ದಿ ಮಾಸ್ಟರ್ 'ದ್ರೋಣ'ನ ಆಗಮನಕ್ಕೆ ವೇದಿಕೆ ಸಜ್ಜು: ರಿಲೀಸ್ ಆಯ್ತು ಮೇಕಿಂಗ್ ವಿಡಿಯೋ

'ದ್ರೋಣ'ನಾಗಿ ಘರ್ಜಿಸಲು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಸಜ್ಜಾಗಿದ್ದಾರೆ. ಹೌದು, ದ್ರೋಣ ಕರುನಾಡ ಚಕ್ರವರ್ತಿ ಡಾ. ಶಿವರಾಜ್ ಕುಮಾರ್ ಅಭಿನಯದ ಮತ್ತೊಂದು ಸ್ಪೆಷಲ್ ಸಿನಿಮಾ. ಈಗಾಗಲೆ ಚಿತ್ರದ ಫಸ್ಟ್ ಮೇಕಿಂಗ್ ವಿಡಿಯೋ ರಿಲೀಸ್ ಆಗಿದ್ದು ಅಭಿಮಾನಿಗಳ ಗಮನ ಸೆಳೆಯುತ್ತಿದೆ.

ಸ್ಯಾಂಡಲ್ ವುಡ್ ಅಂಗಳದಲ್ಲಿ ಬಾರಿ ನಿರೀಕ್ಷೆ ಹುಟ್ಟಿಸಿರೋ ದ್ರೋಣ. ಚಿತ್ರಕ್ಕೆ ದಿ ಮಾಸ್ಟರ್ ಅನ್ನೋ ಟ್ಯಾಗ್ ಲೈನ್ ಇದೆ. ಪ್ರಸ್ತುತ ಸಮಾಜದಲ್ಲಿ, ಶೈಕ್ಷಣಿಕ ಕ್ಷೇತ್ರದ ಅವ್ಯವಸ್ಥೆ, ಸರ್ಕಾರಿ ಶಾಲೆಗಳ ಮೇಲಿರೋ ಕೀಳರಿಮೆ ಮತ್ತು ಅನ್ಯಾಯ, ಧೋರಣೆ ವಿರುದ್ಧ ಹೋರಾಡೋ ಶಿಕ್ಷಕನ ಪಾತ್ರದಲ್ಲಿ ಶಿವಣ್ಣ ಕಾಣಿಸಿಕೊಂಡಿದ್ದಾರೆ.

ವೆರೈಟಿ ಪಾತ್ರಗಳನ್ನು ಮಾಡೋದ್ರಲ್ಲಿ ಶಿವಣ್ಣ ನಿಪುಣರು. ಈ ಸಿನಿಮಾದ ಮೂಲಕ ಮತ್ತೊಮ್ಮೆ ವಿಶಿಷ್ಟ ಪಾತ್ರದಲ್ಲಿ ಅಭಿಮಾನಿ ದೇವ್ರುಗಳ ಮುಂದೆ ಬರ್ತಿದ್ದಾರೆ. ಸದ್ಯ ರಿಲೀಸ್ ಆಗಿರುವ ಮೇಕಿಂಗ್ ಚಿತ್ರದ ಮೇಲಿನ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ. ಅಂದ್ಹಾಗೆ ದ್ರೋಣ ಚಿತ್ರಕ್ಕೆ ಪ್ರಮೋದ್ ಚಕ್ರವರ್ತಿ ಆಕ್ಷನ್ ಕಟ್ ಹೇಳಿದ್ದಾರೆ.

Actor Shivaraj Kumar Starrer Drona Movie Making Released

ಈ ಸಿನಿಮಾದಲ್ಲಿ ಶಿವರಾಜ್ ಕುಮಾರ್ ಗೆ ನಾಯಕಿಯಾಗಿ ತಮಿಳಿನ ಇನಿಯಾ ನಟಿಸಿದ್ದು, ಸ್ವಾತಿ ಶರ್ಮಾ, ರಂಗಾಯಣ ರಘು, ಬಾಬು ಹೀರಣ್ಣಯ್ಯ, ಶಂಕರ್ ರಾವ್ ಸೇರಿದಂತೆ ಸಾಕಷ್ಟು ಕಲಾವಿದರು ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರಕ್ಕೆ ರಾಮ್ ಕ್ರಿಶ್ ಸಂಗೀತ ನಿರ್ಮಾಣ ಮಾಡಿದ್ದಾರೆ. ಸದ್ಯ ಮೇಕಿಂಗ್ ಮೂಲಕ ಅಭಿಮಾನಿಗಳ ಮುಂದೆ ಬಂದಿರುವ ದ್ರೋಣ ಇದೇ ತಿಂಗಳು 27ರಂದು ಹಾಡಿನ ಮೂಲಕ ಎಂಟ್ರಿ ಕೊಡಲಿದ್ದಾರೆ.

More from Filmibeat

English summary
Kannada Actor Shivaraj Kumar starrer Drona movie making released. This movie is directed by Pramod Chakravarti.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X