Just In
Don't Miss!
- Finance
ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು 8.5 ರೂ. ಕಡಿತಗೊಳಿಸಬಹುದು!
- Sports
1 ಓವರ್ನಲ್ಲಿ 6 ಸಿಕ್ಸರ್: ವಿಶ್ವದಾಖಲೆ ಪಟ್ಟಿ ಸೇರಿದ ಕೀರನ್ ಪೊಲಾರ್ಡ್!
- Automobiles
ಕಿಗರ್ ಕಾರು ವಿತರಣೆ ಆರಂಭವಾದ ಮೊದಲ ದಿನವೇ 1,100 ಯುನಿಟ್ ಮಾರಾಟ
- News
ಜನರು ದಿನದ 24 ಗಂಟೆಯಲ್ಲಿ ಯಾವಾಗ ಬೇಕಾದರೂ ಕೊರೊನಾ ಲಸಿಕೆ ಪಡೆಯಬಹುದು
- Lifestyle
ದಿನ ಭವಿಷ್ಯ: ಗುರುವಾರದ ರಾಶಿಫಲ ಹೇಗಿದೆ ನೋಡಿ
- Education
Vijayapura District Court Recruitment 2021: ವಿಜಯಪುರ ಜಿಲ್ಲಾ ನ್ಯಾಯಾಲಯದಲ್ಲಿ 2 ಬೆರಳಚ್ಚು-ನಕಲುಗಾರ ಹುದ್ದೆಗಳ ನೇಮಕಾತಿ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ರಾಮ ಮಂದಿರ ನಿರ್ಮಾಣಕ್ಕೆ ಭಾರಿ ಮೊತ್ತ ದೇಣಿಗೆ ನೀಡಿದ ಅಮೂಲ್ಯ ದಂಪತಿ
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಈಗಾಗಲೇ ಚಾಲನೆ ದೊರೆತಿದ್ದು. ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಿಸುವ ಕಾರ್ಯ ದೇಶದಾದ್ಯಂತ ನಡೆಯುತ್ತಿದೆ.
ಸಮರ್ಪಣಾ ಅಭಿಯಾನದ ಹೆಸರಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಣೆ ನಡೆಯುತ್ತಿದ್ದು, ಹಲವಾರು ರಾಜಕಾರಣಿಗಳು, ಸಿನಿಮಾ ಸೆಲೆಬ್ರಿಟಿಗಳು, ಕ್ರೀಡಾಪಟುಗಳು ಸೇರಿದಂತೆ ಹಲವಾರು ಮಂದಿ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡುತ್ತಿದ್ದಾರೆ.
ಕನ್ನಡದ ನಟಿ ಅಮೂಲ್ಯಾ ಹಾಗೂ ಪತಿ ಜಗದೀಶ್ ಸಹ ರಾಮ ಮಂದಿರ ನಿರ್ಮಾಣಕ್ಕೆ ದೊಡ್ಡ ಮೊತ್ತದ ಹಣವನ್ನೇ ದೇಣಿಗೆ ನೀಡಿದ್ದಾರೆ. ಅಮೂಲ್ಯ ಪತಿ ಜಗದೀಶ್ ಅವರು ಬರೋಬ್ಬರಿ 1.50 ಲಕ್ಷ ಹಣವನ್ನು ರಾಮ ಮಂದಿರ ನಿರ್ಮಾಣಕ್ಕೆ ನೀಡಿದ್ದಾರೆ. ದೇಣಿಗೆ ನೀಡಿದ ರಸೀದಿಯ ಚಿತ್ರವನ್ನು ಅಮೂಲ್ಯ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ.
ಅಮೂಲ್ಯ ಮಾವ ರಾಜಕಾರಣಿ ಜಿ.ಎಚ್.ರಾಮಚಂದ್ರ ಅವರೂ ಸಹ ದೇಣಿಗೆ ನೀಡಿದ್ದು. ರಾಮಚಂದ್ರ ಅವರು ಬರೋಬ್ಬರಿ 1 ಲಕ್ಷ ಮೊತ್ತವನ್ನು ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆಯಾಗಿ ನೀಡಿದ್ದಾರೆ.
ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ದಂಪತಿ, 'ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನ ದೇಶಾದ್ಯಂತ ನಡೆಯುತ್ತಿದ್ದು, ಪ್ರತಿಯೊಬ್ಬರೂ ಈ ಅಭಿಯಾನದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಈ ನಿಮಿತ್ತ ನಮ್ಮ ಮನೆಗೆ ಬಿಜೆಪಿ ಸಂಘಟನಾ ಕಾರ್ಯದರ್ಶಿಗಳಾದ ಶ್ರೀ ಅರುಣ್ ಕುಮಾರ್ ಜೀ ರವರು ಆಗಮಿಸಿದ್ದರು. ಪ್ರತಿ ವರ್ಷವೂ ಜನ್ಮದಿನಾಚರಣೆಗಾಗಿ ವ್ಯಯಿಸುತ್ತಿದ್ದ ಮೊತ್ತಕ್ಕೆ ನಮ್ಮಿಂದಾದ ಮೊತ್ತವನ್ನು ಸೇರಿಸಿ ಪ್ರಭು ಶ್ರೀರಾಮ ಮಂದಿರಕ್ಕಾಗಿ ಅರ್ಪಿಸಿದೆವು. ಈ ಕ್ಷಣ ನಮಗೆ ಅತ್ಯಂತ ಸಾರ್ಥಕತೆಯ ಕ್ಷಣವೆನಿಸಿತು' ಎಂದಿದ್ದಾರೆ.
ಕನ್ನಡದ ನಟಿ ಪ್ರಣಿತಾ ಸುಭಾಷ್ ಸಹ ರಾಮ ಮಂದಿರ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ದೇಣಿಗೆ ನೀಡಿದ್ದರು. ನಟ ಪವನ್ ಕಲ್ಯಾಣ್ 30 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ. ನಟ ಅಕ್ಷಯ್ ಕುಮಾರ್ ಸಹಸ ದೊಡ್ಡ ಮೊತ್ತದ ದೇಣಿಗೆಯನ್ನು ರಾಮ ಮಂದಿರ ನಿರ್ಮಾಣಕ್ಕೆ ನೀಡಿದ್ದಾರೆ.