Don't Miss!
- Technology
ಆಪಲ್ ಗ್ರಾಹಕರಿಗೆ ಬಿಗ್ ಶಾಕ್; ಆದ್ರೂ, ಗ್ರಾಹಕರಿಗೆ ಕೊನೆಯ ಅವಕಾಶ ನೀಡಿದೆ!
- Sports
WIPL 2023: ಮಹಿಳಾ ಐಪಿಎಲ್ಗಾಗಿ ತನ್ನ ಕೋಚಿಂಗ್ ಬಳಗ ಪ್ರಕಟಿಸಿದ ಮುಂಬೈ ಇಂಡಿಯನ್ಸ್
- News
ಫೆಬ್ರವರಿ 6ರಂದು 280 ರೈಲುಗಳನ್ನು ರದ್ದುಗೊಳಿಸಿದ ಭಾರತೀಯ ರೈಲ್ವೆ- ಸಂಪೂರ್ಣ ಪಟ್ಟಿ ಇಲ್ಲಿದೆ
- Lifestyle
Horoscope Today 6 Feb 2023: ಸೋಮವಾರ : ದ್ವಾದಶ ರಾಶಿಗಳ ರಾಶಿಫಲ ಹೇಗಿದೆ?
- Finance
ಆಧಾರ್ ಕಾರ್ಡ್ ಸಂಖ್ಯೆಯಿಂದ ನಿಮ್ಮ ಬ್ಯಾಂಕ್ ಬ್ಯಾಲೆನ್ಸ್ ಪರಿಶೀಲಿಸಿ, ಹೇಗೆ ಇಲ್ಲಿ ತಿಳಿಯಿರಿ
- Automobiles
ಹೆಚ್ಚಿನ ಮೈಲೇಜ್ ನೀಡುವ ಬಹುನಿರೀಕ್ಷಿತ ಟಾಟಾ ಆಲ್ಟ್ರೊಜ್ iCNG ಕಾರಿನ ವಿಶೇಷತೆಗಳು...
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಗುಟ್ಟಾಗಿ ಉಂಗುರ ಬದಲಿಸಿಕೊಂಡ್ರಾ ವಸಿಷ್ಠ ಸಿಂಹ- ಹರಿಪ್ರಿಯಾ?
ಸ್ಯಾಂಡಲ್‌ವುಡ್‌ನಲ್ಲಿ ಸಾಲು ಸಾಲು ಶುಭ ಸಮಾರಂಭಗಳು ನಡೀತಿದೆ. ಇತ್ತೀಚೆಗೆ ನಟಿ ಅದಿತಿ ಪ್ರಭುದೇವ ಹಸೆಮಣೆ ಏರಿದ್ದರು. ಇದೀಗ ನಟ ವಸಿಷ್ಠ ಸಿಂಹ ಹಾಗೂ ನಟಿ ಹರಿಪ್ರಿಯಾ ಗುಟ್ಟಾಗಿ ಉಂಗುರ ಬದಲಿಸಿಕೊಂಡಿದ್ದಾರೆ ಎಂದು ವರಿದಿಯಾಗಿದೆ.
ಕೆಲ ದಿನಗಳಿಂದ ವಸಿಷ್ಠ ಹಾಗೂ ಹರಿಪ್ರಿಯಾ ನಡುವೆ ಲವ್ವಿ ಡವ್ವಿ ನಡೀತಿದೆ ಎನ್ನುವ ಗುಸುಗುಸು ಕೇಳಿಬರ್ತಿತ್ತು. ಮೊನ್ನೆಯಷ್ಟೆ ಇದಕ್ಕೆ ಇಂಬು ನೀಡುವಂತೆ ಏರ್‌ಪೋರ್ಟ್‌ನಲ್ಲಿ ಜೋಡಿ ಒಟ್ಟಿಗೆ ಕೈ ಕೈ ಹಿಡಿದು ಅಡ್ಡಾಡಿತ್ತು. ಆ ಫೋಟೊಗಳು ವೈರಲ್ ಆಗಿದ್ದವು. ಇಂದು(ಡಿಸೆಂಬರ್ 2) ಆರ್. ಆರ್ ನಗರದ ಹರಿಪ್ರಿಯಾ ನಿವಾಸದಲ್ಲಿ ನಿಶ್ಚಿತಾರ್ಥ ನೆರವೇರಿದೆ ಎನ್ನುವ ಮಾತುಗಳು ಕೇಳಿಬರ್ತಿದೆ. ಬಹಳ ಗುಟ್ಟಾಗಿ ಜೋಡಿಯ ನಿಶ್ಚಿತಾರ್ಥ ಕಾರ್ಯಕ್ರಮ ನಡೆದಿದೆ ಎನ್ನಲಾಗ್ತಿದೆ.
ಚಿತ್ರಮಂದಿರದಲ್ಲಿ
ಅಬ್ಬರಿಸಿದ್ದ
'ಕಾಂತಾರ'
ಚಿತ್ರ
ಓಟಿಟಿಯಲ್ಲಿ
ಗೆಲ್ತಾ,
ಸೋಲ್ತಾ?
ಕೆಲ ದಿನಗಳ ಹಿಂದೆ ವಸಿಷ್ಠ, ಹರಿಪ್ರಿಯಾ ದುಬೈಗೆ ಹೋಗಿ ಬಂದಿದ್ದರು. ಮದುವೆಗೆ ಈಗಾಗಲೇ ಸಿದ್ಧತೆ ನಡೀತಿದೆಯಂತೆ. ಧನುರ್ಮಾಸ ಮುಗಿದ ಮೇಲೆ ಫೆಬ್ರವರಿಯಲ್ಲಿ ಜೋಡಿ ಹಸೆಮಣೆ ಏರಲಿದೆ ಎನ್ನುವ ಮಾತುಗಳು ಕೇಳಿಬರ್ತಿದೆ. ಇತ್ತೀಚೆಗೆ ಹರಿಪ್ರಿಯಾ ಮೂಗು ಚುಚ್ಚಿಸಿಕೊಂಡಿದ್ದ ವಿಡಿಯೋ ವೈರಲ್ ಆಗಿತ್ತು. ಆಗ ಪಕ್ಕದಲ್ಲೇ ವಸಿಷ್ಠ ಸಿಂಹ ಕೂಡ ಇದ್ದರು. ತೆಲುಗಿನ 'ಎವರು' ಸಿನಿಮಾ ರೀಮೇಕ್‌ನಲ್ಲಿ ವಸಿಷ್ಠ ಹಾಗೂ ಹರಿಪ್ರಿಯಾ ನಟಿಸುತ್ತಿದ್ದಾರೆ. ಈ ಸಿನಿಮಾ ಶೂಟಿಂಗ್ ಸಮಯದಲ್ಲೇ ಇಬ್ಬರ ನಡುವೆ ಪ್ರೀತಿ ಹುಟ್ಟಿದ್ದು ಈಗ ಇಬ್ಬರು ಹಸೆಮಣೆ ಏರಲು ಮುಂದಾಗಿದ್ದಾರೆ ಎನ್ನುವ ಮಾತುಗಳು ಕೇಳಿಬರ್ತಿದೆ.

ಕಳೆದೊಂದು ವಾರದಿಂದ ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ಡೇಟಿಂಗ್, ಎಂಗೇಜ್‌ಮೆಂಟ್ ಬಗ್ಗೆ ಗುಸುಗುಸು ಶುರುವಾಗಿದೆ. ಆದರೆ ಈ ಬಗ್ಗೆ ಇಬ್ಬರು ಮಾತನಾಡುವ ಗೋಜಿಗೆ ಹೋಗಿಲ್ಲ. ಆದರೆ ಈಗ ಇಬ್ಬರ ಎಂಗೇಜ್‌ಮೆಂಟ್ ನಡೆದಿರುವ ಬಗ್ಗೆ ವರದಿಯಾಗಿದ್ದು ಶೀಘ್ರದಲ್ಲೇ ಈ ಬಗ್ಗೆ ವಸಿಷ್ಠ ಸಿಂಹ ಸ್ಪಷ್ಟನೆ ನೀಡುವ ಸಾಧ್ಯತೆಯಿದೆ.