»   » ಶಿವಣ್ಣನ ಜೊತೆ ಸಿನಿಮಾ ನೋಡುವ ಚಾನ್ಸ್ ಮಿಸ್ ಮಾಡ್ಕೋಬೇಡಿ.!

ಶಿವಣ್ಣನ ಜೊತೆ ಸಿನಿಮಾ ನೋಡುವ ಚಾನ್ಸ್ ಮಿಸ್ ಮಾಡ್ಕೋಬೇಡಿ.!

Posted By:
Subscribe to Filmibeat Kannada

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಜೊತೆ ಸಿನಿಮಾ ನೋಡುವ ಗೋಲ್ಡನ್ ಚಾನ್ಸ್ ನಿಮಗೆ ಸಿಗಲಿದೆ. ಶಿವಣ್ಣ ಅಭಿನಯದ 'ಬಂಗಾರ ಸನ್ ಆಫ್ ಬಂಗಾರದ ಮನುಷ್ಯ' ಚಿತ್ರ ರಾಜ್ಯಾದ್ಯಂತ 25ನೇ ದಿನ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ಹಿನ್ನಲೆಯಲ್ಲಿ ಸೆಂಚುರಿ ಸ್ಟಾರ್ ಅಭಿಮಾನಿಗಳ ಜೊತೆ ಸಿನಿಮಾ ನೋಡಲು ನಿರ್ಧರಿಸಿದ್ದಾರೆ.

ಕೆ.ಜಿ ರಸ್ತೆಯಲ್ಲಿರುವ ತ್ರಿವೇಣಿ ಚಿತ್ರಮಂದಿರದಲ್ಲಿ ಮಂಗಳವಾರ (ಜೂನ್ 13) ಮಧ್ಯಾಹ್ನ ಕರುನಾಡ ಚಕ್ರವರ್ತಿ, 'ಬಂಗಾರ ಸನ್ ಆಫ್ ಬಂಗಾರದ ಮನುಷ್ಯ' ಸಿನಿಮಾ ನೋಡಲಿದ್ದಾರೆ. ಹೀಗಾಗಿ, ಶಿವಣ್ಣ ಫ್ಯಾನ್ಸ್ ಹ್ಯಾಟ್ರಿಕ್ ಹೀರೋ ಜೊತೆಯಲ್ಲಿ ಕೂತು ಈ ಸಿನಿಮಾ ನೋಡಬಹುದಾಗಿದೆ.

ವಿಮರ್ಶೆ: 'ಬಂಗಾರದ ಮನುಷ್ಯ'ನ ಪ್ರತಿರೂಪ ಶಿವಣ್ಣನ ಈ 'ಬಂಗಾರ' ರೂಪ

Actor Shiva Rajkumar To Wacth Bangara s/o Bangarada Manushya

ಶಿವರಾಜ್ ಕುಮಾರ್ ಅಭಿನಯದ 'ಬಂಗಾರ ಸನ್ ಆಫ್ ಬಂಗಾರದ ಮನುಷ್ಯ' ಚಿತ್ರಕ್ಕೆ ಈಗಾಗಲೇ ಎಲ್ಲೆಡೆ ಪ್ರಶಂಸೆ ಸಿಕ್ಕಿದ್ದು, ಮಾಜಿ ಪ್ರಧಾನಿ ದೇವೇಗೌಡ, ಹೆಚ್.ಡಿ.ಕುಮಾರಸ್ವಾಮಿ, ಸೇರಿದಂತೆ ಹಲವು ರಾಜಕೀಯ ಗಣ್ಯರು ಚಿತ್ರವನ್ನ ಮೆಚ್ಚಿಕೊಂಡಿದ್ದಾರೆ. ಚಿತ್ರದಲ್ಲಿ ರೈತರ ಸಮಸ್ಯೆಗಳು ಮತ್ತು ಅದಕ್ಕೆ ಸರ್ಕಾರ ತೆಗೆದುಕೊಳ್ಳಬಹುದಾದ ಪರಿಹಾರಗಳನ್ನ ಮನರಂಜನೆಯ ಜೊತೆ ಸೂಕ್ಷ್ಮವಾಗಿ ತೋರಿಸಲಾಗಿದೆ.

'ಬಂಗಾರ ಸನ್ ಆಫ್ ಬಂಗಾರದ ಮನುಷ್ಯ' ಚಿತ್ರ ನೋಡಿ ಭೇಷ್ ಎಂದ್ರಾ ವಿಮರ್ಶಕರು.?

ಈ ಚಿತ್ರವನ್ನ ಯೋಗಿ ನಿರ್ದೇಶನ ಮಾಡಿದ್ದು, ಜಯಣ್ಣ-ಭೋಗೇಂದ್ರ ನಿರ್ಮಾಣ ಮಾಡಿದ್ದರು. ವಿ.ಹರಿಕೃಷ್ಣ ಅವರ ಸಂಗೀತ ಚಿತ್ರಕ್ಕಿದೆ. ವಿದ್ಯಾ ಪ್ರದೀಪ್ ನಾಯಕಿ ಆಗಿದ್ದರು. ಉಳಿದಂತೆ ಸಾಧುಕೋಕಿಲಾ, ಚಿಕ್ಕಣ್ಣ, ಶರತ್ ಲೋಹಿತಾಶ್ವ, ಶ್ರೀನಿವಾಸ ಮೂರ್ತಿ, ಸೇರಿದಂತೆ ಹಲವರು ಬಣ್ಣ ಹಚ್ಚಿದ್ದರು. ಮೇ 19 ರಂದು ಸಿನಿಮಾ ರಾಜ್ಯಾದ್ಯಂತ ಬಿಡುಗಡೆಯಾಗಿತ್ತು.

English summary
Shivarajakumar will be watching Bangara s/o Bangarada Manushya film with the Audience on Tuesday (june 13) afternoon at Triveni theater in Bangalore.

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada