ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ 'ಆ ದಿನಗಳು' ಖ್ಯಾತಿಯ ನಟಿ
ನಟಿ ಅರ್ಚನಾ ಶಾಸ್ತ್ರಿ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಬಹುಕಾಲದ ಗೆಳೆಯನ ಜೊತೆ ನಟಿ ಅರ್ಚನಾ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಅರ್ಚನಾ ಕಳೆದ ಕೆಲವು ವರ್ಷಗಳಿಂದ ಜಗದೀಶ್ ಅವರನ್ನು ಪ್ರೀತಿಸುತ್ತಿದ್ದರು.
ಸದ್ಯ ಮನೆಯವರ ಒಪ್ಪಿಗೆಯ ಮೇರಿಗೆ ಇಬ್ಬರು ಎಂಗೇಜ್ ಆಗಿದ್ದಾರೆ. ಜಗದೀಶ್ ಹೆಲ್ತ್ ಕೇರ್ ಕಂಪನಿಯ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅರ್ಚನಾ ಮತ್ತು ಜಗದೀಶ್ ನಿಶ್ಚಿತಾರ್ಥ ಹೈದರಾಬಾದ್ ನ ರಾಡಿಸನ್ ಹೋಟೆಲ್ ನಲ್ಲಿ ಅದ್ದೂರಿಯಾಗಿ ನೆರವೇರಿದೆ.
ಇಬ್ಬರ ನಿಶ್ಚಿತಾರ್ಥ ಸಮಾರಂಭಕ್ಕೆ ಸಾಕಷ್ಟು ಗಣ್ಯರು ಹಾಜರಾಗಿ ಅರ್ಚನಾ-ಜಗದೀಶ್ ಜೋಡಿಗೆ ಆಶೀರ್ವಾದ ಮಾಡಿದ್ದಾರೆ. ಇಬ್ಬರ ನಿಶ್ಚಿತಾರ್ಥದ ಒಂದಿಷ್ಟು ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡುವ ಮೂಲಕ ಸುಂದರ ಕ್ಷಣವನ್ನು ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ.

ಬಹುಕಾಲದಿಂದ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದ ಜಗದೀಶ್ ಮತ್ತು ಅರ್ಚನಾ ಪ್ರೀತಿಗೆ ಮನೆಯವರ ಗ್ರೀನ್ ಸೀಗ್ನಲ್ ಸಿಕ್ಕಿ ಸದ್ಯ ಉಂಗುರ ಬದಲಾಯಿಸಿಕೊಂಡಿದ್ದಾರೆ. ಆದ್ರೆ ಮದುವೆ ದಿನಾಂಕವನ್ನು ಇನ್ನೂ ಬಹಿರಂಗ ಪಡಿಸಿಲ್ಲ ಈ ಜೋಡಿ.
ಅರ್ಚನಾ ಆ ದಿನಗಳು ಚಿತ್ರದ ಮೂಲಕ ಕನ್ನಡ ಚಿತ್ರಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ಆ ನಂತರ ಮೈತ್ರಿ, ಮಿಂಚು, ಮೇಘ ವರ್ಷಿಣಿ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಕನ್ನಡ ಮಾತ್ರದಲ್ಲಿ ತೆಲುಗು ಮತ್ತು ತಮಿಳು ಚಿತ್ರರಂಗದಲ್ಲೂ ಮಿಂಚಿದ್ದಾರೆ. ಅರ್ಚನಾ ತೆಲುಗಿನಲ್ಲಿ ಅತೀ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. 2017ರ ನಂತರ ಅರ್ಚನಾ ತೆರೆಮೇಲೆ ಮಿಂಚಿಲ್ಲ. ಸದ್ಯ ನಿಶ್ಚಿತಾರ್ಥ ಮಾಡಿಕೊಂಡು ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ.


Click it and Unblock the Notifications











