For Quick Alerts
  ALLOW NOTIFICATIONS  
  For Daily Alerts

  ದಾಂಪತ್ಯ ಜೀವನಕ್ಕೆ ಕಾಲಿಟ್ಟ 'ಅಹಂ ಪ್ರೇಮಾಸ್ಮಿ' ಚಿತ್ರದ ನಾಯಕಿ

  |

  ಹಾರ್ಟ್ ಅನ್ನೋ ಅಡ್ಡಾದಲ್ಲಿ ಲವ್ ಅನ್ನು ಲಾಂಗು ಹಿಡಿದು ಕನ್ನಡ ಚಿತ್ರಪ್ರೇಮಿಗಳ ಹೃದಯಕ್ಕೆ ಎಂಟ್ರಿ ಕೊಟ್ಟಿದ್ದ ಪಂಜಾಬಿ ಬೆಡಗಿ ನಟಿ ಆರ್ತಿ ಛಾಬ್ರಿಯಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬಹುಕಾಲದ ಗೆಳೆಯ ಮುಂಬೈ ಮೂಲದ ವಿಶಾರದ್ ಬೀಡಸ್ಸಿ ಜೊತೆ ಸಪ್ತಪದಿ ತುಳಿದಿದ್ದಾರೆ.

  ಮಾರ್ಚ್ ನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದ ಈ ಜೋಡಿ ಜೂನ್ 24ರಂದು ಅದ್ಧೂರಿಯಾಗಿ ಮದುವೆಯಾಗಿದ್ದಾರೆ. ಇವರ ಮದುವೆಗೆ ಕುಟುಂಬದವರು ಮತ್ತು ಸ್ನೇಹಿತರಿಗೆ ಮಾತ್ರ ಹಾಜರಾಗಿ ನವ ಜೋಡಿಗಳಿಗೆ ಶುಭ ಹಾರೈಸಿದ್ದಾರೆ. ಅನೇಕ ವರ್ಷಗಳಿಂದ ಆರ್ತಿ ಮತ್ತು ವಿಶಾರದ್ ಇಬ್ಬರು ಒಬ್ಬರ ನೊಬ್ಬರು ಪ್ರೀತಿಸುತ್ತಿದ್ದರು. ಆದ್ರೆ ಇವರ ಪ್ರೀತಿ ವಿಚಾರ ಎಲ್ಲೂ ಬಹಿರಂಗವಾಗದಂತೆ ಕಾಪಾಡಿಕೊಂಡು ಬಂದಿದ್ದರು.

  ನಿಶ್ಚಿತಾರ್ಥ ಮಾಡಿಕೊಂಡ ಕುಲವಧು ಖ್ಯಾತಿಯ ಧನ್ಯಾ

  ಸದ್ಯ ಮದುವೆ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವ ಮೂಲಕ ಮದುವೆ ವಿಚಾರವನ್ನು ಬಹಿರಂಗ ಪಡಿಸಿದ್ದಾರೆ. ಆರ್ತಿ ಅವರು ರವಿಚಂದ್ರನ್ ಅಭಿನಯದ 'ಅಹಂ ಪ್ರೇಮಾಸ್ಮಿ' ಚಿತ್ರದ ಮೂಲಕ ಕನ್ನಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಆ ನಂತರ ಶಿವರಾಜ್ ಕುಮಾರ್ ಅಭಿನಯದ 'ಸಂತ' ಮತ್ತು 'ರಜನಿ' ಚಿತ್ರದಲ್ಲು ನಾಯಕಿಯಾಗಿ ಬಣ್ಣ ಹಚ್ಚಿದ್ದಾರೆ.

  ಕನ್ನಡ ಮಾತ್ರವಲ್ಲದೆ ತಮಿಳು, ತೆಲುಗು ಮತ್ತು ಹಿಂದಿ ಚಿತ್ರರಂಗದಲ್ಲು ಮಿಂಚಿದ್ದಾರೆ ಆರ್ತಿ. ಹಿಂದಿಯ 'ಲಜ್ಜ' ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ಆರ್ತಿ ಸಾಕಷ್ಟು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಕೊನೆಯದಾಗಿ ಆರ್ತಿ ಪಂಜಾಬಿ ಚಿತ್ರದಲ್ಲಿ ಬಣ್ಣಹಚ್ಚಿದ್ದಾರೆ. ಸಿನಿಮಾ ಮಾತ್ರವಲ್ಲದೆ ಕಿರುತೆರೆಯಲ್ಲಿ ರಿಯಾಲಿಟಿ ಶೋಗಳಲ್ಲೂ ಭಾಗಿಯಾಗಿದ್ದಾರೆ.

  English summary
  Santa kannada film Actress Aarti Chabria Ties the Knot With Boyfriend Visharad Beedassy.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X