ಬ್ರೇಕ್ ಅಪ್ ನಂತರ ಹಾಟ್ ಫೋಟೋ ಶೇರ್ ಮಾಡಿದ ನಟಿ ಇಲಿಯಾನಾ
ದಕ್ಷಿಣ ಭಾರತ ಮತ್ತು ಬಾಲಿವುಡ್ ಚಿತ್ರರಂಗದಲ್ಲಿ ಮಿಂಚಿದ ನಟಿ ಇಲಿಯಾನಾ ಡಿಕ್ರೂಸ್ ಇತ್ತೀಚಿಗೆ ಹೆಚ್ಚು ಸುದ್ದಿ ಇರಲಿಲ್ಲ. ಸಿನಿಮಾ ಆಗಲಿ ಅಥವಾ ಸಾಮಾಜಿಕ ಜಾಲತಾಣದಲ್ಲಾಗಲಿ ಇಲಿಯಾನಾ ಹೆಚ್ಚು ಸಕ್ರೀಯರಾಗಿರಲಿಲ್ಲ. ಆದ್ರೀಗ ಇತ್ತೀಚಿಗೆ ಮತ್ತೆ ಸಾಮಾಜಿಕ ಜಾಲತಾಣದ ಮೂಲಕ ಸದ್ದು ಮಾಡುತ್ತಿದ್ದಾರೆ.
ಹಾಟ್ ಅವತಾರದ ಮೂಲಕ ದರ್ಶನ ನೀಡಿರುವ ಇಲಿಯಾನಾ ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ. ಇತ್ತೀಚಿಗೆ ಇಲಿಯಾನಾ ಇನ್ಸ್ಟಾಗ್ರಾಮ್ ನಲ್ಲಿ ಬಿಕಿನಿ ಫೋಟೋವನ್ನು ಶೇರ್ ಮಾಡಿದ್ದಾರೆ. ಈ ಫೋಟೋಗೆ ಅಭಿಮಾನಿಗಳಿಂದ ಸಿಕ್ಕಾಪಟ್ಟೆ ಲೈಕ್ಸ್ ಮತ್ತು ಕಮೆಂಟ್ಸ್ ಹರಿದು ಬರುತ್ತಿವೆ.
ಕಳೆದ ಎರಡು ವರ್ಷಗಳಿಂದ ಇಲಿಯಾನಾ ಛಾಯಗ್ರಾಹಕ ಆಂಡ್ರ್ಯೂ ನೀಬೊನ್ ರನ್ನ ಪ್ರೀತಿಸುತ್ತಿದ್ದರು. ಇಬ್ಬರು ಗೌಪ್ಯವಾಗಿ ಮದುವೆ ಕೂಡ ಆಗಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿತ್ತು. ಇಬ್ಬರು ಒಟ್ಟಿಗೆ ಇರುವ ಒಂದಿಷ್ಟು ಫೋಟೋಗಳನ್ನು ಇಲಿಯಾನಾ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದರು.

ಆದ್ರೀಗ ಇತ್ತೀಚಿಗೆ ಇಬ್ಬರು ಒಟ್ಟಿಗೆ ಕಾಣಿಸಿಕೊಳ್ಳುತ್ತಿಲ್ಲ. ಅಲ್ಲದೆ ಇಲಿಯಾನಾ ಇನ್ಸ್ಟಾಗ್ರಾಮ್ ನಲ್ಲಿದ್ದ ಆಂಡ್ರ್ಯೂ ಜೊತೆ ಇರುವ ಫೋಟೋಗಳನ್ನು ಡಿಲಿಟ್ ಮಾಡಿದ್ದಾರೆ. ಈಗ ಇಬ್ಬರ ನಡುವೆ ಬ್ರೇಕ್ ಅಪ್ ಆಗಿದೆ ಎನ್ನುವ ಸುದ್ದಿ ಕೇಳಿ ಬರುತ್ತಿದೆ. ಬ್ರೇಕ್ ಅಪ್ ನಂತರ ಮತ್ತೆ ಸಿನಿಮಾಗಳಲ್ಲಿ ಬ್ಯುಸಿಯಾಗುವ ಜೊತೆಗೆ ಸಾಮಾಜಿಕ ಜಾಲತಾಣದಲ್ಲೂ ಆಕ್ವೀವ್ ಆಗಿದ್ದಾರೆ.


Click it and Unblock the Notifications











