For Quick Alerts
  ALLOW NOTIFICATIONS  
  For Daily Alerts

  ನಟಿ ಉಮಾಶ್ರೀಯವರ ಕಾರು ಅಪಘಾತ; ಇಬ್ಬರು ಸ್ಥಳದಲ್ಲೇ ಸಾವು

  By ಫಿಲ್ಮ್ ಡೆಸ್ಕ್
  |

  ಸ್ಯಾಂಡಲ್ ವುಡ್ ನ ಹಿರಿಯ ನಟಿ ಹಾಗೂ ರಾಜಕಾರಣಿ ಉಮಾಶ್ರೀ ಅವರಿಗೆ ಸೇರಿದ ಕಾರು ತಡರಾತ್ರಿ ಅಪಘಾತಕ್ಕೀಡಾಗಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಬಂಡಿವಾಡ ಬಳಿ ನಡೆದಿದೆ.

  ಗದಗದಿಂದ ಹುಬ್ಬಳ್ಳಿಗೆ ಬರುತ್ತಿದ್ದ ನಟಿ ಉಮಾಶ್ರೀ ಅವರಿಗೆ ಸೇರಿದ ಇನ್ನೋವಾ ಕಾರು ಮತ್ತು ಹುಬ್ಬಳ್ಳಿಯಿಂದ ಗದಗದತ್ತ ಹೊರಟಿದ್ದ ಮತ್ತೊಂದು ಕಾರಿಗೆ ಡಿಕ್ಕಿಯಾಗಿದೆ ಎಂದು ತಿಳಿದುಬಂದಿದೆ. ಕಾರಿನಲ್ಲಿ ಉಮಾಶ್ರೀ ಇರಲಿಲ್ಲ. ಈ ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

  ಮಾಜಿ ಸಚಿವೆ, ನಟಿ ಉಮಾಶ್ರೀ ಮನೆಯಲ್ಲಿ ಕಳ್ಳತನಮಾಜಿ ಸಚಿವೆ, ನಟಿ ಉಮಾಶ್ರೀ ಮನೆಯಲ್ಲಿ ಕಳ್ಳತನ

  ಧ್ರುವ ಸರ್ಜಾ ನೋಡಲು ಮುಗಿಬಿದ್ದ ಅಭಿಮಾನಿಗಳು | Dhruva Sarja | Filmibeat Kannada

  ಉಮಾಶ್ರೀ ಅವರನ್ನು ಬಿಟ್ಟು ಕಾರು ಚಾಲಕ ತನ್ನೂರಿಗೆ ಹೊರಟಿದ್ದರು ಎಂದು ಹೇಳಲಾಗುತ್ತಿದೆ. ಓವರ್ ಟೇಕ್ ಮಾಡುವ ಭರದಲ್ಲಿ ಎದುರಿಗೆ ಬಂದ ಬಲೆನೋ ಕಾರಿನ ನಡುವೆ ಡಿಕ್ಕಿಯಾಗಿದೆ. ಮೃತರು ಬಲೆನೋ ಕಾರಿನಲ್ಲಿ ಇದ್ದವರು ಎಂದು ಮಾಹಿತಿ ತಿಳಿದುಬಂದಿದೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

  English summary
  Sandalwood Actress and politician Umashree car accident in Hubballi.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X