»   » ನಟ ರಾಘವೇಂದ್ರ ರಾಜ್ ಕುಮಾರ್ ಆಸ್ಪತ್ರೆಗೆ ದಾಖಲು

ನಟ ರಾಘವೇಂದ್ರ ರಾಜ್ ಕುಮಾರ್ ಆಸ್ಪತ್ರೆಗೆ ದಾಖಲು

Posted By:
Subscribe to Filmibeat Kannada
Raghavendra Rajkumar
ನಟ, ನಿರ್ಮಾಪಕ ರಾಘವೇಂದ್ರ ರಾಜ್ ಕುಮಾರ್ (48) ಅವರನ್ನು ಬುಧವಾರ (ಅ.16) ಬೆಳಗ್ಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದಾಶಿವನಗರದ ಅವರ ನಿವಾಸದಲ್ಲಿ ಜಿಮ್ ನಲ್ಲಿ ವರ್ಕ್ ಔಟ್ ಮಾಡುತ್ತಿರಬೇಕಾದರೆ ಅವರು ಕುಸಿದು ಬಿದ್ದ ಕಾರಣ ಕೂಡಲೆ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು.

ಸದ್ಯಕ್ಕೆ ಅವರು ಯಶವಂತಪುರ ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ಮಧು ಬಂಗಾರಪ್ಪ ಅವರು ಆಸ್ಪತ್ರೆಗೆ ಭೇಟಿ ನೀಡಿ ರಾಘಣ್ಣನ ಯೋಗಕ್ಷೇಮ ವಿಚಾರಿಸಿದ್ದಾರೆ. ಶೀಘ್ರದಲ್ಲೇ ಈ ಬಗ್ಗೆ ರಾಜ್ ಕುಟುಂಬ ಮಾಹಿತಿ ನೀಡಲಿದೆ.

ಸದಾ ಲವಲವಿಕೆಯಿಂದ ಪುಟಿಯುತ್ತಿದ್ದ ರಾಘಣ್ಣ ಇದ್ದಕ್ಕಿದ್ದಂತೆ ಕುಸಿದು ಬೀಳಲು ಕಾರಣ ಏನಿರಬಹುದು ಎಂದು ಅವರ ಅಭಿಮಾನಿಗಳು ಆತಂಕಕ್ಕೀಡಾಗಿದ್ದಾರೆ. ಇದೀಗ ತಾನೆ ಬಂದ ಸುದ್ದಿಯ ಪ್ರಕಾರ, ಅವರಿಗೆ ಶಸ್ತ್ರ ಚಿಕಿತ್ಸೆಯನ್ನೂ ಮಾಡಲಾಗುತ್ತಿದೆ.

ಹಲವು ವರ್ಷಗಳಿಂದ ಹೃದಯ ಸಂಬಂಧಿ ಕಾಯಿಲೆಯಿಂದ ರಾಘವೇಂದ್ರ ರಾಜ್ ಕುಮಾರ್ ಬಳಲುತ್ತಿದ್ದರು. ಎದೆನೋವಿನಿಂದ ರಾಘಣ್ಣ ಕುಸಿದು ಬಿದ್ದಿರುವ ಸಾಧ್ಯತೆಗಳು ಇವೆ. ಸುದ್ದಿ ತಿಳಿಯುತ್ತಿದ್ದಂತೆ ಅಭಿಮಾನಿಗಳು ಆಸ್ಪತ್ರೆ ಬಳಿಗೆ ದೌಡಾಯಿಸುತ್ತಿದ್ದಾರೆ. ರಾಘಣ್ಣನ ಆರೋಗ್ಯ ಸ್ಥಿತಿಗತಿ ಬಗ್ಗೆ ಮಧ್ಯಾಹ್ನ ಪತ್ರಿಕಾಗೋಷ್ಠಿಯಲ್ಲಿ ವಿವರಗಳನ್ನು ನೀಡಲಾಯಿತು. (ಒನ್ಇಂಡಿಯಾ ಕನ್ನಡ)

English summary
Kannada actor Raghavendra Rajkumar has been admitted to Columbia Asia Hospital on 16th October. He collapsed while exercising at his residence in the morning. He was suffering from heart related ailment for some time.
Please Wait while comments are loading...

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada