ನಟಿ ಕಾರುಣ್ಯ ರಾಮ್ ಅಂಗಾಂಗ ದಾನ ಶಿಬಿರ: ಧ್ರುವ ಸರ್ಜಾ, ಅಶ್ವಿನಿ ಪುನೀತ್ ರಾಜ್‌ಕುಮಾರ್ ಸಾಥ್
ಸ್ಯಾಂಡಲ್‌ವುಡ್ ನಟಿ ಕಾರುಣ್ಯ ರಾಮ್ ಕನ್ನಡ ಸಿನಿಮಾಗಳಲ್ಲಿ ಹಲವು ವರ್ಷಗಳಿಂದ ಸಕ್ರಿಯರಾಗಿದ್ದಾರೆ. ಈಗಾಗಲೇ ಹಲವು ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದಾರೆ. ಸ್ಟಾರ್ ನಟರೊಂದಿಗೆ ಕೆಲಸ ಮಾಡಿದ್ದಾರೆ. ಈಗ ಸಿನಿಮಾದ ಜೊತೆ ಜೊತೆಗೆ ಸಮಾಜಮುಖಿ ಕೆಲಸಗಳಲ್ಲಿಯೂ ಭಾಗಿಯಾಗಿದ್ದಾರೆ.
ಕಾರುಣ್ಯ ರಾಮ್ ಅಂಗಾಂಗ ದಾನ ಶಿಬಿರವನ್ನು ಹಮ್ಮಿಕೊಂಡಿದ್ದರು. ಈ ಮೂಲಕ ಅಂಗಾಂಗ ದಾನದ ಮಹತ್ವವನ್ನು ಸಾರುವುದರ ಜೊತೆ ದಾನ ಮಾಡುವುದಕ್ಕೆ ಉತ್ತೇಜನವನ್ನೂ ನೀಡಲಾಯಿತು. ಕರ್ನಾಟಕ ಸಿಂಡಿಕೇಟ್ ಫೌಂಡೇಶನ್ ಹಾಗೂ ಕಿಮ್ಸ್ ಆಸ್ಪತ್ರೆಯ ಸಹಯೋಗದಲ್ಲಿ ಈ ಅಂಗಾಂಗ ದಾನ ಶಿಬಿರ ಕಾರ್ಯಕ್ರಮ ಹಮ್ಮಿಕೊಂಡಿದ್ದರು.

ಈ ಅಂಗಾಂಗ ದಾನ ಶಿಬಿರ ಕಾರ್ಯಕ್ರಮದಲ್ಲಿ ಪವರ್‌ಸ್ಟಾರ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಹಾಗೂ ಧ್ರುವ ಸರ್ಜಾ ಮುಖ್ಯ ಅತಿಥಿಗಳಾಗಿದ್ದರು. ಹಾಗೇ ಕರ್ನಾಟಕ ಸಿಂಡಿಕೇಟ್ ಫೌಂಡೇಶನ್ ಫೌಂಡರ್ ಸಂತೋಷ್ ಹಾಗೂ ಶ್ರೀಮತಿ ಸುಕೇಶಿನಿ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಈ ಕಾರ್ಯಕ್ರಮಕ್ಕೆ ದೀಪ ಬೆಳಗುವ ಮೂಲಕ ಚಾಲನೆ ನೀಡಿದರು.
"ಅಂಗಾಂಗ ದಾನ ಮಾಡುವುದರಿಂದ ನಾವು ಸತ್ತ ಬಳಿಕವೂ ನಮ್ಮ ಉಪಯೋಗ ಆಗುತ್ತದೆ. ಅಂಗಾಂಗ ದಾನದಿಂದ ಪುಣ್ಯ ಸಿಗುತ್ತೆ, ಎಲ್ಲರೂ ಅಂಗಾಂಗ ದಾನ ಮಾಡಿ" ಎಂದು ಕಾರ್ಯಕ್ರಮ ಆಯೋಜಿಸಿದ್ದ ನಟಿ ಕಾರುಣ್ಯ ರಾಮ್ ಎಂದು ಮನವಿ ಮಾಡಿಕೊಂಡಿದ್ದಾರೆ.

"ಕೆಲವರಿಗೆ ನಾವು ಯೂಸ್ ಲೆಸ್ ಅಂತ ಹೇಳುತ್ತಿರುತ್ತೇವೆ. ಆದರೆ, ಯಾರು ಯೂಸ್ ಲೆಸ್ ಅಲ್ಲ. ಯೂಸ್ಡ್ ಲೆಸ್ ಅಷ್ಟೇ. ಅಂಗಾಂಗ ದಾನ ಮಾಡಿ ಇನ್ನೊಬ್ಬರಿಗೆ ಉಪಯೋಗ ಆಗುತ್ತೆ. ನಾವು ಸತ್ತ ಮೇಲೂ ಇನ್ನೊಬ್ಬರಿಗೆ ಉಪಯೋಗ ಆಗುತ್ತೆ ಎಂದರೆ ಯಾಕೆ ಮಾಡಬಾರದು. ಎಲ್ಲರೂ ದಯವಿಟ್ಟು ಇದಕ್ಕೆ ಕೈ ಜೋಡಿಸಿ. ನಿಮ್ಮ ಪಕ್ಕದವರಿಗೂ ಹೇಳಿ. ಇಂಥ ಶಿಬಿರಗಳನ್ನು ಎಲ್ಲಾ ಕಡೆ ಮಾಡಬೇಕು. ಹೆಚ್ಚು ಹೆಚ್ಚು ಆಗಬೇಕು" ಎಂದು ಧ್ರುವ ಸರ್ಜಾ ಉತ್ತೇಜನ ನೀಡಿದರು.
ಅಂಗಾಂಗ ದಾನ ಶಿಬಿರ ಕಾರ್ಯಕ್ರಮ ಯಶಸ್ಸಿಯಾಗಿದೆ. ಈ ಕಾರ್ಯಕ್ರಮದಲ್ಲಿ ಸುಮಾರು 1000 ರಿಂದ 1500 ಮಂದಿ ಅಂಗಾಂಗ ದಾನ ಪ್ರತಿಗೆ ಸಹಿ ಮಾಡಿದ್ದಾರೆಂದು ಆಯೋಜರು ಹೇಳಿಕೊಂಡಿದ್ದಾರೆ. ಈ ಕಾರ್ಯಕ್ರಮದಲ್ಲಿ ಹೆಲ್ತ್ ಅಂಡ್ ವೆಲ್ತ್ ಜಾಯಿಂಟ್ ಡೈರೆಕ್ಟರ್, ಕಿಮ್ಸ್ ಅಧ್ಯಕ್ಷರು, ಆರ್ಗನ್ ಡೊನೇಷನ್ ಡಿಪಾರ್ಟ್ಮೆಂಟ್ ಕೂಡ ಭಾಗಿಯಾಗಿತ್ತು.


Click it and Unblock the Notifications











