For Quick Alerts
  ALLOW NOTIFICATIONS  
  For Daily Alerts

  'ಪೆಟ್ರೋಮ್ಯಾಕ್ಸ್'ನಲ್ಲಿ ಸತೀಶ್ ನೀನಾಸಂ ಜೊತೆ ಹರಿಪ್ರಿಯಾ ರೊಮ್ಯಾನ್ಸ್

  |

  'ನೀರ್ ದೋಸೆ' ಖ್ಯಾತಿಯ ವಿಜಯ್ ಪ್ರಸಾದ್ ಮತ್ತು ನಟ ಸತೀಶ್ ನೀನಾಸಂ ಕಾಂಬಿನೇಷನ್ ನಲ್ಲಿ ಸಿನಿಮಾ ಮೂಡಿ ಬರುತ್ತಿರುವ ವಿಷಯ ಹಳೆಯದು. ಚಿತ್ರಕ್ಕೆ ಪೆಟ್ರೋಮ್ಯಾಕ್ಸ್ ಎಂದು ಟೈಟಲ್ ಇಡಲಾಗಿದೆ. ಸ್ಯಾಂಡಲ್ ವುಡ್ ನ ನಿರೀಕ್ಷೆಯ ಸಿನಿಮಾಗಳಲ್ಲಿ ಒಂದಾಗಿರುವ ಪೆಟ್ರೋಮ್ಯಾಕ್ಸ್ ಈಗ ಚಿತ್ರೀಕರಣದ ಅಂಗಳಕ್ಕೆ ಎಂಟ್ರಿ ಕೊಡಲು ಸಜ್ಜಾಗಿದೆ.

  ಅಕ್ಟೋಬರ್ 19ರಿಂದ ಅಂದರೆ ಇವತ್ತಿನಿಂದ ಸಿನಿಮಾತಂಡ ಚಿತ್ರೀಕರಣಕ್ಕೆ ಹೊರಟಿದೆ. ಈಗಾಗಲೇ ಎಲ್ಲಾ ತಯಾರಿಗಳನ್ನು ಮಾಡಿಕೊಂಡಿರುವ ಸಿನಿಮಾತಂಡ ಲಾಕ್ ಡೌನ್ ಬಳಿಕ ಮೊದಲ ಬಾರಿಗೆ ಚಿತ್ರೀಕರಣಕ್ಕೆ ಹೊರಡುತ್ತಿದೆ. ಇದೀಗ ಚಿತ್ರದಿಂದ ಮತ್ತೊಂದು ಸುದ್ದಿ ಹೊರಬಿದ್ದಿದೆ.

  ಚಿತ್ರದಲ್ಲಿ ಸತೀಶ್ ನೀನಾಸಂ ಜೊತೆ ನಟಿಸಲು ನಾಯಕಿ ಫಿಕ್ಸ್ ಆಗಿದ್ದಾರೆ. ಹೌದು, ಪೆಟ್ರೋಮ್ಯಾಕ್ಸ್ ಸಿನಿಮಾದಲ್ಲಿ ನಟಿ ಹರಿಪ್ರಿಯಾ ನಾಯಕಿಯಾಗಿ ನಟಿಸುತ್ತಿದ್ದಾರೆ. ಇದೇ ಮೊದಲ ಬಾರಿಗೆ ಹರಿಪ್ರಿಯಾ ನೀನಾಸಂ ಸತೀಶ್ ಜೊತೆ ರೊಮ್ಯಾನ್ಸ್ ಮಾಡುತ್ತಿದ್ದಾರೆ.

  'ಪೆಟ್ರೋಮ್ಯಾಕ್ಸ್' ಚಿತ್ರೀಕರಣಕ್ಕೆ ದಿನಾಂಕ ನಿಗದಿ: ಸತೀಶ್ ನೀನಾಸಂಗೆ 'ನೀರ್ ದೋಸೆ' ವಿಜಯ್ ಪ್ರಸಾದ್ ನಿರ್ದೇಶನ'ಪೆಟ್ರೋಮ್ಯಾಕ್ಸ್' ಚಿತ್ರೀಕರಣಕ್ಕೆ ದಿನಾಂಕ ನಿಗದಿ: ಸತೀಶ್ ನೀನಾಸಂಗೆ 'ನೀರ್ ದೋಸೆ' ವಿಜಯ್ ಪ್ರಸಾದ್ ನಿರ್ದೇಶನ

  ಅಂದ್ಹಾಗೆ ಹರಿಪ್ರಿಯಾ ಈ ಮೊದಲು ವಿಜಯ್ ಪ್ರಸಾದ್ ನಿರ್ದೇಶನದ ನೀರ್ ದೋಸೆ ಸಿನಿಮಾದಲ್ಲಿ ನಟಿಸಿದ್ದರು. ಕುಮುದಾ ಪಾತ್ರದ ಮೂಲಕ ಚಿತ್ರಪ್ರಿಯ ನಿದ್ದೆಗೆಡಿಸಿದ್ದರು. ಇದೀಗ ವಿಜಯ್ ಪ್ರಸಾದ್ ನಿರ್ದೇಶನದ ಎರಡನೇ ಸಿನಿಮಾದಲ್ಲಿ ಹರಿಪ್ರಿಯಾ ಕಾಣಿಸಿಕೊಳ್ಳುತ್ತಿರುವುದು ಸಿನಿಮಾದ ಮೇಲಿನ ನಿರೀಕ್ಷೆ ಹೆಚ್ಚಾಗಿದೆ.

  ವಿಜಯ್ ಪ್ರಸಾದ್ ನಿರ್ದೇಶನದಲ್ಲಿ ಬರುತ್ತಿರುವ ಪೆಟ್ರೋಮ್ಯಾಕ್ಸ್ ಸಿನಿಮಾ ಈ ಹಿಂದೆಯೆ ಅನೌನ್ಸ್ ಆಗಿತ್ತು. ಸಿದ್ಲಿಂಗು ಸಿನಿಮಾ ರಿಲೀಸ್ ಆದ ಬಳಿಕ ಈ ಸಿನಿಮಾ ಮಾಡುವುದಾಗಿ ಘೋಷಣೆ ಮಾಡಿದ್ದರು. ಆದರೆ ಅಲ್ಲಿಗೆ ನಿಂತುಹೋಗಿತ್ತು. ಬಳಿಕ ವಿಜಯ್ ಪ್ರಸಾದ್ ಪರಿಮಳ ಲಾಡ್ಜ್ ಸಿನಿಮಾ ಅನೌನ್ಸ್ ಮಾಡಿದ್ರು. ಅಲ್ಲದೆ ಟೀಸರ್ ಅನ್ನು ರಿಲೀಸ್ ಮಾಡಿದ್ದಾರೆ. ಇದೀಗ 'ಪರಿಮಳ ಲಾಡ್ಜ್' ಟೇಕಾಫ್ ಆಗುವ ಮೊದಲೇ ಪೆಟ್ರೇಮ್ಯಾಕ್ಸ್ ಸಿನಿಮಾ ಪ್ರಾರಂಭಿಸಿದ್ದಾರೆ.

  ಉಪಾಧ್ಯಕ್ಷನ ಬೆಂಬಲಕ್ಕೆ ನಿಂತ ರಾಬರ್ಟ್ ನಿರ್ಮಾಪಕ | Upadyaksha | Chikkanna | Umapathy Srinivas

  ಅಂದ್ಹಾಗೆ ಸಿನಿಮಾದಲ್ಲಿ ಯಾರೆಲ್ಲ ಕಲಾವಿದರು ಇರಲಿದ್ದಾರೆ ಎನ್ನುವುದು ಕುತೂಹಲ ಮೂಡಿಸಿದೆ. ಈ ಮೊದಲು ನಾಯಕಿ ಪಾತ್ರಕ್ಕೆ ಅದಿತಿ ಪ್ರಭುದೇವ ಹೆಸರು ಕೇಳಿ ಬರುತ್ತಿತ್ತು. ಆದರೀಗ ಹರಿಪ್ರಿಯಾ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

  English summary
  Actress Hariprriya to play leading lady opposite Sathish Ninasam in Petromax Movie.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X