For Quick Alerts
  ALLOW NOTIFICATIONS  
  For Daily Alerts

  ಕಾಂಗ್ರೆಸ್ ಗೆ ಕೈ ಕೊಟ್ಟು ಬಿಜೆಪಿ ಸೇರಿದ ನಟಿ ಖುಷ್ಬೂ

  |

  ಬಹುಭಾಷಾ ನಟಿ ಮತ್ತು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವಕ್ತಾರೆ ಖುಷ್ಬೂ ಕಾಂಗ್ರೆಸ್ ಗೆ ಗುಡ್ ಬೈ ಹೇಳಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಇಂದು ದೆಹಲಿಗೆ ತೆರಳಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿಗೆ ರಾಜೀನಾಮೆ ಪತ್ರ ಸಲ್ಲಿಸಿದ ನಟಿ, ಬಳಿಕ ಬಿಜೆಪಿ ಸೇರಿದ್ದಾರೆ.

  ಖುಷ್ಬೂ ನೀವು ಯಾಕ್ ಹಿಂಗೆ! | Oneindia kannada

  ಬಿಜೆಪಿಯ ಕೇಂದ್ರ ಕಚೇರಿಯಲ್ಲಿಂದು ನಡೆದ ಸರಳ ಸಮಾರಂಭದಲ್ಲಿ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ನೇತೃತ್ವದಲ್ಲಿ ಖುಷ್ಬೂ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಮಯದಲ್ಲಿ ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬೀತ್ ಪಾತ್ರ, ತಮಿಳುನಾಡು ಬಿಜೆಪಿ ಅಧ್ಯಕ್ಷ ಎಲ್ ಮುರುಗನ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

  ಅತ್ಯಾಚಾರದ ಬೆದರಿಕೆ ಹಾಕಿದ ವ್ಯಕ್ತಿ: ನಟಿ ಖುಷ್ಬೂ ಮಾಡಿದ್ದೇನು ಗೊತ್ತೇ?

  ತಮಿಳುನಾಡು ವಿಧಾನ ಸಭಾ ಚುನಾವಣೆ ಸಮೀಪಿಸುತ್ತಿದೆ. ಮುಂದಿನ ವರ್ಷ ಚುನಾವಣೆ ನಡೆಯಲಿದೆ. ಬಿಜೆಪಿಯಿಂದ ಟಿಕೆಟ್ ಸಿಗುವ ಭರವಸೆ ಮೇರೆಗೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದಾರೆ. 2019ರ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗದೆ ನಿರಾಸೆಗೊಂಡಿದ್ದ ಖುಷ್ಬೂಗೆ ಬಿಜೆಪಿ ಟೆಕೆಟ್ ನೀಡುವುದಾಗಿ ಹೇಳಿದೆ.

  ಕನ್ನಡ, ತಮಿಳು, ತೆಲುಗು, ಹಿಂದಿ ಮಲಯಾಳಂ ಸಿನಿಮಾಗಳಲ್ಲಿ ನಟಿಸಿರುವ ಖುಷ್ಬೂ 2014ರಲ್ಲಿ ಕಾಂಗ್ರೆಸ್ ಸೇರಿದ್ದರು. ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವಕ್ತಾರೆಯಾಗಿದ್ದರು. ದಕ್ಷಿಣ ಭಾರತೀಯ ಸಿನಿಮಾದಲ್ಲಿ ಖ್ಯಾತನಟಿಯಾಗಿ ಗುರುತಿಸಿಕೊಂಡಿರುವ ಖುಷ್ಬೂ ಸದ್ಯ ಕಿರುತೆರೆಯಲ್ಲಿ ಅಭಿನಯಿಸುತ್ತಿದ್ದಾರೆ.

  ಕನ್ನಡದಲ್ಲಿ ಖುಷ್ಬೂ ರಣಧೀರ, ಅಂಜದ ಗಂಡು, ಶಾಂತಿ ಕ್ರಾಂತಿ, ಜೀವನದಿ ಸೇರಿದಂತೆ ಸೂಪರ್ ಹಿಟ್ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ದಕ್ಷಿಣಭಾರತದ ಎಲ್ಲಾ ಭಾಷೆಯಲ್ಲೂ ನಟಿಸಿರುವ ಖುಷ್ಬೂ ಸುಮಾರು 200ಕ್ಕು ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಸಿನಿಮಾ ಜೊತೆಗೆ ಕಿರುತೆರೆಯಲ್ಲೂ ಮಿಂಚಿದ್ದಾರೆ.

  English summary
  Actress Khushbu joins BJP After resigns from congress.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X