twitter
    For Quick Alerts
    ALLOW NOTIFICATIONS  
    For Daily Alerts

    ದಸರಾ ಚಲನಚಿತ್ರೋತ್ಸವಕ್ಕೆ ನಟಿ ಅನುಪ್ರಭಾಕರ್, ಅಮೃತಾ ಅಯ್ಯಂಗಾರ್ ಚಾಲನೆ

    By ಮೈಸೂರು ಪ್ರತಿನಿಧಿ
    |

    ಮೈಸೂರು ನಗರದ ಕಲಾಮಂದಿರದಲ್ಲಿ ಆಯೋಜಿಸಿದ್ದ ಸಿನಿಪ್ರಿಯರ ಮನ ತಣಿಸುವ ದಸರಾ ಚಲನಚಿತ್ರೋತ್ಸವಕ್ಕೆ ಚಿತ್ರ ನಟಿ ಅನುಪ್ರಭಾಕರ್, ಅಮೃತ ಅಯ್ಯಂಗಾರ್ ಚಾಲನೆ ನೀಡಿದರು.

    ನಂತರ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್, ಚಲನಚಿತ್ರೋತ್ಸವದಲ್ಲಿ ಹಲವು ಚಲನಚಿತ್ರಗಳನ್ನು ವೀಕ್ಷಿಸುವ ಸುವರ್ಣ ಅವಕಾಶ ಸಿಕ್ಕಿದೆ. ಚಲನಚಿತ್ರೋತ್ಸವದಲ್ಲಿ ಒಂದು ದಿನ ಪುನೀತ್ ರಾಜ್ ಕುಮಾರ್ ಅಭಿನಯದ ಚಿತ್ರಗಳನ್ನು ಮಾತ್ರವೇ ಪ್ರದರ್ಶಿಸುವಂತೆ ಸೂಚಿಸಲಾಗಿದೆ ಎಂದರು.

    ಕೋವಿಡ್ ಹಿನ್ನೆಲೆಯಲ್ಲಿ ಎರಡು ವರ್ಷಗಳಿಂದ ಸರಳ ದಸರಾ ಆಚರಣೆ ಮಾಡಲಾಗುತ್ತಿತ್ತು. ಆದರೆ ಈ ವರ್ಷ ಅದ್ದೂರಿ ಕಾರ್ಯಕ್ರಮ ಮಾಡಲಾಗುತ್ತಿದೆ. ಸುಮಾರು 124 ಕಿ.ಮಿ. ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ಯುವ ದಸರಾದಲ್ಲಿ ಅಪ್ಪು ನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ಪುನೀತ್ ರಾಜ್ ಕುರ್ಮಾ ಅವರ ಪತ್ನಿ ಅಶ್ವಿನಿ ಅವರು ಆಗಮಿಸಲಿದ್ದಾರೆ ಎಂದು ಹೇಳಿದರು.

    ದಸರಾ ಸಿನಿಮೋತ್ಸವದಲ್ಲಿ ಯಾವ್ಯಾವ ಚಿತ್ರಗಳಿವೆ? ಅತಿಥಿ ನಟರು ಯಾರು?ದಸರಾ ಸಿನಿಮೋತ್ಸವದಲ್ಲಿ ಯಾವ್ಯಾವ ಚಿತ್ರಗಳಿವೆ? ಅತಿಥಿ ನಟರು ಯಾರು?

    ಚಿತ್ರ ನಟಿ ಅನುಪ್ರಭಾಕರ್ ಅವರು ಮಾತನಾಡಿ, 2007ರಲ್ಲಿ ಪಾರ್ವತಮ್ಮ ರಾಜ್‌ ಕುಮಾರ್ ಹಾಗೂ ಎಂ.ಪಿ.ಶಂಕರ್ ಅವರ ಜೊತೆ ಇದೇ ಚಲನಚಿತ್ರೋತ್ಸವವನ್ನು ಉದ್ಘಾಟಿಸುವ ಮೂಲಕ ವೇದಿಕೆ ಹಂಚಿಕೊಂಡಿದ್ದೆ. ಮತ್ತೆ ಇದೇ ಕಾರ್ಯಕ್ರಮದಲ್ಲಿ ಭಾಗಿಯಾಗಿರುವುದಕ್ಕೆ ಸಂತೋಷವಾಗುತ್ತಿದೆ. ಈ ಬಾರಿಯ ಚಲನಚಿತ್ರೋತ್ಸವದಲ್ಲಿ ಅಪ್ಪುದಿನ ಮಾಡಿ, ಅಪ್ಪು ಚಿತ್ರಗಳನ್ನು ಪ್ರದರ್ಶನ ಮಾಡಲಾಗುತ್ತಿದೆ. ಕರ್ನಾಟಕ, ಕನ್ನಡಿಗರು ಇರುವವರೆಗೂ ಅಪ್ಪು ಅಮರರಾಗಿರುತ್ತಾರೆ ಎಂದು ಹೇಳಿದರು.

    ಸಿನಿಮಾ ನೋಡಲಿರುವ ಅಶ್ವಿನಿ ಪುನೀತ್ ರಾಜ್‌ಕುಮಾರ್

    ಸಿನಿಮಾ ನೋಡಲಿರುವ ಅಶ್ವಿನಿ ಪುನೀತ್ ರಾಜ್‌ಕುಮಾರ್

    ಚಲನಚಿತ್ರೋತ್ಸವದಲ್ಲಿ ಪುನೀತ್‌ರಾಜ್‌ಕುಮಾರ್ ಅವರ 6 ಚಿತ್ರಗಳು ಪ್ರದರ್ಶನಗೊಳ್ಳಲಿವೆ. ಪುನೀತ್‌ ರಾಜ್‌ಕುಮಾರ್ ಬಾಲನಟರಾಗಿ ನಟಿಸಿರುವ 'ಬೆಟ್ಟದ ಹೂ', ಅಂಜನಿ ಪುತ್ರ', 'ರಾಜಕುಮಾರ', 'ಮೈತ್ರಿ', 'ಪೃಥ್ವಿ' ಹಾಗೂ 'ಯುವರತ್ನ' ಸಿನಿಮಾ ಪ್ರದರ್ಶನಗೊಳ್ಳಲಿದೆ. ಸಂಚಾರಿ ವಿಜಯ್ ಅವರು ನಟಿಸಿರುವ 'ತಲೆದಂಡ', 'ಪುಕ್ಸಟ್ಟೆ ಲೈಫು', 'ಆಕ್ಟ್ 1978' ಸಿನಿಮಾಗಳು ಪ್ರದರ್ಶನಗೊಳ್ಳುತ್ತವೆ. ಪುನೀತ್‌ರಾಜ್‌ಕುಮಾರ್ ಅವರ ಪತ್ನಿ ಅಶ್ವಿನಿ ಶಕ್ತಿಧಾಮದ ಮಕ್ಕಳೊಂದಿಗೆ ಸೆ.27ರಂದು 'ಬೆಟ್ಟದ ಹೂ' ಚಿತ್ರ ವೀಕ್ಷಿಸಲಿರುವುದು ವಿಶೇಷ.

    ಕನ್ನಡದ ಯಾವ ಸಿನಿಮಾಗಳು?

    ಕನ್ನಡದ ಯಾವ ಸಿನಿಮಾಗಳು?

    ಅವನೇ ಶ್ರೀಮನ್ನನಾರಾಯಣ', '100', '777 ಚಾರ್ಲಿ', ಶ್ರೀ ಸುತ್ತೂರು ಮಠ-ಗುರುಪರಂಪರೆ, ಆದ್ಯಾ, ಅವತಾರ ಪುರುಷ, ಬಡವರಾಸ್ಕಲ್, ಭಜರಂಗಿ-2, ನಿನ್ನ ಸನಿಹಕೆ, ಒಂಭತ್ತನೇ ದಿಕ್ಕು, ಪೈಲ್ವಾನ್, ರೈಡರ್, ರಾಬರ್ಟ್, ಸಖತ್, ಸಲಗ, ಸೀತಾರಾಮ ಕಲ್ಯಾಣ, ಶಿವಾಜಿ ಸುರತ್ಕಲ್, ವಿಕ್ರಾಂತ್ ರೋಣ, ವಿಂಡೋಸೀಟ್, ಭರಾಟೆ, ದಿಯಾ, ದೃಶ್ಯ-2, ಗಾಳಿಪಟ, ಗರುಡಗಮನ ವೃಷಭ ವಾಹನ, ಜಂಟಲ್ ಮನ್, ಗ್‌ಟಿ ಬಾಕ್ಸ್, ಹರಿಕಥೆ ಅಲ್ಲ ಗಿರಿಕಥೆ, ಹೀರೋ, ಇಂಡಿಯಾ ವರ್ಸಸ್ ಇಂಗ್ಲೆಂಡ್, ಇನ್ಸ್‌ಪೆಕ್ಟರ್ ವಿಕ್ರಂ, ಕವಚ, ಕವಲುದಾರಿ, ಕೆಜಿಎಫ್ 1, ಕೆಜಿಎಫ್ 2, ಲವ್ ಮಾಕ್ಟೇಲ್ 1, ಲವ್ ಮಾಕ್ಟೇಲ್-2, ಮದಗಜ, ಮುಗಿಲುಪೇಟೆ ಸಿನಿಮಾಗಳು ಪ್ರದರ್ಶನಗೊಳ್ಳಲಿವೆ.

    ಭಾರತೀಯ ಸಿನಿಮಾ ವಿಭಾಗ

    ಭಾರತೀಯ ಸಿನಿಮಾ ವಿಭಾಗ

    ದಿ ಕ್ಲೌಡ್ ಅಂಡ್ ದಿ ಮ್ಯಾನ್, ಮನುಸಂಗಡ, ಮಿಂಚುಹುಳು, ಮೂಕಜ್ಜಿಯ ಕನಸುಗಳು, ನೀಲಿಹಕ್ಕಿ, ನೋಯ್, ಪದಕ, ಸಾರಾ ವಜ್ರ, ಉರಿಯಟ್ಟು, ವಿಡೋ ಆನ್ ಸೈಲೆನ್ಸ್, ಎ ಡಾಗ್ ಅಂಡ್ ಹಿಸ್ ಮ್ಯಾನ್, ಹರಿವ ನದಿಗೆ ಮೈಯೆಲ್ಲಾ ಕಾಲು, ಅಡಿಯುಗೊಡಾರ್ಡ್, ಅಗ್ನಿವರ್ಷ, ಐಸೇ ಹಿ, ಬೈ, ಬೂಂಬಾ ರೈಡ್, ಈ ಮಣ್ಣು, ಘೋಡೇ ಕೋ ಜಲೇಬಿ ಖಿಲಾನೆ ಲೇಜಾರಿಯಾ ಹೂಂ, ಹಾರುವ ಹಂಸಗಳು, ಇಲ್ಲಿರಲಾರೆ ಅಲ್ಲಿಗೆ ಹೋಗಲಾರೆ, ಇಂಟು ದಿ ಮಿಸ್ಟ್ ಸಿನಿಮಾಗಳು ಭಾರತೀಯ ಸಿನಿಮಾ ವಿಭಾಗದಲ್ಲಿ ಪ್ರದರ್ಶನಗೊಳ್ಳಲಿವೆ.

    ವಿಶ್ವ ಸಿನಿಮಾ ವಿಭಾಗ

    ವಿಶ್ವ ಸಿನಿಮಾ ವಿಭಾಗ

    ಎವೆರಿಥಿಂಗ್ ಎವೆರಿವೇರ್ ಆಲ್ ಅಟ್ ಒನ್ಸ್, ಎಕೈಲ್, ಐ ಡೇನಿಯಲ್ ಬ್ಲೇಕ್, ಲವ್‌ಲೆಸ್, ನಾರ್ಥ್ ಸೀ, ಪ್ಯಾರಲೆಲ್ ಮದರ್ಸ್, ಪ್ಯಾರಾಸೈಟ್, ಪೋಟ್ರೇಟ್ ಆಫ್ ಎ ಲೇಡಿ ಆನ್ ಫೈರ್, ಸಾರಿ ವಿ ಮಿಸ್ಡ್ ಯೂ, ಸ್ಪೆನ್ಸರ್, ದಿ ಬೈಸಿಕಲ್ ಥೀವ್ಸ್, ದಿ ಲಾಸ್ಟ್ ಎಕ್ಸೆಕ್ಯೂಷನ್, ದಿ ಸೆವೆಂತ್ ಸೀಲ್, ದಿ ಟ್ಯೂರಿನ್ ಹಾರ್ಸ್, ಥ್ರೋನ್ ಆಫ್ ಬ್ಲಡ್, ಅನ್‌ಡೈನ್, ವ್ಯಾಗಾಬಾಂಡ್, ವಾಕಬೌಟ್, ವೆನ್ ಹಿಟ್ಲರ್ ಸ್ಟೋಲ್ ಪಿಂಕ್ ರ್ಯಾಬಿಟ್, ವೈಫ್ ಆಫ್ ಎ ಸ್ಪೈ, ವಿಮೆನ್ ಇನ್ ದಿ ಡ್ಯೂನ್ಸ್, ಜೆಂಟಲ್ ಕ್ರೀಚರ್, ಎ ಹೀರೋ, ಅಡಲ್ಟ್ಸ್ ಇನ್ ದಿ ರೂಮ್, ಅನದರ್ ರೌಂಡ್, ಆಶ್ ಈಸ್ ದಿ ಪ್ಯೂರೆಸ್ಟ್ ವೈಟ್, ಕ್ಯಾಪರ್ನಾಮ್ ಸಿನಿಮಾಗಳು ಅಂತರಾಷ್ಟ್ರೀಯ ವಿಭಾಗದಲ್ಲಿ ಪ್ರದರ್ಶನಗೊಳ್ಳಲಿವೆ.

    English summary
    Actress Anu Prabhakar and Amrutha Aiyangar inaugurated Dasara film fest in Mysore on September 26. Puneeth Rajkumar, Sanchari Vijay movies screening specialy.
    Monday, September 26, 2022, 17:56
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X