For Quick Alerts
  ALLOW NOTIFICATIONS  
  For Daily Alerts

  ಚಾಮುಂಡೇಶ್ವರಿ ತಾಯಿಯ ಆಶೀರ್ವಾದ ಪಡೆದ ನಟಿ ಹರಿಪ್ರಿಯಾ

  |

  ನಾಡಿನಾದ್ಯಂತ ದಸರಾ ಸಂಭ್ರಮ ಮನೆಮಾಡಿದೆ. ಮೈಸೂರಿನಲ್ಲಿ ದಸರಾ ಉತ್ಸವ ಜೋರಾಗಿದೆ. ಅನೇಕರು ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ಆಶೀರ್ವಾದ ಪಡೆಯುತ್ತಿದ್ದಾರೆ. ಹಬ್ಬದ ಸಮಯದಲ್ಲಿ ಭಕ್ತಾದಿಗಳ ಸಂಖ್ಯೆಯೂ ಜಾಸ್ತಿ ಇದೆ. ಇದೇ ಸಮಯದಲ್ಲಿ ಸ್ಯಾಂಡಲ್ ವುಡ್ ನಟಿ ಹರಿಪ್ರಿಯಾ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆದಿದ್ದಾರೆ.

  ಅಂದ್ಹಾಗೆ ಹರಿಪ್ರಿಯಾ ಸದ್ಯ ಮೈಸೂರಿನಲ್ಲಿ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ. ಸತೀಶ್ ನೀನಾಸಂ ನಾಯಕನಾಗಿ ನಟಿಸುತ್ತಿರುವ ಪೆಟ್ರೋಮ್ಯಾಕ್ಸ್ ಸಿನಿಮಾದ ಚಿತ್ರೀಕರಣ ಭರ್ಜರಿಯಾಗಿ ನಡೆಯುತ್ತಿದೆ. ದಸರಾ ಸಂಭ್ರಮದ ನಡುವೆಯೂ ಚಿತ್ರತಂಡ ಮೈಸೂರಿನಲ್ಲಿ ಶೂಟಿಂಗ್ ಮಾಡುತ್ತಿದೆ.

  ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ಉಪೇಂದ್ರಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ಉಪೇಂದ್ರ

  ಶೂಟಿಂಗ್ ನಿಂದ ಬಿಡುವು ಮಾಡಿಕೊಂಡು ನಟಿ ಹರಿಪ್ರಿಯಾ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ. ಚಾಮುಂಡಿ ತಾಯಿಯ ಆಶೀರ್ವಾದ ಪಡೆದು ಸಂತಸಪಟ್ಟಿದ್ದಾರೆ. ದೇವಸ್ಥಾನಕ್ಕೆ ಭೇಟಿ ನೀಡಿರುವ ಬಗ್ಗೆ ನಟಿ ಹರಿಪ್ರಿಯಾ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

  'ನವರಾತ್ರಿ ಶುಕ್ರವಾರ ಸಂಜೆ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದಿರುವುದು ಅಧ್ಭುತ. ದೇವಿ ಎಲ್ಲರನ್ನೂ ಆಶೀರ್ವಾದಿಸಲಿ. ಎಲ್ಲರಿಗೂ ನವರಾತ್ರಿ ಹಬ್ಬದ ಶುಭಾಶಯಗಳು' ಎಂದು ಬರೆದುಕೊಂಡಿದ್ದಾರೆ.

  CSK ವಿರುದ್ಧ ರೊಚ್ಚಿಗೆದ್ದ Simple Suni | CSK vs MI | Filmibeat Kannada

  ಚಿತ್ರೀಕರಣ ಕಾರಣ ಹರಿಪ್ರಿಯಾ ಇನ್ನು ಕೆಲವು ದಿನಗಳಕಾಲ ಮೈಸೂರಿನಲ್ಲೇ ಇರಲಿದ್ದಾರೆ. ಚಿತ್ರಕ್ಕೆ ನೀರ್ ದೋಸೆ ಖ್ಯಾತಿಯ ವಿಜಯ್ ಪ್ರಕಾಶ್ ಅಕ್ಷನ್ ಕಟ್ ಹೇಳುತ್ತಿದ್ದಾರೆ. ಮೊದಲ ಬಾರಿಗೆ ಹರಿಪ್ರಿಯಾ ಮತ್ತು ಸತೀಶ್ ನೀನಾಸಂ ಒಟ್ಟಿಗೆ ನಟಿಸುತ್ತಿದ್ದಾರೆ.

  English summary
  Actress Hariprriya Visits Mysore Chamundeshwari Temple on the occasion of Navaratri.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X