ಮದುವೆಯಾಗಿ ವರ್ಷದೊಳಗೆ ಗುಡ್ ನ್ಯೂಸ್ ಕೊಟ್ಟ ಹರ್ಷಿಕಾ–ಭುವನ್; ಹೊಸ ಅಥಿತಿ ಮನೆಗೆ ಬರೋದ್ಯಾವಾಗ?

ನಟಿ ಹರ್ಷಿಕಾ ಪೂಣಚ್ಚ ತಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಕಳೆದ ವರ್ಷ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ನಟಿಯೀಗ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ನಟಿ ಹರ್ಷಿಕಾ ಪೂಣಚ್ಚ ಈ ಖುಷಿಯಲ್ಲಿ ಫೋಟೋಶೂಟ್ ಮೂಲಕ ತಮ್ಮ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.

ಕಳೆದ ವರ್ಷ, ಅಂದರೆ, 2023, ಆಗಸ್ಟ್ 24ರಂದು ಹರ್ಷಿಕಾ ಪೂಣಚ್ಚ ಬಹುಕಾಲದ ಗೆಳೆಯ ನಟ ಭುವನ್ ಪೊನ್ನಣ್ಣ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಬಳಿಕ ಸಿನಿಮಾದಿಂದ ದೂರ ಉಳಿದಿದ್ದ ನಟಿ ಸೋಶಿಯಲ್ ಮೀಡಿಯಾದಲ್ಲಿ ಆಕ್ಟಿವ್ ಆಗಿದ್ದರು. ಜೊತೆ ಯೂಟ್ಯೂಬ್ ಚಾನೆಲ್‌ನಲ್ಲಿ ಕೊಡಗಿನ ವಿಶಿಷ್ಟ ಅಡುಗೆಯನ್ನು ತಮ್ಮ ಅಭಿಮಾನಿಗಳಿಗೆ ಮಾಡಿ ತೋರಿಸುತ್ತಿದ್ದರು. ಈ ಗ್ಯಾಪ್‌ನಲ್ಲೇ ತಮ್ಮ ಫ್ಯಾನ್ಸ್ ಖುಷಿ ವಿಷಯವನ್ನು ಹಂಚಿಕೊಂಡಿದ್ದಾರೆ.

Actress Harshika Poonacha and Bhuvan expecting the first baby in October

ಹರ್ಷಿಕಾ‌ ಮತ್ತು ಭುವನ್ ಪೊನ್ನಣ್ಣ ಕನ್ನಡ ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ಕೆಲಸ ಮಾಡುತ್ತಿದ್ದರು. ಒಟ್ಟಿಗೆ ಕೆಲವು ಪ್ರಾಜೆಕ್ಟ್‌ಗಳಿಗೂ ಕೈ ಹಾಕಿದ್ದರು. ಜೊತೆಯಾಗಿ ಸಮಾಜಮುಖಿ ಕೆಲಸಗಳಲ್ಲೂ ತೊಡಗಿಸಿಕೊಂಡಿದ್ದರು. ಇಬ್ಬರೂ ಕೊಡಗಿನವರೇ ಆಗಿದ್ದರಿಂದ ಆತ್ಮೀಯತೆ ಬೆಳೆದಿತ್ತು. ಹೀಗಾಗಿ ಹಲವು ವರ್ಷಗಳಿಂದ ಸ್ನೇಹಿತರಾಗಿದ್ದ ಈ ಜೋಡಿಯ ಸ್ನೇಹ ಪ್ರೀತಿಗೆ ತಿರುಗಿ ಕಳೆದ ವರ್ಷ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.

ಕೊಡಗಿನ ವಿರಾಜಪೇಟೆಯ ಅಮ್ಮತ್ತಿಯಲ್ಲಿ ನಟಿ ಹರ್ಷಿಕಾ ಮತ್ತು ಭುವನ್ ತಮ್ಮದೇ ಕೊಡವ ಶೈಲಿಯಲ್ಲಿ ಕುಟುಂಬಸ್ಥರು ಹಾಗೂ ಆಪ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಈ ಜೋಡಿಯ ಮದುವೆಗೆ ಸ್ಯಾಂಡಲ್‌ವುಡ್‌ನ ತಾರೆಯರು ಕೂಡ ಸಾಕ್ಷಿಯಾಗಿದ್ದರು. ಈಗ ಇಬ್ಬರೂ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ಖುಷಿ ವಿಷಯವನ್ನು ಫೋಟೊಶೂಟ್ ಮಾಡಿಸುವ ಮೂಲಕ ಹಂಚಿಕೊಂಡಿದ್ದಾರೆ.

Actress Harshika Poonacha and Bhuvan expecting the first baby in October

ಹರ್ಷಿಕಾ ಪೂಣಚ್ಚ ಈಗ ಐದು ತಿಂಗಳ ಗರ್ಭಿಣಿ. ಮುಂಬರುವ ಅಕ್ಟೋಬರ್ ತಿಂಗಳಲ್ಲಿ ಮೊದಲ ಮಗುವಿನ ನಿರೀಕ್ಷೆಯಲ್ಲಿ ಭುವನ್ ದಂಪತಿ ಇದ್ದಾರೆ. ಇದೇ ಖುಷಿಯಲ್ಲಿ ಈ ಜೋಡಿ ಫೋಟೊಶೂಟ್ ಮಾಡಿಸಿದೆ. ತಮ್ಮ ಕೊಡವ ಸಂಪ್ರದಾಯವನ್ನ ಬಿಟ್ಟು ಕೊಡದೆ ಅದರ ಹಿನ್ನಲೆಯಲ್ಲಿ ಅದ್ರದ್ದೇ ಆದ ಶೈಲಿಯಲ್ಲಿ ಫೋಟೋ ಶೂಟ್ ಮಾಡುವ ಮೂಲಕ ಖುಷಿಯನ್ನ ಹಂಚಿಕೊಂಡಿದ್ದಾರೆ. ಕೊಡವ ಸಾಂಪ್ರದಾಯ, ಉಡುಪು, ಕೊಡಗಿನ ದೊಡ್ಡಮನೆ, ಕೋವಿ, ಜೀವನಶೈಲಿ ಫೋಟೋಶೂಟ್ ಮಾಡಿಸಿ ಸಿಹಿ ಸುದ್ದಿಯನ್ನು ಹಂಚಿಕೊಂಡಿದ್ದಾರೆ.

ಖುಷಿ ವಿಷಯಗಳನ್ನು ಹಂಚಿಕೊಳ್ಳುವುದರ ಜೊತೆ ಹರ್ಚಿಕಾ ಪೂಣಚ್ಚ ತಮ್ಮ ಅಭಿಮಾನಿಗಳಿಗೆ ಸಂದೇಶವನ್ನು ರವಾನೆ ಮಾಡಿದ್ದಾರೆ. "ಇಂದಿನವರೆಗೂ ನಮ್ಮಿಬ್ಬರಿಗೆ ಸದಾ ಆಶೀರ್ವಾದಿಸುತ್ತಾ ಬಂದಿದ್ದೀರಿ. ಇನ್ನು ಮುಂದೆ ನಿಮ್ಮ ಪ್ರೀತಿ ,ಆಶೀರ್ವಾದ ನಮ್ಮ ಈ ಇನ್ನೊಂದು ಪುಟ್ಟ ಜೀವದ ಮೇಲು ಇರಲಿ. ಅಕ್ಟೋಬರ್‌ಗೆ ಕಾತುರದಿಂದ ಕಾಯುತ್ತಿದ್ದೇವೆ" ಎಂದು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ.

More from Filmibeat

English summary
Actress Harshika Poonacha and Bhuvan expecting the first baby in October. Know more:
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X