For Quick Alerts
  ALLOW NOTIFICATIONS  
  For Daily Alerts

  ಕಾಂಗ್ರೆಸ್ ಪಕ್ಷ ಬಿಟ್ಟು ಹೊರನಡೆದ ನಟಿ ಖುಷ್ಬೂ ಸುಂದರ್?

  |

  ತಮಿಳು ನಟಿ ಖುಷ್ಬೂ ರಾಜಕೀಯ ಜರ್ನಿಯಲ್ಲಿ ಮತ್ತೆ ಬದಲಾವಣೆಯ ಗಾಳಿ ಬೀಸಿದೆ. ಡಿಎಂಕೆ ಮೂಲಕ ರಾಜಕೀಯ ಪ್ರವೇಶ ಮಾಡಿದ್ದ ನಟಿ ಖುಷ್ಬೂ ನಂತರ ಕಾಂಗ್ರೆಸ್ ಪಕ್ಷ ಸೇರಿದ್ದರು. ಈಗ ಈಗ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ ಎಂದು ತಿಳಿದು ಬಂದಿದೆ.

  ಖುಷ್ಬೂ ನೀವು ಯಾಕ್ ಹಿಂಗೆ! | Oneindia kannada

  ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವಕ್ತಾರೆಯಾಗಿದ್ದ ಖುಷ್ಬೂ ಅವರನ್ನು ಆ ಸ್ಥಾನದಿಂದ ಕೆಳಗೆ ಇಳಿಸಲಾಗಿದೆ. ಹಾಗಾಗಿ, ಕಾಂಗ್ರೆಸ್‌ಗೆ ಖುಷ್ಬೂ ಗುಡ್ ಬೈ ಹೇಳಿದ್ದಾರೆ ಎನ್ನಲಾಗಿದೆ.

  ವಕ್ತಾರ ಸ್ಥಾನದಿಂದ ಖುಷ್ಬೂ ತೆಗೆದು ಹಾಕಿದ ಕಾಂಗ್ರೆಸ್!

  2010ರಲ್ಲಿ ಡಿಎಂಕೆ ಪಕ್ಷ ಸೇರುವ ಮೂಲಕ ರಾಜಕೀಯ ಪ್ರವೇಶ ಮಾಡಿದ್ದ ಖುಷ್ಬೂ ನಾಲ್ಕು ವರ್ಷಗಳ ನಂತರ ಡಿಎಂಕೆಗೆ ಬಿಟ್ಟು ಹೊರ ನಡೆದರು. ಆಮೇಲೆ 2014ರಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಸೇರಿದ್ದರು.

  ಅಲ್ಲಿಂದ ಕಾಂಗ್ರೆಸ್ ಕಟ್ಟಾಳು ಆಗಿ ಖುಷ್ಬೂ ರಾಜಕಾರಣ ಮಾಡಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ಖುಷ್ಬೂ ಟಿಕೆಟ್ ಆಕಾಂಕ್ಷಿ ಸಹ ಆಗಿದ್ದರು. ಆದ್ರೆ, ಡಿಎಂಕೆ ಜೊತೆಗಿನ ಮೈತ್ರಿ ಹಿನ್ನೆಲೆ ಟಿಕೆಟ್ ಕೈ ತಪ್ಪಿತ್ತು. ರಾಜ್ಯಸಭೆ ಟಿಕೆಟ್ ಸಿಗುವ ನಿರೀಕ್ಷೆಯಲ್ಲಿದ್ದರು. ಅದು ನಿರಾಸೆ ಆಯಿತು.

  ಈಗ, ಕಾಂಗ್ರೆಸ್ ಪಕ್ಷದಿಂದಲೂ ಖುಷ್ಬೂ ಹೊರ ಬಂದಿದ್ದಾರೆ ಎನ್ನಲಾಗಿದೆ. ಕೈ ಪಕ್ಷಕ್ಕೆ ರಾಜೀನಾಮೆ ನೀಡಿರುವ ಖುಷ್ಬೂ ಬಿಜೆಪಿ ಸೇರಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿದೆ. ಆದ್ರೆ, ಈ ಬಗ್ಗೆ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.

  English summary
  Tamil Actress Khushbu Sundar dropped as AICC spokesperson with immediate effect.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X