Don't Miss!
- News
ಕೂರ್ಮಗಿರಿ ಎಲ್ಲೋಡು ಆದಿನಾರಾಯಣಸ್ವಾಮಿ ಬ್ರಹ್ಮರಥೋತ್ಸವಕ್ಕೆ ಹರಿದು ಬಂದ ಭಕ್ತ ಸಾಗರ
- Technology
ಸ್ಮಾರ್ಟ್ಫೋನ್ಗಳಲ್ಲಿನ ಸೆನ್ಸರ್ಗಳ ಬಗ್ಗೆ ನಿಮಗೆ ಗೊತ್ತಾ?..ಇವುಗಳಿಂದ ಲಾಭವೇನು?
- Automobiles
ಭಾರತದಲ್ಲಿ ಗ್ಲಾಂಝಾ ಪ್ರೀಮಿಯಂ ಹ್ಯಾಚ್ಬ್ಯಾಕ್ನ ಬೆಲೆ ಹೆಚ್ಚಿಸಿದ ಟೊಯೊಟಾ
- Sports
Border-Gavaskar Trophy: ಭಾರತ vs ಆಸ್ಟ್ರೇಲಿಯಾ ಅತಿ ಹೆಚ್ಚು ರನ್, ಹೆಚ್ಚು ವಿಕೆಟ್ ಗಳಿಸಿದ ಆಟಗಾರರ ಪಟ್ಟಿ
- Finance
Real Estate Deal: ದೇಶದ ಅತೀ ದೊಡ್ಡ ರಿಯಲ್ ಎಸ್ಟೇಟ್ ಡೀಲ್ಗೆ ಹೂಡಿಕೆ ಮಾಡಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Lifestyle
ಕ್ಯಾನ್ಸರ್ ಚಿಕಿತ್ಸೆ ಬಳಿಕ ಮಗು ಪಡೆಯಲು ಸುರಕ್ಷಿತ ವಿಧಾನ ಇದೇ ನೋಡಿ
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ನಟಿ ಅಮೂಲ್ಯ ಅವಳಿ ಮಕ್ಕಳ ಫೋಟೊ ಇಲ್ಲಿವೆ ನೋಡಿ
ಸ್ಯಾಂಡಲ್ವುಡ್ನಲ್ಲಿ ಗೋಲ್ಡನ್ ಕ್ವೀನ್ ಅಂತಲೇ ಕರೆಸಿಕೊಳ್ಳುವ ನಟಿ ಅಮೂಲ್ಯ ಸದ್ಯ ಕೌಟುಂಬಿಕ ಜೀವನದಲ್ಲಿ ಬ್ಯುಸಿ ಆಗಿದ್ದಾರೆ. ಮದುವೆ ಬಳಿಕ ಸಿನಿಮಾರಂಗದಿಂದ ಅಮೂಲ್ಯ ದೂರಾಗಿದ್ದಾರೆ. ಇನ್ನು ಇತ್ತೀಚೆಗೆ ಅವಳಿ ಮಕ್ಕಳಿಗೆ ಜನ್ಮ ನೀಡುವ ಮೂಲಕ ಅಮೂಲ್ಯ ಸುದ್ದಿ ಆಗಿದ್ದರು.
ನಟಿ ಅಮೂಲ್ಯ ಸಾಮಾಜಿಕ ಜಾಲತಣದಲ್ಲಿ ಸದಾ ಸಕ್ರಿಯವಾಗಿ ಇರುತ್ತಾರೆ. ಫೋಟೊ ವಿಡಿಯೋಗಳನ್ನು ಹಂಚಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಹತ್ತಿರ ಆಗಿದ್ದಾರೆ. ಹಾಗಾಗಿ ತಮ್ಮ ಜೀವನದ ಹಲವು ವಿಚಾರಗಳನ್ನು ಸಾಮಾಜಿಕ ಜಾಲತಾಣದಲ್ಲೇ ಅಮೂಲ್ಯ ಶೇರ್ ಮಾಡಿಕೊಳ್ಳುತ್ತಾ ಇರುತ್ತಾರೆ.
ಮಕ್ಕಳ
ಜೊತೆ
ಅಣ್ಣಮ್ಮ
ದೇವಸ್ಥಾನದಲ್ಲಿ
ಹರಕೆ
ತೀರಿಸಿದ
ನಟಿ
ಅಮೂಲ್ಯ!
ಮಕ್ಕಳಾದ ಬಳಿಕ ನಟಿ ಅಮೂಲ್ಯ ಎಲ್ಲೂ ಕಾಣಿಸಿಕೊಂಡಿರಲಿಲ್ಲ. ಈಗ ಮಕ್ಕಳ ಜೊತೆಗೆ ಪ್ರತ್ಯಕ್ಷ ಆಗಿದ್ದಾರೆ. ತಮ್ಮ ಅವಳಿ ಮಕ್ಕಳ ಮೊದಲ ಫೋಟೊವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಮಕ್ಕಳ ಫೋಟೊ ಹಂಚಿಕೊಂಡ ಅಮೂಲ್ಯ!
ಅಮೂಲ್ಯ ಮೊದಲ ಬಾರಿಗೆ ಮಕ್ಕಳ ಫೋಟೊವನ್ನು ಹಂಚಿಕೊಂಡಿದ್ದಾರೆ. ಹಾಗಂತ ಅವರು ಮಕ್ಕಳ ಮುಖವನ್ನು ರಿವೀಲ್ ಮಾಡಿಲ್ಲ. ಬದಲಿಗೆ ಇಬ್ಬರೂ ಮಕ್ಕಳ ಕಾಲುಗಳು ಇರುವ ಫೋಟೊ ಮಾತ್ರ ಹಂಚಿಕೊಂಡಿದ್ದಾರೆ. ತನ್ನ ಗಲ್ಲದ ಮೇಲೆ ಮಕ್ಕಳ ಕಾಲುಗಳನ್ನು ಇರಿಸಿದ ಫೋಟೊ ಇದಾಗಿದೆ.
ಅವಳಿ
ಗಂಡು
ಮಕ್ಕಳಿಗೆ
ಜನ್ಮ
ನೀಡಿದ
ಗೋಲ್ಡನ್
ಕ್ವೀನ್
ಅಮೂಲ್ಯ
ಜಗದೀಶ್
ಅಣ್ಣಮ್ಮ ದೇವಸ್ಥಾನದಲ್ಲಿ ಕಾಣಿಸಿಕೊಂಡಿದ್ದ ಅಮೂಲ್ಯ ಕುಟುಂಬ!
ನಟಿ ಅಮೂಲ್ಯ ಮಕ್ಕಳ ಫೋಟೊಗಳನ್ನು ಯಾವಾಗ ಹಂಚಿಕೊಳ್ಳುತ್ತಾರೆ ಎಂದು ಅಭಿಮಾನಿಗಳು ಕಾಯುತ್ತಾ ಇದ್ದಾರೆ. ಇದಕ್ಕೂ ಮೊದಲು ಅಮೂಲ್ಯ ಕುಟುಂಬ ಕ್ಯಾಮೆರಾ ಕಣ್ಣಿಗೆ ಬಿದ್ದಿದ್ದು, ಅಣ್ಣಮ್ಮಾ ದೇವಸ್ಥಾನದಲ್ಲಿ. ಮಕ್ಕಳೊಂದಿಗೆ ದೇವಸ್ಥಾನಕ್ಕೆ ಅಮೂಲ್ಯ ಭೇಟಿ ಕೊಟ್ಟಿದ್ದರು.

ಮತ್ತೆ ನಟಿ ಅಮೂಲ್ಯ ಕಮ್‌ಬ್ಯಾಕ್?
2017ರಲ್ಲಿ ಜಗದೀಶ್ ಅವರನ್ನು ಮದುವೆಯಾದ ಅಮೂಲ್ಯಾ, ಚಿತ್ರಗಳಲ್ಲಿ ನಟಿಸುವುದನ್ನು ನಿಲ್ಲಿಸಿದ್ದಾರೆ. ಚೈತ್ರದ ಚಂದ್ರಮ, ಶ್ರಾವಣಿ ಸುಬ್ರಮಣ್ಯಂ, ಗಜಕೇಸರಿ ಸೇರಿದಂತೆ ಇನ್ನು ಹಲವು ಕನ್ನಡ ಸಿನಿಮಾಗಳಲ್ಲಿ ನಟಿಸಿದ ಅಮೂಲ್ಯಾ ಮುಂದಿನ ದಿನಗಳಲ್ಲಿ ಚಿತ್ರರಂಗಕ್ಕೆ ಬರುತ್ತಾರಾ ನೋಡಬೇಕಿದೆ.

ಕನ್ನಡದ ಯಶಸ್ವಿ ನಟಿ ಅಮೂಲ್ಯ!
'ಚಲುವಿನ ಚಿತ್ತಾರ' ಚಿತ್ರದ ಮೂಲಕ ನಾಯಕಿಯಾದ ನಟಿ ಅಮೂಲ್ಯ, ಕನ್ನಡ ಚಿತ್ರರಂಗದ ಗೋಲ್ಡನ್ ಕ್ವೀನ್ ಎಂದು ಖ್ಯಾತಿ ಗಳಿಸಿದ್ದಾರೆ. ಇನ್ನು ಬಾಲ ನಟಿಯಾಗಿಯೂ ಅಮೂಲ್ಯ ಕಿರುತೆರೆ ಮತ್ತು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ನಾಯಕಿ ಆದ ಬಳಿಕವೂ ಸಾಲು, ಸಾಲು ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ.