For Quick Alerts
  ALLOW NOTIFICATIONS  
  For Daily Alerts

  ಡಿಸಿಎಂ ಅಶ್ವತ್ಥ್ ನಾರಾಯಣ್ ಭೇಟಿಯಾದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್

  |

  ಚಿತ್ರರಂಗದ ನಾಯಕತ್ವ ವಹಿಸಿಕೊಂಡ ಬಳಿಕ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮೊದಲ ಬಾರಿಗೆ ಡಿಸಿಎಂ ಅಶ್ವತ್ಥ್ ನಾರಾಯಣ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ರೇಸ್ ಕೋರ್ಸ್ ನಲ್ಲಿರುವ ಡಿಸಿಎಂ ನಿವಾಸಕ್ಕೆ ತೆರಳಿದ ಶಿವರಾಜ್ ಕುಮಾರ್ ಕೆಲವು ಸಮಯ ಚಿತ್ರರಂಗದ ಸಮಸ್ಯೆಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ.

  ಎಲ್ಲಾ ನಮಗೆ ಬೇಕು ಅನ್ನೋರಲ್ಲ ನಾವು | ShivaRajKumar | DCM Ashwath Narayan | Filmibeat Kannada

  ಇತ್ತೀಚಿಗಷ್ಟೆ ಶಿವರಾಜ್ ಕುಮಾರ್ ನಿವಾಸದಲ್ಲಿ ಪ್ರವಾಸೋದ್ಯಮ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ ಅವರನ್ನು ಆಹ್ವಾನಿಸಿ ಚಿತ್ರರಂಗದ ಪ್ರಸ್ತುತ ಸಮಸ್ಯೆಗಳು ಹಾಗೂ ಎದುರಿಸಲಿರುವ ಸವಾಲುಗಳು ಹಾಗೂ ಇನ್ನಿತರೆ ವಿಷಯಗಳ ಬಗ್ಗೆ ಚರ್ಚೆ ನಡೆಸಲಾಗಿತ್ತು. ಕನ್ನಡ ಚಿತ್ರರಂಗದ ಬಹುತೇಕ ಕಲಾವಿದರು ಶಿವಣ್ಣ ಮನೆಯಲ್ಲಿ ನಡೆದ ಸಂಭೆಯಲ್ಲಿ ಹಾಜರಿದ್ದರು.

  ಅಭಿಮಾನಿಗಳಿಗೆ ಖುಷಿ ಸುದ್ದಿ ನೀಡಿದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್

  ಇದೀಗ ಶಿವಣ್ಣ ಅಶ್ವತ್ಥ್ ನಾರಾಯಣ ಅವರ ಜೊತೆ ಮಾತನಾಡಿ ಕೊರೊನಾ ಕಾರಣದಿಂದ ಸಂಕಷ್ಟಕ್ಕೊಳಗಾಗಿರುವ ಚಿತ್ರರಂಗದ ಪುನಶ್ಚೇತನಕ್ಕೆ ಸರ್ಕಾರದ ನೆರವಿಗೆ ಮನವಿ ಮಾಡಿದ್ದಾರೆ. ಜೊತೆಗೆ ಸಂಕಷ್ಟದಲ್ಲಿರುವ ಸಹ ಕಲಾವಿದರು ಚಿತ್ರರಂಗವನ್ನೆ ಅವಲಂಬಿಸಿರುವ ಕಾರ್ಮಿಕರ ನೆರವಿಗೆ ಸರ್ಕಾರ ದಾವಿಸಬೇಕೆಂದು ಶಿವಣ್ಣ ಮನವಿ ಮಾಡಿದ್ದಾರೆ.

  ಇನ್ನೂ ಶಿವರಾಜ್ ಕುಮಾರ್ ಸಿ ಎಂ ಯಡಿಯೂರಪ್ಪ ಭೇಟಿಯಾಗಬೇಕಿತ್ತು. ಆದರೆ ಸಿಎಂಗೆ ಕೊರೊನಾ ಪಾಸಿಟಿವ್ ಬಂದ ಹಿನ್ನಲೆ ಭೇಟಿಯನ್ನು ಮುಂದೂಡಿದ್ದಾರೆ. ಸದ್ಯದಲ್ಲೇ ಸಿಎಂ ಭೇಟಿಯಾಗಿ ಚಿತ್ರರಂಗದ ಪುನಶ್ಚೇತನದ ಬಗ್ಗೆ ಮಾತುಕತೆ ನಡೆಸುವ ಸಾಧ್ಯತೆ ಇದೆ.

  English summary
  Actor Shivarajkumar Meets DCM Ashwath Narayan. Shivarajkumar discuss film Industry problem with Ashwath Narayan.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X