ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಸಹೋದರನ ಮನೆಯಲ್ಲಿ ಕೋಟ್ಯಂತರ ರೂ.ಮೌಲ್ಯದ ಚಿನ್ನಾಭರಣ ಕಳ್ಳತನ

ಪಶ್ಚಿಮ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್‌ನಲ್ಲಿರುವ ಸ್ಯಾಂಡಲ್‌ವುಡ್ ನಟ, ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಅವರ ಸಹೋದರನ ಮನೆಯಲ್ಲಿ ಕಳ್ಳತನ ನಡೆದಿದೆ. ರಾಕ್ ಲೈನ್ ವೆಂಕಟೇಶ್ ತಮ್ಮ ಭ್ರಮರೇಶ್ ಅವರ ಮನೆಗೆ ನುಗ್ಗಿದ ದುಷ್ಕರ್ಮಿಗಳು ಮನೆಯಲ್ಲಿ ಯಾರು ಇಲ್ಲದ ವೇಳೆ ಕಳ್ಳತನ ಮಾಡಿದ್ದಾರೆ. ಶನಿವಾರ ರಾತ್ರಿ ಕಳ್ಳತನ ನಡೆದಿರುವ ಶಂಕೆ ವ್ಯಕ್ತವಾಗಿದೆ.

ಭಾನುವಾರ ಬೆಳಗ್ಗೆ ಪ್ರವಾಸದಿಂದ ಮನೆಗೆ ಬಂದ ಭ್ರಮರೇಶ್ ಮತ್ತು ಕುಟುಂಬಕ್ಕೆ ಕಳ್ಳತನದ ಘಟನೆ ಬೆಳಕಿಗೆ ಬಂದಿದೆ. ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳು, ಬೆಳ್ಳಿ ವಸ್ತುಗಳು ಮತ್ತು ನಗದು ಸೇರಿದಂತೆ ಬೆಲೆಬಾಳುವ ವಸ್ತುಗಳನ್ನು ಕಳವು ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Actor, producer Rockline Venkateshs brother Bramareshs house burgled

ಭ್ರಮರೇಶ್ ಮನೆಯಲ್ಲಿದ್ದ 5 ಕೆ.ಜಿ ಚಿನ್ನ ಕದ್ದು ಕಳ್ಳರು ಕೈಚಳಕ ತೋರಿಸಿದ್ದಾರೆ. ಮನೆಯವರೆಲ್ಲಾ ವಿದೇಶಕ್ಕೆ ತೆರಳಿದ್ದ ವೇಳೆ ಕಳ್ಳತನ ನಡೆದಿದೆ. ಈ ಸಂಬಂಧ ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಭ್ರಮರೇಶ್ ದೂರು ನೀಡಿದ ತಕ್ಷಣ ಪೊಲೀಸರು ಕಾರ್ಯನಿರತರಾಗಿದ್ದು, ಸಿಸಿಟಿವಿ ಪರಿಶೀಲನೆ ನಡೆಸುತ್ತಿದ್ದಾರೆ.

ಮನೆಯಲ್ಲಿ ಏನೇನು ಕಳ್ಳತನವಾಗಿದೆ ಎಂಬ ಬಗ್ಗೆ ಮತ್ತು ಘಟನೆ ಬಗ್ಗೆ ಮನೆಯವರಿಂದ ಮಾಹಿತಿ ಪಡೆಯುತ್ತಿರುವ ಮಹಾಲಕ್ಷ್ಮೀ ಲೇಔಟ್ ಪೊಲೀಸರು ಆರೋಪಿಗಳಿಗಾಗಿ ತೀವ್ರ ಶೋಧ ಆರಂಭಿಸಿದ್ದಾರೆ.

ಹುಲಿ ಉಗುರು ಪ್ರಕರಣದಲ್ಲಿ ರಾಕ್‌ಲೈನ್ ಹೆಸರು

ಬಿಗ್ ಬಾಸ್ ಕನ್ನಡ ಸೀಸನ್ ಹತ್ತರ ಸ್ಪರ್ಧಿ ವರ್ತೂರು ಸಂತೋಷ್ ಹುಲಿ ಉಗುರು ಪ್ರಕರಣದ ಬಳಿಕ ನಟರಾದ ಜಗ್ಗೇಶ್, ದರ್ಶನ್ ತೂಗುದೀಪ ಮತ್ತು ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಅವರು ಹುಲಿ ಉಗುರುಗಳಿಂದ ಮಾಡಿದ ಲಾಕೆಟ್‌ಗಳನ್ನು ಧರಿಸಿರುವ ಚಿತ್ರಗಳು ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದವು. ಇದಾದ ನಂತರ ಕರ್ನಾಟಕ ಅರಣ್ಯ ಇಲಾಖೆ ಅಧಿಕಾರಿಗಳು ನಟರು, ನಿರ್ಮಾಪಕರ ಮನೆಗಳ ಮೇಲೆ ದಾಳಿ ನಡೆಸಿದ್ದರು.

ರಾಕ್​ಲೈನ್​ ವೆಂಕಟೇಶ್​ ಸಹ ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದ ಫೋಟೋ ವೈರಲ್ ಆಗಿದ್ದ ಕಾರಣ ಅವರಿಗೂ ಅರಣ್ಯ ಇಲಾಖೆ ಅಧಿಕಾರಿಗಳು ನೋಟಿಸ್​ ನೀಡಿ, ಮನೆಯಲ್ಲಿ ಪರಿಶೀಲನೆ ನಡೆಸಿದ್ದರು. ಅಧಿಕಾರಿಗಳು ಭೇಟಿ ನೀಡಿದ್ದಾಗ ರಾಕ್‌ಲೈನ್ ವೆಂಕಟೇಶ್​ ಅವರು ವಿದೇಶಕ್ಕೆ ತೆರಳಿದ್ದರು.

ಇನ್ನು, ಹುಲಿ ಉಗುರು ಪೆಂಡೆಂಟ್ ಧರಿಸಿದ ಆರೋಪದ ಕುರಿತು ತನಿಖೆ ನಡೆಸಲು ಪ್ರತ್ಯೇಕ ತಂಡಗಳನ್ನು ರಚಿಸಲಾಗಿದ್ದು, ಹುಲಿ ಉಗುರುಗಳು ನಿಜವೆಂದು ಕಂಡುಬಂದಲ್ಲಿ, ಕರ್ನಾಟಕ ವನ್ಯಜೀವಿ ಸಂರಕ್ಷಣಾ ಕಾಯ್ದೆ 1872 ರ ಪ್ರಕಾರ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು.

ಈಗಾಗಲೇ ತನಿಖೆಗಾಗಿ ಜಗ್ಗೇಶ್ ಅವರ ಪತ್ನಿ ಈಗಾಗಲೇ ಪೆಂಡೆಂಟ್ ಅನ್ನು ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ. ನಿಖಿಲ್ ಕುಮಾರಸ್ವಾಮಿ ಅವರ ಪೆಂಡೆಂಟ್ ನಕಲಿ ಎಂದು ನಿಖಿಲ್ ಮತ್ತು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಈ ಪ್ರಕರಣ ಆರಂಭಕ್ಕೆ ಕಾರಣವಾದ ವರ್ತೂರು ಸಂತೋಷ್ ಮತ್ತೆ ಬಿಗ್ ಬಾಸ್ ಮನೆಗೆ ಕಾಲಿರಿಸಿದ್ದಾರೆ.

More from Filmibeat

English summary
Rockline Venkatesh's brother Bramaresh's house burgled.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X