For Quick Alerts
  ALLOW NOTIFICATIONS  
  For Daily Alerts

  ಕೋವಿಡ್ ಲಸಿಕೆ ಪಡೆದ ನಟಿ ಮಾಲಾಶ್ರೀ

  |

  ಸ್ಯಾಂಡಲ್ ವುಡ್ ನಟಿ ಮಾಲಾಶ್ರೀ ಪತಿ ರಾಮು ಅವರನ್ನು ಕಳೆದುಕೊಂಡ ದುಃಖದಲ್ಲಿದ್ದಾರೆ. ಇತ್ತೀಚಿಗಷ್ಟೆ ನಿರ್ಮಾಪಕ ಕೋಟಿ ರಾಮು ಕೊರೊನಾದಿಂದ ಕೊನೆಯುಸಿರೆಳೆದರು. ಕೊರೊನಾ ವೈರಸ್‌ಗೆ ತುತ್ತಾಗಿದ್ದ ರಾಮು ಆಸ್ಪತ್ರೆಗೆ ದಾಖಲಾಗಿದ್ದರು. ಇನ್ನೇನು ಗುಣಮುಖರಾದರು ಎನ್ನುವಷ್ಟೊತ್ತಿಗೆ ಇಹಲೋಕ ತ್ಯಜಿಸಿದರು.

  ಪತಿಯ ನೆನಪಿನಲ್ಲೇ ಬದುಕುತ್ತಿರುವ ನಟಿ ಮಾಲಾಶ್ರೀ ಈಗ ಕೊರೊನಾ ಲಸಿಕೆ ಪಡೆದಿದ್ದಾರೆ. ಕೋವಿಡ್ ಮೊದಲ ಡೋಸ್ ಪಡೆದ ಮಾಲಾಶ್ರೀ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಂಚಿಕೊಂಡಿದ್ದಾರೆ. "ವ್ಯಾಕ್ಸಿನೇಟೆಡ್" ಬರೆದುಕೊಂಡಿದ್ದಾರೆ.

  ಮಾಲಾಶ್ರೀ ಫೋಟೋಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿ, "ನೀವು ಎಷ್ಟು ಅತ್ತಿದ್ದೀರಿ ಎನ್ನುವುದು ನಿಮ್ಮ ಕಣ್ಣುಗಳು ಹೇಳುತ್ತಿವೆ" ಎಂದು ಕಾಮೆಂಟ್ ಮಾಡುತ್ತಿದ್ದಾರೆ. ಈಗಾಗಲೇ ಸಾಕಷ್ಟು ಮಂದಿ ಕೊರೊನಾ ವ್ಯಾಕ್ಸಿನ್ ಪಡೆದಿದ್ದಾರೆ. ಮಾರಕ ಕೊರೊನಾದಿಂದ ರಕ್ಷಿಸಿಕೊಳ್ಳಲು ಲಸಿಕೆಯೊಂದೆ ದಾರಿ ಎಂದು ಎಲ್ಲರೂ ವ್ಯಾಕ್ಸಿನ್ ಮೊರೆಹೋಗಿದ್ದಾರೆ.

  ಬಹುತೇಕ ಕಲಾವಿದರು ಸಹ ಲಸಿಕೆ ಪಡೆದಿದ್ದಾರೆ. ಸ್ಯಾಂಡಲ್‌ವುಡ್‌ನಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್, ಅನಂತ್ ನಾಗ್, ರಾಘವೇಂದ್ರ ರಾಜ್ ಕುಮಾರ್ ಸೇರಿದಂತೆ ಅನೇಕರು ಕೊರೊನಾ ಲಸಿಕೆ ಪಡೆದಿದ್ದಾರೆ. ಸ್ಯಾಂಡಲ್ ವುಡ್ ಮಾತ್ರವಲ್ಲದೆ ಪರಭಾಷೆ ಕಲಾವಿದರು ಸಹ ಲಸಿಕೆ ಹಾಕಿಸಿಕೊಂಡು, ಅಭಿಮಾನಿಗಳಿಗೂ ಲಸಿಕೆ ಹಾಕಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.

  Recommended Video

  Sudha Murty ಪ್ರಕಾರ ಸಿನಿಮಾವನ್ನ ಥಿಯೇಟರ್ನಲ್ಲೇ ನೋಡ್ಬೇಕು ಯಾಕೆ ಗೊತ್ತಾ? | Oneindia Kannada

  ಕೊರೊನಾ ಎರಡನೇ ಅಲೆಯ ಭೀಕರತೆ ಎಲ್ಲರನ್ನೂ ಬೆಚ್ಚಿಬೀಳಿಸಿದೆ. 2ನೇ ಅಲೆಯಿಂದ ದೇಶದಲ್ಲಿ ಲಕ್ಷಾಂತರ ಜನರು ಪ್ರಾಣ ಕಳೆದುಕೊಂಡಿದ್ದಾರೆ. ಪ್ರತಿ ರಾಜ್ಯದಲ್ಲೂ ಕೊರೊನಾ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿತ್ತು. ಆದರೂ ಕೊರೊನಾ ನಿಯಂತ್ರಣ ಮೀರಿ ಅಟ್ಟಹಾಸ ಮೆರೆಯುತ್ತಿದೆ. ಕೊರೊನಾ ನಿಯಂತ್ರಣಕ್ಕೆ ಲಸಿಕೆಯೊಂದೆ ಪರಿಹಾರವೆಂದು ಎಲ್ಲರು ಲಸಿಕೆ ಹಾಕಿಸಿಕೊಳ್ಳುತ್ತಿದ್ದಾರೆ.

  English summary
  Actress Malashree get first dose of Covid-19 vaccine; shares picture.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X