For Quick Alerts
  ALLOW NOTIFICATIONS  
  For Daily Alerts

  ರಾಘವೇಂದ್ರ ರಾಜ್ ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರ

  By Rajendra
  |

  ನಟ, ನಿರ್ಮಾಪಕ ರಾಘವೇಂದ್ರ ರಾಜ್ ಕುಮಾರ್ ಅವರನ್ನು ಯಶವಂತಪುರದ ಕೊಲಂಬಿಯಾ ಏಷಿಯಾ ಆಸ್ಪತ್ರೆಯಿಂದ ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಅವರ ಆರೋಗ್ಯದಲ್ಲಿ ಸಾಕಷ್ಟು ಚೇತರಿಕೆ ಕಂಡುಬಂದಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.

  ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ರಾಘಣ್ಣ ಅವರನ್ನು ಎರಡು ದಿನಗಳ ಹಿಂದಷ್ಟೇ ಜನರಲ್ ವಾರ್ಡ್ ಗೆ ಸ್ಥಳಾಂತರ ಮಾಡಲಾಗಿತ್ತು. ಬುಧವಾರ (ಅ.23) ಅವರನ್ನು ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರ ಮಾಡಿದ್ದಾರೆ.

  ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ಕೆಲವೊಂದು ಸೌಲಭ್ಯಗಳಿಲ್ಲದ ಕಾರಣ ಅವರನ್ನು ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತ ಮಾಡಲಾಗಿದೆ ಎನ್ನುತ್ತವೆ ಮೂಲಗಳು. ಬುಧವಾರ (ಅ.16) ಅವರು ಸದಾಶಿವನಗರದ ತಮ್ಮ ನಿವಾಸದಲ್ಲಿ ಟ್ರೆಡ್ ಮಿಲ್ ವ್ಯಾಯಾಮ ಮಾಡುತ್ತಿರಬೇಕಾದರೆ ರಾಘಣ್ಣ ಕುಸಿದು ಬಿದ್ದಿದ್ದರು.

  ರಾಘಣ್ಣ ಆರೋಗ್ಯದಲ್ಲಿ ಸಾಕಷ್ಟು ಚೇತರಿಕೆ ಕಂಡುಬಂದಿದೆ. ಇಂದು ಬೆಳಗ್ಗೆಯೂ ಅವರು ವಾಕ್ ಮಾಡಿದರು. ಅವರು ಚೆನ್ನಾಗಿಯೇ ಇದ್ದಾರೆ. ಅಭಿಮಾನಿಗಳು ಏನೂ ಆತಂಕಪಡುವ ಅಗತ್ಯವಿಲ್ಲ ಎಂದು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ತಿಳಿಸಿದ್ದಾರೆ. (ಏಜೆನ್ಸೀಸ್)

  English summary
  Kannada actor, producer Raghavendra Rajkumar, admitted to a private hospital recently for treatment of brain hemorrhage, was shifted to a mulch-speciality hospital (Manipal Hospital).

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X