ಹುಟ್ಟುಹಬ್ಬದಂದು ಅಯೋಧ್ಯೆಗೆ ಹೋಗುತ್ತಿರುವ ನಟ ನಿಖಿಲ್ ಕುಮಾರಸ್ವಾಮಿಯಿಂದ ಫ್ಯಾನ್ಸ್‌ಗೆ ಪತ್ರ

ಜನವರಿ 22 ರ ಸೋಮವಾರ ದೇಶದ ಇತಿಹಾಸಲ್ಲಿ ದಾಖಲಾಗುವ ಮಹತ್ವದ ಘಟನೆ ನಡೆಯುತ್ತಿದೆ. ದಶಕಗಳ ಹೋರಾಟದ ಫಲವನ್ನು ಅಂದು ಹಿಂದೂ ಸಮುದಾಯದವರು ಪಡೆಯುತ್ತಿದ್ದು, ಅಯೋಧ್ಯೆಯಲ್ಲಿ ರಾಮಲಲ್ಲನ ಪ್ರಾಣ ಪ್ರತಿಷ್ಠಾಪನೆ ನಡೆಯಲಿದೆ. ವರ್ಷಗಳ ಕಾಲ ತಪಸ್ಸು ಮಾಡುತ್ತಿದ್ದ ಜನರ ಕನಸು ನನಸಾಗಿದೆ. ಇದಕ್ಕಾಗಿ ಭರ್ಜರಿ ಸಿದ್ಧತೆ ನಡೆಯುತ್ತಿದ್ದು, ದೇಶ ವಿದೇಶಗಳ ವಿಶೇಷ ಆಹ್ವಾನಿತರು ಈ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.

ಸಿನಿಮಾ ರಂಗದಿಂದಲೂ ಹಲವು ಮಂದಿ ಭಾಗಿಯಾಗಲಿದ್ದು, ನಟ, ರಾಜಕಾರಣಿ ನಿಖಿಲ್​ ಕುಮಾರ್‌ಗೂ ಕೂಡ ಈ ಮಹತ್ವದ ಕಾರ್ಯಕ್ರಮಕ್ಕೆ ಆಹ್ವಾನ ಬಂದಿದೆ. ವಿಶೇಷವೆಂದರೇ ಬಾಲರಾಮನ ಪ್ರಾಣ ಪ್ರತಿಷ್ಠಾಪನ್ ನಡೆಯುವ ದಿನವೇ ನಟ ನಿಖ್ ಕುಮಾರಸ್ವಾಮಿ ಅವರ ಹುಟ್ಟುಹಬ್ಬ ಕೂಡ ಇದೆ. ಇದೇ ಕಾರಣದಿಂದ ನಿಖಿಲ್ ತಮ್ಮ ಅಭಿಮಾನಿಗಳಿಗೆ ವಿಶೇಷ ಮನವಿ ಪತ್ರ ಬರೆದಿದ್ದಾರೆ.

Actor Nikhil Kumaraswamy To Attend Ram Mandir Inauguration, Cancels his Birthday Celebration

ಅಭಿಮಾನಿಗಳಿ ಪತ್ರ ಬರೆದ ನಿಖಿಲ್ ಕುಮಾರಸ್ವಾಮಿ

ಜಾಗ್ವರ್ ನಟ ನಿಖಿಲ್​ ಕುಮಾರಸ್ವಾಮಿ ತಮ್ಮ ಅಭಿಮಾನಿಗಳು ಮತ್ತು ಮತ್ತು ಪಕ್ಷದ ಕಾರ್ಯಕರ್ತರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಒಂದು ಮುಖ್ಯವಾದ ಸಂದೇಶ ನೀಡಿದ್ದಾರೆ. ಜನವರಿ 22 ರಂದೇ ನಟ ನಿಖಿಲ್ ಹುಟ್ಟುಹಬ್ಬವಿದ್ದು, ಇದೇ ದಿನ ಅವರು ಅಯೋಧ್ಯೆಗೆ ತೆರಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ತಮ್ಮ ಅಭಿಮಾನಿಗಳಿಗೆ ಪತ್ರವನ್ನು ಬರೆದಿದ್ದು, ಅದರಲ್ಲಿ ಭೇಟಿಯಾಗದಿರುವುದಕ್ಕೆ ಕ್ಷಮೆ ಕೇಳಿದ್ದಾರೆ.

"ಪ್ರೀತಿಯ ಅಭಿಮಾನಿಗಳಿಗೆ ನಮಸ್ಕಾರ. ಜನವರಿ 22, ನನ್ನ ಹುಟ್ಟುಹಬ್ಬದ ದಿನ ನಿಮ್ಮನ್ನು ಭೇಟಿಯಾಗಲು ಸಾಧ್ಯವಾಗುತ್ತಿಲ್ಲ. ಕ್ಷಮೆ ಇರಲಿ. ಅಯೋಧ್ಯೆಯ ಶ್ರೀರಾಮ ಮಂದಿರ ಉದ್ಘಾಟನೆಯಲ್ಲಿ ನಾನು ಭಾಗಿಯಾಗಬೇಕಿದೆ. ನೀವೆಲ್ಲರೂ ನೀವಿದ್ದ ಕಡೆಯಿಂದಲೇ ನನ್ನ ಹುಟ್ಟುಹಬ್ಬಕ್ಕೆ ಹರಿಸಿದರೆ ಅದೇ ನನಗೆ ಸಂತೋಷ" ಎಂದು ನಿಖಿಲ್​ ಕುಮಾರಸ್ವಾಮಿ ಪತ್ರದಲ್ಲಿ ತಿಳಿಸಿದ್ದಾರೆ.

Actor Nikhil Kumaraswamy To Attend Ram Mandir Inauguration, Cancels his Birthday Celebration

ಮುಂದುವರಿದು, ​"ನನ್ನ ಹುಟ್ಟುಹಬ್ಬಕ್ಕಾಗಿ ಯಾವುದೇ ದುಂದು ವೆಚ್ಚ ಬೇಡ. ಅದನ್ನೇ ಒಳ್ಳೆಯ ಕಾರ್ಯಕ್ಕೆ ಬಳಸಿ. ಮತ್ತೊಮ್ಮೆ ನಿಮ್ಮ ಬಳಿ ಕ್ಷಮೆ ಕೇಳುತ್ತಾ, ಆದಷ್ಟು ಬೇಗ ಭೇಟಿ ಆಗೋಣ ಎಂದು ತಿಳಿಸುತ್ತೇನೆ. ನಿಮ್ಮ ಪ್ರೀತಿಯ ನಿಖಿಲ್​ ಕುಮಾರ್" ಎಂದು ನಿಖಿಲ್ ತಮ್ಮ ಅಭಿಮಾನಿಗಳಿಗೆ ಮತ್ತು ಪಕ್ಷದ ಕಾರ್ಯಕರ್ತರಿಗೆ ತಿಳಿಸಿದ್ದಾರೆ.

ನಟ ರಿಷಬ್ ಶೆಟ್ಟಿಗೂ ಆಹ್ವಾನ

ಕಾಂತಾರದಿಂದ ಪ್ಯಾನ್ ಇಂಡಿಯಾ ಸ್ಟಾರ್ ಆಗಿರುವ ನಟ, ನಿರ್ದೇಶಕ ರಿಷಬ್ ಶೆಟ್ಟಿಗೂ ಅಯೋಧ್ಯೆ ರಾಮಮಂದಿರ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿದೆ. ಇದಕ್ಕಾಗಿ ನಟ ಭಾವನಾತ್ಮಕವಾಗಿ ಪತ್ರ ಬರೆದು ಧನ್ಯವಾದ ಹೇಳಿದ್ದರು. "ಶ್ರೀರಾಮ ಜಯ ರಾಮ ಜಯ ಜಯ ರಾಮ... ಬಾಲ್ಯದಿಂದಲೂ ನಮ್ಮ ಮನೆಗಳಲ್ಲಿ ರಾಮನಾಮವ ಭಜಿಸುತ್ತಾ, ರಾಮ ಪ್ರೇಮವ ಭುಜಿಸುತ್ತಾ, ಆತನ ಆದರ್ಶಪ್ರಾಯ ಜೀವನದ ಕಥೆಗಳನ್ನು ಗುರು ಹಿರಿಯರಿಂದ ಕೇಳುತ್ತಾ ಬೆಳೆದವರು ನಾವು. ಇಂದು ಆ ಶ್ರೀರಾಮ ತಾನು ಮಗುವಾಗಿ ಆಡಿದ, ಪ್ರಭುವಾಗಿ ಆಳಿದ ಆ ಅಯೋಧ್ಯೆಗೆ ಬರುವಂತೆ ಕರೆ ಕಳಿಸಿದ್ದಾನೆ. ಇದು ನನ್ನ ಪೂರ್ವ ಜನ್ಮದ ಪುಣ್ಯವೇ ಸರಿ! ಶ್ರೀರಾಮನಿಗೆ ಜಯವಾಗಲಿ, ಅಯೋಧ್ಯೆಗೆ ಜಯವಾಗಲಿ" ಎಂದು ಮನದುಂಬಿ ಧನ್ಯವಾದ ತಿಳಿಸಿದ್ದರು.

ಇನ್ನು, ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆಗೆ ಎಲ್ಲಾ ಸಿದ್ಧತೆಗಳು ನಡೆದಿದ್ದು, ಜನವರಿ 22 ರಂದು ಸಮಾರಂಭ ನಡೆಯಲಿದೆ. ಕಾರ್ಯಕ್ರಮಕ್ಕೆ ಸಿನಿಮಾರಂಗ, ಕ್ರೀಡೆ, ಕಲಾವಿದರು, ವಿದೇಶದ ಅತಿಥಿಗಳು ಭಾಗಿಯಾಗಲಿದ್ದಾರೆ. ಬಾಲಿವುಡ್ ನಟ ಅಮಿತಾಬ್ ಬಚ್ಚನ್, ರಜನಿಕಾಂತ್, ಅನುಷ್ಕಾ ಶರ್ಮಾ, ವಿರಾಟ್ ಕೊಹ್ಲಿ, ಎಂಎಸ್ ಧೋನಿ, ಸಚಿನ್, ಆಲಿಯಾ ಭಟ್, ರಣಬೀರ್ ಕಪೂರ್, ಪ್ರಭಾಸ್, ರಾಮ್ ಚರಣ್, ಯಶ್, ಕಂಗನಾ ರನೌತ್ ಆಯುಷ್ಮಾನ್ ​ಖುರಾನಾ ಸೇರಿದಂತೆ ಹಲವರು ಸಾಕ್ಷಿಯಾಗಲಿದ್ದಾರೆ.

More from Filmibeat

English summary
Nikhil Kumaraswamy cancels his birthday celebration with fans.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X