ಹಿರಿಯ ನಟ ರಾಘಣ್ಣ ಕೊಲಂಬಿಯಾ ಆಸ್ಪತ್ರೆಗೆ ದಾಖಲು

ಕನ್ನಡದ ಹಿರಿಯ ನಟ, ಡಾ ರಾಜ್ ಕುಮಾರ್ ಪುತ್ರ ರಾಘವೇಂದ್ರ ರಾಜ್ ಕುಮಾರ್ ಅವರ ಆರೋಗ್ಯದಲ್ಲಿ ವ್ಯತ್ಯಾಸ ಉಂಟಾದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಉಸಿರಾಟದಲ್ಲಿ ಲಘು ಸಮಸ್ಯೆಯಾದ ಕಾರಣ ರಾಜಾಜಿನಗರದ ಕೊಲಂಬಿಯಾ ಆಸ್ಪತ್ರೆಗೆ ಕರೆದುಕೊಂಡು ಬಂದು ಚಿಕಿತ್ಸೆ ನೀಡಲಾಗುತ್ತಿದೆ. ಸಂಜೆ 6 ಗಂಟೆ ವೇಳೆಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ.

ಪ್ರಸ್ತುತ, ರಾಘಣ್ಣ ಆರೋಗ್ಯವಾಗಿದ್ದು, ಗಂಭೀರ ಸಮಸ್ಯೆಯಿಲ್ಲ ಎಂದು ತಿಳಿದಿದೆ. ಸಹೋದರ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಸುದ್ದಿ ತಿಳಿಯುತ್ತಿದ್ದಂತೆ ಶಿವಣ್ಣ, ಪುನೀತ್ ರಾಜ್ ಕುಮಾರ್ ಸಹ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.

 Actor Raghavendra Rajkumar Admitted To Hospital

ಈ ಮುಂಚೆಯೂ ರಾಘವೇಂದ್ರ ರಾಜ್ ಕುಮಾರ್ ಈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ರಾಘಣ್ಣ ಆರೋಗ್ಯ ಸುಧಾರಿಸಿದ್ದು, ಇಂದು ತಡರಾತ್ರಿ ಅಥವಾ ಬೆಳಗ್ಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ.

Recommended Video

ವೈರಲ್ ಆಗೋಯ್ತು ರಾಬರ್ಟ್ ಚಿತ್ರದ ಡಿ ಬಾಸ್ ಡೈಲಾಗ್ | Filmibeat Kannada

ಅಂದ್ಹಾಗೆ, ರಾಘವೇಂದ್ರ ರಾಜ್ ಕುಮಾರ್ ಅವರು ಬೆಳಕು ಚಿತ್ರದಲ್ಲಿ ನಟಿಸುತ್ತಿದ್ದಾರೆ. ಇತ್ತೀಚಿಗಷ್ಟೆ ಚಿತ್ರದ ಮುಹೂರ್ತ ಜರುಗಿತ್ತು. ಚಿತ್ರೀಕರಣ ಸಹ ಆರಂಭವಾಗಿತ್ತು.

More from Filmibeat

English summary
Kannada Actor Raghavendra Rajkumar Admitted to colombia Hospital in rajajinagar.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X