For Quick Alerts
  ALLOW NOTIFICATIONS  
  For Daily Alerts

  ಕೊರೊನಾ ಲಸಿಕೆ ಹಾಕಿಸಿಕೊಂಡ ಹಿರಿಯ ನಟ ರಾಘವೇಂದ್ರ ರಾಜ್ ಕುಮಾರ್

  |

  ದೇಶದಲ್ಲಿ ಅನೇಕರು ಕೊರೊನಾ ಲಸಿಕೆ ಹಾಕಿಸಿಕೊಳ್ಳುತ್ತಿದ್ದಾರೆ. ಭಾರತದ ಅನೇಕ ಸಿನಿ ಕಲಾವಿದರು ಸಹ 2ನೇ ಹಂತದ ಕೊರೊನಾ ಲಸಿಕೆ ಅಭಿಯಾನದಲ್ಲಿ ಲಸಿಕೆ ಪಡೆಯುತ್ತಿದ್ದಾರೆ. ಈ ಮೂಲಕ ಅಭಿಮಾನಿಗಳಿಗೂ ಲಸಿಕೆ ಹಾಕಿಸಿಕೊಳ್ಳಿ ಎನ್ನುವ ಸಂದೇಶ ರವಾನಿಸುತ್ತಿದ್ದಾರೆ.

  ಚಂದನವನದ ಹಿರಿಯ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಕೊರೊನಾ ಲಸಿಕೆ ಹಾಕಿಸಿಕೊಂಡ ಬೆನ್ನಲ್ಲೇ ಈಗ ಹಿರಿಯ ನಟ ಮತ್ತು ನಿರ್ಮಾಪಕ ರಾಘವೇಂದ್ರ ರಾಜ್ ಕುಮಾರ್ ಸಹ ಕೋವಿಡ್ ಲಸಿಕೆ ಹಾಕಿಸಿಕೊಂಡಿದ್ದಾರೆ. ಬೆಂಗಳೂರಿನ ಎಂ ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಲಸಿಕೆ ಪಡೆದ ರಾಘಣ್ಣ, 'ಸರ್ಕಾರ, ದೊಡ್ಡವರು ಲಸಿಕೆ ಹಾಕಿಸಿಕೊಳ್ಳಿ ಎಂದು ಹೇಳುತ್ತಿದ್ದಾರೆ. ಹಾಗಾಗಿ ನಾನು ಹಾಕಿಸಿಕೊಂಡೆ. ನೀವು ಲಸಿಕೆ ಹಾಕಿಸಿಕೊಳ್ಳಿ' ಎಂದು ಹೇಳಿದ್ದಾರೆ.

  ಕೊರೊನಾ ಲಸಿಕೆ ಪಡೆದ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್

  ರಾಘವೇಂದ್ರ ರಾಜ್ ಕುಮಾರ್ ಇತ್ತೀಚಿಗಷ್ಟೆ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದರು. ಚಿತ್ರೀಕರಣದಲ್ಲಿದ್ದ ರಾಘವೇಂದ್ರ ರಾಜ್ ಕುಮಾರ್ ಅವರಿಗೆ ಉಸಿರಾಟ ಸಮಸ್ಯೆ ಕಾಣಿಸಿಕೊಂಡ ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

  ಎರಡು ದಿನಗಳ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದ ರಾಘಣ್ಣ ವಿಶ್ರಾಂತಿಯಲ್ಲಿದ್ದರು. ಇದೀಗ ಮತ್ತೆ ಚಿತ್ರೀಕರಣದಲ್ಲಿ ನಿರತರಾಗಿರುವ ರಾಘವೇಂದ್ರ ರಾಜ್ ಕುಮಾರ್ ಸದ್ಯ ಕೊರೊನಾ ಲಸಿಕೆ ಪಡೆದಿದ್ದಾರೆ.

  ಇನ್ನು ಹಿರಿಯ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಮೊದಲ ಬಾರಿಗೆ ಲಸಿಕೆ ಪಡೆದಿದ್ದು, ಫೋಟೋವನ್ನು ಹಂಚಿಕೊಂಡಿದ್ದಾರೆ. ಕೆಲವು ದಿನಗಳ ಮೊದಲು ಕನ್ನಡದ ಹಿರಿಯ ನಟ ಅನಂತ್ ನಾಗ್ ಕೂಡ ಕೊರೊನಾ ಲಸಿಕೆ ಹಾಕಿಸಿಕೊಂಡಿದ್ದರು.

  ಡಿ ಬಾಸ್ ಬಗ್ಗೆ ಯಾರಿಗೂ ಗೊತ್ತಿಲ್ಲದ ಸೀಕ್ರೆಟ್ ಬಿಚ್ಚಿಟ್ಟ ರಕ್ಷಿತಾ | Filmibeat Kannada

  ಚಂದನವನದಲ್ಲಿ ಕೊರೊನಾ ಲಸಿಕೆ ಪಡೆದ ಮೊದಲ ಕಲಾವಿದ ಅನಂತ್ ನಾಗ್. ಅವರು ಲಸಿಕೆ ಪಡೆಯುತ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇತ್ತೀಚಿಗೆ ಅನೇಕ ಹಿರಿಯ ಕಲಾವಿದರೂ ಲಸಿಕೆ ಪಡೆಯುವ ಜೊತೆಗೆ ಎಲ್ಲರೂ ಲಸಿಕೆ ಹಾಕಿಸಿಕೊಳ್ಳಿ ಎಂದು ಹೇಳುತ್ತಿದ್ದಾರೆ.

  English summary
  Actor Raghavendra Rajkumar gets a Covid Vaccine jab at Ramaiah Hospital in bengaluru.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X