For Quick Alerts
  ALLOW NOTIFICATIONS  
  For Daily Alerts

  ನಟಿ ಅಭಿನಯಗೆ ಎರಡು ವರ್ಷ ಜೈಲು ಸಜೆ: ಹೈಕೋರ್ಟ್ ತೀರ್ಪು

  By ಫಿಲ್ಮಿಬೀಟ್ ಡೆಸ್ಕ್
  |

  ಕಾಶೀನಾಥ್‌ರ 'ಅನುಭವ' ಸೇರಿದಂತೆ ಹಲವಾರು ಕನ್ನಡ ಸಿನಿಮಾ, ಧಾರಾವಾಹಿಗಳಲ್ಲಿ ನಟಿಸಿರುವ ಜನಪ್ರಿಯ ನಟಿ ಅಭಿನಯಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿ ರಾಜ್ಯ ಹೈಕೋರ್ಟ್ ತೀರ್ಪು ನೀಡಿದೆ.

  ತಮ್ಮ ಅತ್ತಿಗೆಗೆ ವರದಕ್ಷಿಣೆ ಕಿರುಕುಳ ನೀಡಿದ ಪ್ರಕರಣದಲ್ಲಿ ಅಭಿನಯ ಹಾಗೂ ಅವರ ಪೋಷಕರಿಗೆ ಹೈಕೋರ್ಟ್ ಸಜೆ ನೀಡಿದ್ದು, ಪ್ರಕರಣದಲ್ಲಿ ಆರೋಪಿ ಸಂಖ್ಯೆ ಮೂರು ಆಗಿರುವ ಅಭಿನಯಗೆ ಎರಡು ವರ್ಷಗಳ ಕಾರಾಗೃಹ ಶಿಕ್ಷೆ ವಿಧಿಸಲಾಗಿದೆ.

  ನಟಿ ಅಭಿನಯಾರ ಸಹೋದರ ಶ್ರೀನಿವಾಸ್ ಅವರ ಪತ್ನಿ ಲಕ್ಷ್ಮೀದೇವಿಗೆ ವರದಕ್ಷಿಣೆ ಪೀಡಿಸಿ, ಪೋಷಕರ ಜೊತೆ ಸೇರಿ ಕಿರುಕುಳ ನೀಡಿರುವ ಆರೋಪದಡಿಯಲ್ಲಿ ಹೈಕೋರ್ಟ್ ಈ ಶಿಕ್ಷೆ ಪ್ರಕಟಿಸಿದೆ. ನ್ಯಾಯಮೂರ್ತಿ ಎಚ್​.ಬಿ. ಪ್ರಭಾಕರ್ ಶಾಸ್ತ್ರಿ ಅವರನ್ನೊಳಗೊಂಡ ಏಕಸದಸ್ಯ ಪೀಠದಿಂದ ಆದೇಶ ಹೊರಬಿದ್ದಿದೆ.

  2002 ರಲ್ಲಿ ಅಭಿನಯರ ಸಹೋದರ ಶ್ರೀನಿವಾಸ್ ಅವರ ಪತ್ನಿ ಲಕ್ಷ್ಮೀದೇವಿ, ಅಭಿನಯ, ಅವರ ಪೋಷಕರು ಹಾಗೂ ಪತಿಯ ವಿರುದ್ಧ ವರದಕ್ಷಿಣೆ ಕಿರುಕುಳದ ಆರೋಪ ಮಾಡಿದ್ದರು. ಚಂದ್ರಾಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ತನಿಖೆ ನಡೆಸಿದ್ದ ಪೊಲೀಸರು ಚಾರ್ಜ್‌ಶೀಟ್ ಸಲ್ಲಿಸಿದ್ದರು.

  1998ರಲ್ಲಿ ಅಭಿನಯ ಅಣ್ಣ ಶ್ರೀನಿವಾಸ್ ಅವರನ್ನು ಲಕ್ಷ್ಮೀದೇವಿ ಎಂಬುವರನ್ನು ಮದುವೆಯಾಗಿದ್ದರು. ಮದುವೆ ವೇಳೆ ವರಕ್ಷಿಣೆ ಪಡೆದಿದ್ದಲ್ಲದೆ, ನಂತರವೂ ಪದೇಪದೆ ಹಣ ತರುವಂತೆ ಕಿರುಕುಳ ನೀಡುತ್ತಿದ್ದರು. ವಿವಾಹದ ಸಮಯದಲ್ಲಿ 80 ಸಾವಿರ ರೂಪಾಯಿ ಹಾಗೂ 250 ಗ್ರಾಂ ಚಿನ್ನಾಭರಣ ಪಡೆದಿದ್ದರು. ಇದಾದ ನಂತರ 1 ಲಕ್ಷ ರೂ.ಗೆ ಬೇಡಿಕೆ ಇಟ್ಟು 20 ಸಾವಿರ ಪಡೆದ ನಂತರವೂ ಕಿರುಕುಳ ಮುಂದುವರೆಸಿದ್ದರು. ಹಣ ಕೊಟ್ಟರೂ ಸಹ ನನ್ನನ್ನು ಪೋಷಕರ ಮನೆಯಲ್ಲಿ ಬಿಟ್ಟಿದ್ದರು, ಆ ನಂತರ ಕರೆದುಕೊಂಡು ಹೋಗಲಿಲ್ಲ, ನನ್ನನ್ನು ಮನೆಗೆ ಸೇರಿಸಲಿಲ್ಲ ಎಂದು ಲಕ್ಷ್ಮೀದೇವಿ ದೂರು ನೀಡಿದ್ದರು.

  ವಿಚಾರಣೆ ನಡೆಸಿದ್ದ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಆರೋಪಿಗಳಿಗೆ ಎರಡು ವರ್ಷ ಜೈಲು ಶಿಕ್ಷೆ ಪ್ರಕಟಿಸಿತ್ತು. ಬಳಿಕ ಜಿಲ್ಲಾ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಕೆಯಾಗಿ ವಿಚಾರಣೆ ನಡೆದು ಎಲ್ಲ ಆರೋಪಿಗಳು ಖುಲಾಸೆಗೊಂಡಿದ್ದರು. ಬಳಿಕ ಲಕ್ಷ್ಮಿದೇವಿಯು ಜಿಲ್ಲಾ ನ್ಯಾಯಾಲಯದ ತೀರ್ಪಿನ ವಿರುದ್ಧ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ ಕಾರಣ ವಿಚಾರಣೆ ನಡೆದು ಇದೀಗ ತೀರ್ಪು ಹೊರಬಿದ್ದಿದೆ.

  ಪ್ರಖರಣದ ಪ್ರಮುಖ ಆರೋಪಿ ಶ್ರೀನಿವಾಸ್ ಹಾಗೂ ಎರಡನೇ ಆರೋಪಿ ರಾಮಕೃಷ್ಣ ನಿಧನ ಹೊಂದಿರುವ ಕಾರಣ ಅವರನ್ನು ಬಿಟ್ಟು ಉಳಿದ ಮೂರನೇ ಆರೋಪಿಯಾದ ಜಯಮ್ಮ (ಅಭಿನಯ ಅವರ ತಾಯಿ)ಗೆ ಐದು ವರ್ಷ ಜೈಲು ಸಜೆ, ಆರೋಪಿ ನಂಬರ್ 4 ಚೆಲುವರಾಜ್‌ಗೆ ಎರಡು ವರ್ಷ ಜೈಲು ಶಿಕ್ಷೆ, ಆರೋಪಿ ನಂಬರ್ 5 ಅಭಿನಯಗೆ ಐದು ವರ್ಷ ಜೈಲು ಶಿಕ್ಷೆ ವಿಧಿಸಿ ಹೈಕೋರ್ಟ್ ತೀರ್ಪು ನೀಡಿದೆ.

  ನಟಿ ಅಭಿನಯ ಇದೀಗ 'ಹಿಟ್ಲರ್ ಕಲ್ಯಾಣ' ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಈ ತೀರ್ಪಿನಿಂದಾಗಿ ನಟಿ ಜೈಲಿಗೆ ಹೋದರೆ ಬೇರೊಬ್ಬ ನಟಿ ಆ ಸ್ಥಾನ ತುಂಬಬೇಕಾಗಿಬರುವುದು ಖಾತ್ರಿ.

  English summary
  Actress Abhinaya convicted in dowry harassment case by Karnataka high court. court 2 years of Imprisonment.
  Wednesday, December 14, 2022, 11:37
  IIFA

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X