರುವ ಕಬ್ಜ ಚಿತ್ರದಲ್ಲಿ ರಿಯಲ್ ಸ್ಟಾರ್ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ನಿರ್ದೇಶಕ ಆರ್. ಚಂದ್ರು ಸಾರಥ್ಯದಲ್ಲಿ ಮೂಡಿಬರುತ್ತಿರವ ಕಬ್ಜ ಸಿನಿಮಾದ ಬಗ್ಗೆ ಮತ್ತೊಂದು ಇಂಟರೆಸ್ಟಿಂಗ್ ಮಾಹಿತಿ ಬಹಿರಂಗವಾಗಿದೆ.

  ಕಬ್ಜ ಚಿತ್ರಕ್ಕೆ ಮತ್ತೋರ್ವ ಖ್ಯಾತ ನಟ ಎಂಟ್ರಿ ಕೊಟ್ಟಿದ್ದಾರೆ. ಚಿತ್ರದಲ್ಲಿ ಬಾಲಿವುಡ್ ನಟ ನವಾಬ್ ಶಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಬಗ್ಗೆ ನಿರ್ದೇಶಕ ಆರ್ ಚಂದ್ರು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿದ್ದಾರೆ. ನವಾಬ್ ಶಾ ಅವರನ್ನು ಸಿನಿಮಾಗೆ ಸ್ವಾಗತ ಮಾಡುವ ಮೂಲಕ ನಿರ್ದೇಶಕ ಆರ್ ಚಂದ್ರು ನವಾಬ್ ಶಾ ಎಂಟ್ರಿಯನ್ನು ಬಹಿರಂಗ ಪಡಿಸಿದ್ದಾರೆ.

  ನಟ ನವಾಬ್ ಶಾ ಈಗಾಗಲೇ ಕನ್ನಡದಲ್ಲಿ ನಟಿಸಿದ್ದಾರೆ. ಜೇಷ್ಠ ಮತ್ತು ಕಿಚ್ಚ ಸುದೀಪ್ ನಟನೆಯ ಕೋಟಿಗೊಬ್ಬ-3 ಸಿನಿಮಾದಲ್ಲಿ ನಟಿಸಿದ್ದಾರೆ. ಕನ್ನಡದ ಈ ಸಿನಿಮಾ ಬಿಡುಗಡೆಗೂ ಮೊದಲೇ ನವಾಬ್ ಶಾ ಮತ್ತೊಂದು ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಅಂದಹಾಗೆ ಬಾಲಿವುಡ್ ನಟ ನವಾಬ್ ಶಾ ಈಗಾಗಲೇ ತಮಿಳು ಮತ್ತು ತೆಲುಗು ಸಿನಿಮಾಗಳಲ್ಲಿ ನಟಿಸಿದ್ದಾರೆ. ಇದೀಗ ಕನ್ನಡ ಪ್ರೇಕ್ಷಕರನ್ನು ರಂಜಿಸಲು ಸಜ್ಜಾಗಿದ್ದಾರೆ.

  ಅಂದಹಾಗೆ ಈಗಾಗಲೇ ಕಬ್ಜ ಸಿನಿಮಾದಲ್ಲಿ ಸಾಕಷ್ಟು ಜನ ನಟಿಸುತ್ತಿದ್ದಾರೆ. ಉಪೇಂದ್ರ ನಾಯಕನಾಗಿ ನಟಿಸುತ್ತಿರುವ ಈ ಸಿನಿಮಾದಲ್ಲಿ ಕಿಚ್ಚ ಸುದೀಪ್ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಸುದೀಪ್ ಪಾತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದ್ದು, ಅಭಿಮಾನಿಗಳ ಮನ ಗೆದ್ದಿದೆ. ಇನ್ನು ಉಳಿದಂತೆ ನಟ ಕಾಮರಾಜನ್, ಜಗಪತಿ ಬಾಬು, ರಾಹುಲ್ ಜಗತಪ್, ಅನೂಪ್ ರೇವಣ್ಣ, ಜಾನ್ ಕೊಕ್ಕಿನ್, ರಾಹುಲ್ ದೇವ್ ಸೇರಿದಂತೆ ದೊಡ್ಡ ತಾರಾಬಳಗ ಸಿನಿಮಾದಲ್ಲಿದೆ.

  ಈಗಾಗಲೇ ನವಾಬ್ ಶಾ ಚಿತ್ರೀಕರಣ ತಂಡ ಸೇರಿಕೊಂಡಿದ್ದಾರೆೆ. ಕಬ್ಜ ಸಿನಿಮಾದ ಚಿತ್ರೀಕರಣ ಮಿನರ್ವ ಮಿಲ್ ನಲ್ಲಿ ನಡೆಯುತ್ತಿದೆ. ಕೆಜಿಎಫ್ ಖ್ಯಾತಿಯ ಕಲಾ ನಿರ್ದೇಶಕ ಶಿವಕುಮಾರ್ ನೇತೃತ್ವದಲ್ಲಿ ಅದ್ದೂರಿ ಸೆಟ್ ನಿರ್ಮಾಣ ಮಾಡಲಾಗಿದೆ. ಇದೇ ಸೆಟ್ ನಲ್ಲಿ ಸುಮಾರು 40 ದಿನಗಳ ಕಾಲ ಚಿತ್ರೀಕರಣ ನಡೆಯಲಿದೆ ಎನ್ನುವ ಮಾಹಿತಿ ತಿಳಿದುಬಂದಿದೆ. ಕೊನೆಯ ಹಂತದ ಚಿತ್ರೀಕರಣ ಹೈದರಾಬಾದ್ ನಲ್ಲಿ ಮಾಡಲು ಸಿನಿಮಾತಂಡ ಪ್ಲಾನ್ ಮಾಡಿದೆ.

  ಕಬ್ಜ ಸಿನಿಮಾ ಕನ್ನಡ ಮಾತ್ರವಲ್ಲದೆ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆಯಾಗುತ್ತಿದೆ. ರೆಟ್ರೋ ಶೈಲಿಯಲ್ಲಿ ಸಿನಿಮಾ ಮೂಡಿಬರುತ್ತಿದ್ದು, 80ರ ದಶಕದ ಮಾಫಿಯಾ ಕಥೆಯಬಗ್ಗೆ ಇರುವ ಸಿನಿಮಾ ಎನ್ನಲಾಗುತ್ತಿದೆ. ಈಗಾಗಲೇ ಕುತೂಹಲ ಮೂಡಿಸಿರುವ ಕಬ್ಜ ಸಿನಿಮಾವನ್ನು ತೆರೆಮೇಲೆ ನೋಡಲು ಅಭಿಮಾನಿಗಳು ಸಹ ಕಾತರರಾಗಿದ್ದಾರೆ.

  English summary
  Actor Nawab Shah on board for Upendra Starrer Kabzaa Movie.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X