ರಕ್ಷಿತ್ ಶೆಟ್ಟಿಗೆ ಹುಟ್ಟುಹಬ್ಬದ ಸಂಭ್ರಮ: '777 ಚಾರ್ಲಿ' ಕಡೆಯಿಂದ ಸಿಕ್ತಿದೆ ವಿಶೇಷ ಗಿಫ್ಟ್

ಸ್ಯಾಂಡಲ್ ವುಡ್ ನ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. 37ನೇ ವಸಂತಕ್ಕೆ ಕಾಲಿಟ್ಟಿರುವ ರಕ್ಷಿತ್ ಶೆಟ್ಟಿ ಸಿಂಪಲ್ ಆಗಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಕೊರೊನಾ ಲಾಕ್ ಡೌನ್ ಕಾರಣ ಅದ್ದೂರಿ ಹುಟ್ಟುಹಬ್ಬ, ಸಂಭ್ರಮಕ್ಕೆ ಬ್ರೇಕ್ ಬಿದ್ದಿದೆ.

Recommended Video

777 Charlie Rakshit shetty character revealed | Teaser Breakdown | Pushkar Mallikarjunaiah

ಆದರೆ ಮನೆಯಲ್ಲಿಯೆ ಕುಟುಬಂದ ಜೊತೆ ರಕ್ಷಿತ್ ಕೇಕ್ ಕತ್ತರಿಸಿ ಸಿಂಪಲ್ ಆಗಿ ಹುಟ್ಟುಹಬ್ಬ ಆಚಿಸಿಕೊಂಡಿದ್ದಾರೆ. ರಕ್ಷಿತ್ ಜನ್ಮದಿನಾಚರಣೆಯ ಫೋಟೋಗಳು ಸಾಮಾಜಿಕ ಜಾಲತಾಣದಜಲ್ಲಿ ವೈರಲ್ ಆಗಿದೆ.

ರಕ್ಷಿತ್ ಶೆಟ್ಟಿಗೆ ಅಭಿಮಾನಿಗಳು ಮತ್ತು ಚಿತ್ರರಂಗದ ಗಣ್ಯರು ಸಾಮಾಜಿಕ ಜಾಲತಾಣದಲ್ಲಿ ಶುಭಹಾರೈಸುತ್ತಿದ್ದಾರೆ. ಇನ್ನೂ ವಿಶೇಷ ಅಂದರೆ ಹುಟ್ಟುಹಬ್ಬದ ಪ್ರಯುಕ್ತ ಇಂದು ರಕ್ಷಿತ್ ಅಭಿನಯದ ಬಹುನಿರೀಕ್ಷೆಯ 777 ಚಾರ್ಲಿ ಸಿನಿಮಾದ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಗಿಫ್ಟ್ ಸಿಗಲಿದೆ.

Actor Rakshith Shetty Celebrating His Birthday

ಈಗಾಗಲೆ ಚಿತ್ರದ ಪೋಸ್ಟರ್ ಒಂದು ರಿಲೀಸ್ ಆಗಿದೆ. ನಾಯಿ ಮತ್ತು ಮನುಷ್ಯನ ಭಾವನಾತ್ಮಕ ಸಂಬಂಧದ ಬಗ್ಗೆ ಇರುವ ಸಿನಿಮಾ ಇದಾಗಿದ್ದು, ಚಿತ್ರದಲ್ಲಿ ರಕ್ಷಿತ್ ಶೆಟ್ಟಿ ಧರ್ಮ ಎನ್ನುವ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇಂದು ಹುಟ್ಟುಹಬ್ಬದ ಪ್ರಯುಕ್ತ ಧರ್ಮನ ಜೀವನ ಎನ್ನುವ ಮೇಕಿಂಗ್ ವಿಡಿಯೋ ರಿಲೀಸ್ ಆಗಲಿದೆ.

Actor Rakshith Shetty Celebrating His Birthday

777 ಚಾರ್ಲಿ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ಚಿತ್ರಕ್ಕೆ ಕರಣ್ ರಾಜ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಮೈಸೂರು ಹಾಗೂ ಉತ್ತರ ಪ್ರದೇಶದ ಕೆಲವು ಶೂಟಿಂಗ್ ದೃಶ್ಯ ಬಾಕಿಯಿದೆಯಂತೆ. ಪೋಸ್ಟರ್ ಗಳ ಮೂಲಕವೇ ಭಾರಿ ನಿರೀಕ್ಷೆ ಮೂಡಿಸಿರುವ ಚಾರ್ಲಿ ಪರಿಸ್ಥಿತಿ ಸುಧಾರಿಸಿದ ನಂತರ ಚಿತ್ರ ಚಿತ್ರಮಂದಿರಕ್ಕೆ ಎಂಟ್ರಿ ಕೊಡಲಿದೆ. ವಿಶೇಷ ಅಂದರೆ ಸಿನಿಮಾ ಕನ್ನಡ ಜೊತೆ ತಮಿಳು, ತೆಲುಗು ಮತ್ತು ಹಿಂದಿಯಲ್ಲಿಯೂ ರಿಲೀಸ್ ಆಗಲಿದೆ.

More from Filmibeat

English summary
Kannada Actor Rakshith Shetty celebrating his birthday. Rakshith starrer charlie 777 making video release for his birthday.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X