Sri Murali:ಪದೇ ಪದೆ ಪೆಟ್ಟು.. ಶ್ರೀಮುರಳಿ ಕಾಲಿಗೆ ಮತ್ತೆ ಏಟು: ಮೈಸೂರಿನ ಆಸ್ಪತ್ರೆಗೆ ದಾಖಲು
ಮೈಸೂರು: ರೋರಿಂಗ್ ಸ್ಟಾರ್ ಶ್ರೀ ಮುರಳಿ ಕಳೆದ ಕೆಲವು ದಿನಗಳಿಂದ 'ಬಘೀರ' ಸಿನಿಮಾದ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದರು. ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಮಾಡುತ್ತಿರುವ ಈ ಸಿನಿಮಾವನ್ನು 'ಲಕ್ಕಿ' ಚಿತ್ರಕ್ಕೆ ಆಕ್ಷನ್ ಕಟ್ ಹೇಳಿರೋ ಡಾ. ಸೂರಿ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಮೈಸೂರಿನಲ್ಲಿ ಈ ಸಿನಿಮಾದ ಶೂಟಿಂಗ್ ನಡೆಯುತ್ತಿತ್ತು. ಈ ವೇಳೆ ಶ್ರೀಮುರಳಿ ಮತ್ತೆ ಕಾಲಿಗೆ ಪೆಟ್ಟು ಮಾಡಿಕೊಂಡಿದ್ದಾರೆ.
ಒಂದು ವರ್ಷದ ಹಿಂದಷ್ಟೇ ಶ್ರೀಮುರಳಿ ಇದೇ 'ಬಘೀರ' ಸಿನಿಮಾದ ಶೂಟಿಂಗ್ ಮಾಡುವಾಗಲೇ ಕಾಲಿಗೆ ಪೆಟ್ಟು ಮಾಡಿಕೊಂಡಿದ್ದರು. ಈಗ ಮೈಸೂರಿನಲ್ಲಿ ಸಿನಿಮಾ ಚಿತ್ರೀರಣದ ವೇಳೆ ಪೆಟ್ಟು ಮಾಡಿಕೊಂಡಿದ್ದು, ಮೈಸೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.

ಹೊಂಬಳೆ ಸಂಸ್ಥೆ ನಿರ್ಮಾಣ ಮಾಡುತ್ತಿರುವ 'ಬಘೀರ' ಚಿತ್ರೀಕರಣದ ಸಮಯದಲ್ಲಿ ಈ ಘಟನೆ ನಡೆದಿದೆ. 'ಬಫೀರ' ಸಿನಿಮಾದ ಬಹು ದೊಡ್ಡ ಸ್ಟಂಟ್ ಸೀನ್ ಶೂಟಿಂಗ್ ಮಾಡಲಾಗುತ್ತಿತ್ತು. ಈ ವೇಳೆ ರೋರಿಂಗ್ ಸ್ಟಾರ್ ಶ್ರೀಮುರಳಿ ಕಾಲಿಗೆ ಪೆಟ್ಟು ಮಾಡಿಕೊಂಡಿದ್ದು, ಅಭಿಮಾನಿಗಳು ಆತಂಕಕ್ಕೆ ಒಳಗಾಗಿದ್ದಾರೆ.
ಹೊಂಬಳೆ ಸಂಸ್ಥೆ ನಿರ್ಮಾಣ ಮಾಡುತ್ತಿರುವ 'ಬಘೀರ' ಚಿತ್ರೀಕರಣದ ಸಮಯದಲ್ಲಿ ಈ ಘಟನೆ ನಡೆದಿದೆ. 'ಬಫೀರ' ಸಿನಿಮಾದ ಬಹು ದೊಡ್ಡ ಸ್ಟಂಟ್ ಸೀನ್ ಶೂಟಿಂಗ್ ಮಾಡಲಾಗುತ್ತಿತ್ತು. ಈ ವೇಳೆ ರೋರಿಂಗ್ ಸ್ಟಾರ್ ಶ್ರೀಮುರಳಿ ಕಾಲಿಗೆ ಪೆಟ್ಟು ಮಾಡಿಕೊಂಡಿದ್ದು, ಅಭಿಮಾನಿಗಳು ಆತಂಕಕ್ಕೆ ಒಳಗಾಗಿದ್ದಾರೆ.
ರೋರಿಂಗ್ ಸ್ಟಾರ್ ಶ್ರೀಮುರಳಿಗೆ ಚಿಕಿತ್ಸೆ ನೀಡಲಾಗಿದ್ದು, ಇನ್ನೂ ಹೆಚ್ಚಿನ ಮಾಹಿತಿ ಹೊರಬೀಳಬೇಕಿದೆ. ಸದ್ಯ ಶೂಟಿಂಗ್ ಬ್ರೇಕ್ ಕೊಟ್ಟಿದ್ದು, ಅದ್ಧೂರಿ ಆಕ್ಷನ್ ಸೀಕ್ವೆನ್ ಅನ್ನು ಶೂಟಿಂಗ್ ಮಾಡಲಾಗುತ್ತಿತ್ತು ಎಂದು ಹೇಳಾಗಿದೆ.
ಶ್ರೀಮುರಳಿ ಈ ಹಿಂದೆ 'ಮದಗಜ' ಸಿನಿಮಾದ ಶೂಟಿಂಗ್ ಮಾಡುವಾಗ ಎಡಗಾಲಿಗೆ ಪೆಟ್ಟು ಮಾಡಿಕೊಂಡಿದ್ದರು. ಈ ಸಿನಿಮಾದ ಆಕ್ಷನ್ ಸೀನ್ ಅನ್ನು ಶೂಟಿಂಗ್ ಮಾಡುವ ವೇಳೆ ಲಾಂಡಿಂಗ್ ಆಗುವಾಗ ಸಮಯದಲ್ಲಿ ಮೊಣಕಾಲಿಗೆ ಏಟು ಮಾಡಿಕೊಂಡಿದ್ದರು. ಆ ವೇಳೆ ಶ್ರೀಮುರಳಿಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆಗ ಲಿಗಮೆಂಟ್ ಟಿಯರ್ ಆಗಿದ್ದು, ಸುಮಾರು ಮೂರು ತಿಂಗಳ ಕಾಲ ಶ್ರೀಮುರಳಿ ವಿಶ್ರಾಂತಿ ಪಡೆದಿದ್ದರು.
ಕಳೆದ ವರ್ಷವಷ್ಟೇ ಶ್ರೀಮುರಳಿ ಇದೇ 'ಬಘೀರ' ಸಿನಿಮಾದ ಶೂಟಿಂಗ್ ಮಾಡುವಾಗ ಮತ್ತೆ ಪೆಟ್ಟು ಮಾಡಿಕೊಂಡಿದ್ದರು. ಆ ವೇಳೆ ಒಂದಿಷ್ಟು ದಿನ ಚಿತ್ರೀಕರಣಕ್ಕೆ ಬ್ರೇಕ್ ಹಾಕಲಾಗಿತ್ತು. ಮತ್ತೆ ಅದೇ ಕಾಲಿಗೆ ಏಟು ಬಿದ್ದಿದೆ. ಈ ಬಾರಿಗೆ ಗಾಯದ ಸ್ವರೂಪದ ಬಗ್ಗೆ ಇನ್ನೂ ತಿಳಿಯಬೇಕಿದೆ.
ಹೊಂಬಾಳೆ ಫಿಲ್ಮ್ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದು, ಡಾ. ಸೂರಿ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಪ್ರಶಾಂತ್ ನೀಲ್ ಈ ಸಿನಿಮಾ ಕಥೆಯನ್ನು ನೀಡಿದ್ದಾರೆ. ಹೀಗಾಗಿ ಈ ಸಿನಿಮಾ ಬಗ್ಗೆ ನಿರೀಕ್ಷೆ ಹೆಚ್ಚಿದ್ದು, ಹಲವು ದಿನಗಳಿಂದ ಶೂಟಿಂಗ್ ನಡೆಯುತ್ತಿದ್ದು, ಯಾವಾಗ ರಿಲೀಸ್ ಆಗುತ್ತೆ ಅನ್ನೋ ಬಗ್ಗೆ ಇನ್ನೂ ನಿರ್ಮಾಣ ಸಂಸ್ಥೆ ಮಾಹಿತಿ ಬಿಟ್ಟುಕೊಟ್ಟಿಲ್ಲ.


Click it and Unblock the Notifications











