'ರೈಡರ್' ಬಿಡುಗಡೆಗೂ ಮೊದಲೇ ಮತ್ತೊಂದು ಸಿನಿಮಾಗೆ ಸಹಿ ಮಾಡಿದ ನಿಖಿಲ್

ಸ್ಯಾಂಡಲ್ ವುಡ್ ನಟ, ರಾಜಕಾರಣಿ ನಿಖಿಲ್ ಕುಮಾರ್ ಸದ್ಯ ತಂದೆಯಾಗುತ್ತಿರುವ ಸಂಭ್ರಮದಲ್ಲಿದ್ದಾರೆ. ಇತ್ತೀಚಿಗಷ್ಟೆ ನಿಖಿಲ್ ಕುಮಾರ್ ಪತ್ನಿ ರೇವತಿ ಹುಟ್ಟುಹಬ್ಬದ ದಿನ ಗರ್ಭಿಣಿ ಎನ್ನುವ ವಿಚಾರ ಬಹಿರಂಗವಾಗಿದೆ. ತಾತ ಆಗುತ್ತಿರುವ ಸಂತಸದ ವಿಚಾರವನ್ನು ಕುಮಾರಸ್ವಾಮಿ ರಿವೀಲ್ ಮಾಡಿದ್ದಾರೆ.

ಇದೇ ಸಂತಸದಲ್ಲಿ ನಿಖಿಲ್ ಹೊಸ ಸಿನಿಮಾಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಯುವ ನಿರ್ದೇಶಕನ ಸಿನಿಮಾದಲ್ಲಿ ನಿಖಿಲ್ ನಾಯಕನಾಗಿ ಮಿಂಚಲು ಸಿದ್ಧರಾಗಿದ್ದಾರೆ. ಹೌದು, ಮಂಜು ಅಥರ್ವ ಸಾರಥ್ಯದಲ್ಲಿ ಮೂಡಿಬರುತ್ತಿರುವ ಚೊಚ್ಚಲ ಸಿನಿಮಾದಲ್ಲಿ ನಿಖಿಲ್ ಕಾಣಿಸಿಕೊಳ್ಳುತ್ತಿದ್ದಾರೆ.

ನಿರ್ದೇಶಕ ಮಂಜುಗೆ ಇದು ಚೊಚ್ಚಲ ಸಿನಿಮಾವಾದರೂ ಈಗಾಗಲೇ ಯಶ್ ನಟನೆಯ ಮಾಸ್ಟರ್ ಪೀಸ್ ಚಿತ್ರದಲ್ಲಿ ಮಂಜು ಮಾಂಡವ್ಯ ಜೊತೆ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಅಲ್ಲದೆ ನಿರ್ದೇಶಕ ನರ್ತನ್ ಜೊತೆ ಮಫ್ತಿ ಸಿನಿಮಾದಲ್ಲೂ ಕೆಲಸ ಮಾಡಿದ್ದಾರೆ. ಇದೀಗ ನಿಖಿಲ್ ಸಿನಿಮಾ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಬಡ್ತಿ ಪಡೆದಿದ್ದಾರೆ.

Actor Nikhil Kumar new film with debutant director of Manju Atharva

ಕನ್ನಡ ಸಿನಿಮಾಗಳ ಜೊತೆಗೆ ತಮಿಳು ಸಿನಿಮಾದಲ್ಲೂ ಕೆಲಸ ಮಾಡಿದದ್ದಾರೆ ಮಂಜು ಅಥರ್ವ. ನಿಖಿಲ್ ಹೊಸ ಸಿನಿಮಾ ಪಕ್ಕಾ ಆಕ್ಷನ್ ಥ್ರಿಲ್ಲರ್ ಸಿನಿಮಾವಾಗಿದ್ದು, ಇನ್ನು ಟೈಟಲ್ ಫೈನಲ್ ಆಗಿಲ್ಲ. ಚಿತ್ರಕ್ಕೆ ಕೆವಿಎನ್ ಸಂಸ್ಥೆ ಬಂಡವಾಳ ಹೂಡುತ್ತಿದೆ.

ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಸದ್ಯ ಪ್ರಿ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿ ಇರುವ ಸಿನಿಮಾ ತಂಡ ಆಗಸ್ಟ್ ತಿಂಗಳಿಂದ ಚಿತ್ರೀಕರಣ ಪ್ರಾರಂಭ ಮಾಡುವ ಸಾಧ್ಯತೆ ಇದೆ. ಅಂದಹಾಗೆ ನಿಖಿಲ್ ಸದ್ಯ ರೈಡರ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದೆ. ಈಗಾಗಲೇ ಟೀಸರ್ ಮೂಲಕ ಅಭಿಮಾನಿಗಳ ಮುಂದೆ ಬಂದಿರುವ ನಿಖಿಲ್ ಸಿನಿಮಾ ಬಿಡುಗಡೆಗೆ ಕಾಯುತ್ತಿದ್ದಾರೆ.

Actor Nikhil Kumar new film with debutant director of Manju Atharva

ಜಾಗ್ವರ್ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ನಿಖಿಲ್ ಬಳಿಕ ಸೀತರಾಮ ಕಲ್ಯಾಣ ಮತ್ತು ಕುರುಕ್ಷೇತ್ರ ಸಿನಿಮಾಗಳಲ್ಲಿ ನಟಿಸಿದ್ದಾರೆ. ಇದೀಗ 4ನೇ ಸಿನಿಮಾ ಬಿಡುಗಡೆಗೂ ಮೊದಲೇ ಹೊಸ ಸಿನಿಮಾ ಘೋಷಣೆ ಮಾಡಿದ್ದು, ಅಭಿಮಾನಿಗಳಲ್ಲಿ ನಿರೀಕ್ಷೆ ಹೆಚ್ಚಾಗಿದೆ.

More from Filmibeat

English summary
Kannada Actor Nikhil Kumar new film with debutant director of Manju Atharva.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X