ಡಾ ವಿಷ್ಣುವರ್ಧನ್ ಪ್ರಶಸ್ತಿ ಸ್ವೀಕರಿಸಲಿದ್ದಾರೆ ರಮೇಶ್ ಭಟ್

Recommended Video

ಡಾ ವಿಷ್ಣುವರ್ಧನ್ ಪ್ರಶಸ್ತಿಯನ್ನ ಸ್ವೀಕರಿಸಲಿದ್ದಾರೆ ಕನ್ನಡದ ಈ ಹಿರಿಯ ನಟ | FILMIBEAT KANNADA

ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ವಿಷ್ಣು ಸೇನಾ ಸಮಿತಿಯ ಸಹಯೋಗದಲ್ಲಿ ಪ್ರತಿ ವರ್ಷ ನೀಡುವ ಅಭಿನವ ಬಾರ್ಗವ ಡಾ.ವಿಷ್ಣುವರ್ಧನ್ ಪ್ರಶಸ್ತಿಯನ್ನ ಈ ಬಾರಿ ಕನ್ನಡದ ಹಿರಿಯ ನಟ ರಮೇಶ್ ಭಟ್ ಅವರಿಗೆ ನೀಡಲಾಗುತ್ತಿದೆ.

ಇಂದು ಸಂಜೆ (ಅಕ್ಟೋಬರ್ 16) 5 ಕ್ಕೆ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತು ಕಚೇರಿಯ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಸಾರಿಗೆ ಸಚಿವ ಡಿಸಿ ತಮ್ಮಣ್ಣ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಶ್ರೀ ಮನು ಬಳಿಗಾರ್ ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಡಾ ವಿಷ್ಣು ಸೇನಾ ಸಮಿತಿ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ ಅವರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

Actor Ramesh bhat will honor dr vishnuvardhan award

ಕಳೆದ ಐದು ವರ್ಷಗಳಿಂದ ಕನ್ನಡ ಸಾಹಿತ್ಯ ಪರಿಷತ್ ಡಾ. ವಿಷ್ಣುವರ್ಧನ್ ಅವರ ಹೆಸರಿನಲ್ಲಿ ಪ್ರಶಸ್ತಿಯನ್ನ ನೀಡುತ್ತಿದ್ದು, ಮೊದಲ ವರ್ಷ ಎಸ್.ಪಿ ಬಾಲಸುಬ್ರಮಣ್ಯಂರವರಿಗೆ ನಂತರ ರೆಬಲ್ ಸ್ಟಾರ್ ಡಾ.ಅಂಬರೀಶ್, ಹಿರಿಯ ನಟಿ ಲೀಲಾವತಿ ಹಾಗೂ ನಿರ್ದೇಶಕ ಗಿರೀಶ್ ಕಾಸರವಳ್ಳಿ ಅವರಿಗೆ ವಿಷ್ಣುವರ್ಧನ್ ಪ್ರಶಸ್ತಿ ನೀಡಲಾಗಿತ್ತು. ಈ ಬಾರಿ ಹಿರಿಯ ನಟ ರಮೇಶ್ ಭಟ್ ಅವರಿಗೆ ವಿಷ್ಣುವರ್ಧನ್ ಪ್ರಶಸ್ತಿ ನೀಡಲಾಗುತ್ತಿದೆ.

ರಮೇಶ್ ಭಟ್ ಕುರಿತು

ರಮೇಶ್ ಭಟ್ ಕನ್ನಡ ಚಲನಚಿತ್ರರಂಗದ ಪ್ರಮುಖ ನಟರು. ನಾಯಕ ನಟ, ಪೋಷಕ ನಟ, ಖಳನಟ, ಹಾಸ್ಯನಟ ಹೀಗೆ ಎಲ್ಲಾ ರೀತಿಯ ಪಾತ್ರಗಳಿಗೂ ಜೀವ ತುಂಬಿರುವ ಕಲಾವಿದ. ರಂಗಭೂಮಿ ಕಲಾವಿದನಾಗಿದ್ದ ರಮೇಶ್ ಭಟ್ 1990ರಲ್ಲಿ ದೂರದರ್ಶನದಲ್ಲಿ ಪ್ರಸಾರವಾಗುತ್ತಿದ್ದ 'ಕ್ರೇಜಿ ಕರ್ನಲ್' ಎಂಬ ಧಾರಾವಾಹಿಯಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡರು. ಈ ಮೂಲಕ ಟಿವಿ ಕಿರುತೆರೆಗಳಲ್ಲಿ ಕಾಣಿಸಿಕೊಳ್ಳ ತೊಡಗಿದರು.

Actor Ramesh bhat will honor dr vishnuvardhan award

ಶಂಕರ್ ನಾಗ್ ಅವರು ನಿರ್ದೇಶನದಲ್ಲಿ ಮೂಡಿಬಂದ "ಮಾಲ್ಗುಡಿ ಡೇಸ್" ಧಾರಾವಾಹಿನಲ್ಲೂ ಇವರ ಪಾತ್ರವಿದೆ. ಇವರು ನಿರ್ದೇಶನದ 'ಪರಮೇಶಿ ಪ್ರೇಮ ಪ್ರಸಂಗ' ಚಿತ್ರ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿತ್ತು. ನಂತರ ಮಿಂಚಿನ ಓಟ, ನೋಡಿ ಸ್ವಾಮಿ ನಾವು ಇರೋದೇ ಹೀಗೆ, ಗಣೇಶ ಸುಬ್ರಮಣ್ಯ ಇನ್ನು ಅನೇಕ ಕನ್ನಡ ಚಿತ್ರಗಳಲ್ಲಿ ತೆರೆಯ ಮೇಲೆ ಕಾಣಿಸಿಕೊಂಡಿದ್ದಾರೆ.

ರಮೇಶ್ ಭಟ್ ಗೆ ಲಭಿಸಿದ ಪ್ರಶಸ್ತಿಗಳು

ಕರ್ನಾಟಕ ರಾಜೋತ್ಸವ ಪ್ರಶಸ್ತಿ - 2010
ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ - ಅತ್ಯುತ್ತಮ ಸಹಾಯಕ ಪಾತ್ರ - ಉಯ್ಯಾಲೆ(2010-11)
ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ - ಅತ್ಯುತ್ತಮ ಸಹಾಯಕ ಪಾತ್ರ - ಮನ ಮಂಥನ(2015)

More from Filmibeat

English summary
Kannada senior actor Ramesh bhat To Honor Dr vishnuvardhan Awrad From Kannada Sahithya Parishath With Vishnu Sena Samithi.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X