ಫೋಟೋ ವೈರಲ್: ಮಾವಿನ ತೋಟದಲ್ಲಿ ಕೆಲಸ ಮಾಡುತ್ತಿರುವ ಆಶಿಕಾ ರಂಗನಾಥ್

ಕೊರೊನಾ ಲಾಕ್ ಡೌನ್ ನಿಂದ ಎಲ್ಲರೂ ಮನೆಯಲ್ಲೇ ಕಾಲಕಳೆಯುವಂತಾಗಿದೆ. ಸಿನಿ ಸೆಲೆಬ್ರಿಟಿಗಳು ಸಹ ಕುಟುಂಬದ ಜೊತೆ ಸಮಯ ಕಳೆಯುತ್ತಿದ್ದಾರೆ. ಚಿತ್ರೀಕರಣ ಕೂಡ ಸ್ಥಗಿತವಾದ ಕಾರಣ ಸಾಕಷ್ಟು ಮಂದಿ ಸೆಲೆಬ್ರಿಟಿಗಳು ಬೇರೆ ಬೇರೆ ಕೆಲಸಗಳಲ್ಲಿ ನಿರತರಾಗಿದ್ದಾರೆ.

ಇದೀಗ ಸ್ಯಾಂಡಲ್ ವುಡ್ ನಟಿ ಆಶಿಕಾ ರಂಗನಾಥ್ ತೋಟದಲ್ಲಿ ಕೆಲಸ ಮಾಡುತ್ತಿದ್ದಾರೆ. ಆಶಿಕಾ ತೋಟದಲ್ಲಿ ಇರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಲಾಕ್ ಡೌನ್ ನಿಂದ ತೋಟದ ಮನೆ ಸೇರಿರುವ ಆಶಿಕಾ ಮಾವಿನ ತೋಟದಲ್ಲಿ ಸಖತ್ ಎಂಜಾಯ್ ಮಾಡುತ್ತಿದ್ದಾರೆ.

ಕುಟುಂಬದವರ ಜೊತೆ ತೋಟದ ಕೆಲಸ ಮಾಡುತ್ತ ಸಮಯ ಕಳೆಯುತ್ತಿರುವ ಆಶಿಕಾ ಫೋಟೋಗಳಿಗೆ ಅಭಿಮಾನಿಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಮಾವಿನ ಹಣ್ಣುಗಳು, ತರಕಾರಿಗಳನ್ನು ಕೊಯ್ದು ಬುಟ್ಟಿಯಲ್ಲಿ ಸಂಗ್ರಹಿಸಿ ಹೊತ್ತು ತರುತ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

Actress Ashika Ranganath is working in Mango Farm

ಲಾಡ್ ಡೌನ್ ನಿಂದ ಸಾಕಷ್ಟು ಮಂದಿ ಕೃಷಿ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ. ರಿಯಲ್ ಸ್ಟಾರ್ ಉಪೇಂದ್ರ ತಮ್ಮ ತೋಟದಲ್ಲಿ ಕೆಲಸ ಮಾಡುತ್ತಿದ್ದ ಫೋಟೋ ಕೂಡ ಇತ್ತೀಚಿಗೆ ವೈರಲ್ ಆಗಿತ್ತು. ಇನ್ನು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸಹ ಕೃಷಿ ಕೆಲಸದಲ್ಲಿ ತೊಡಗಿಕೊಂಡಿದ್ದರು.

Actress Ashika Ranganath is working in Mango Farm

ಇನ್ನು ಸಿನಿಮಾ ವಿಚಾರಕ್ಕೆ ಬರುವುದಾದರೆ ಆಶಿಕಾ ಸದ್ಯ ಕೋಟಿಗೊಬ್ಬ-3 ರಿಲೀಸ್ ಗೆ ಎದುರು ನೋಡುತ್ತಿದ್ದಾರೆ. ಕೋಟಿಗೊಬ್ಬ-3ನಲ್ಲಿ ಆಶಿಕಾ, ಸುದೀಪ್ ಜೊತೆ ಹೆಜ್ಜೆ ಹಾಕಿದ್ದಾರೆ. ಇನ್ನು ಶ್ರೀಮುರಳಿ ನಟನೆಯ ಮದಗಜ, ರೆಮೋ, ಅವತಾರ ಪುರುಷ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.

Recommended Video

ಇನ್ಯಾವತ್ತೂ Salman Khan ಸಿನಿಮಾ ವಿಮರ್ಶೆ ಮಾಡೋದಿಲ್ಲ ಎಂದ‌ KRK | Filmibeat Kannada

More from Filmibeat

English summary
Actress Ashika Ranganath is working in Mango Farm.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X