ಕಿಚ್ಚನ 'ಮ್ಯಾಕ್ಸ್' ಸಿನಿಮಾ ನೋಡಿ ಶಿಳ್ಳೆ, ಚಪ್ಪಾಳೆ ಹೊಡೆದು ಸಂಭ್ರಮಿಸಿದ ನಟಿ

ಬ್ಲಾಕ್‌ಬಸ್ಟರ್ ಹಿಟ್ 'ಮ್ಯಾಕ್ಸ್' ಸಿನಿಮಾ 25ನೇ ದಿನದತ್ತ ಮುನ್ನುಗ್ಗುತ್ತಿದೆ. ಬಾಕ್ಸಾಫೀಸ್‌ನಲ್ಲಿ ಗೆಲುವಿನ ಓಟ ನಿಲ್ಲದೇ ಸಾಗಿದೆ. ಸಂಕ್ರಾಂತಿ ಸಂಭ್ರಮದಲ್ಲಿ ಕೂಡ ಸಿನಿಮಾ ಉತ್ತಮ ಗಳಿಕೆ ಕಂಡಿದೆ. ಶೀಘ್ರದಲ್ಲೇ ಸಿನಿಮಾ ಓಟಿಟಿಗೆ ಬರುತ್ತದೆ ಎನ್ನುವ ಚರ್ಚೆ ನಡೀತಿದೆ.

ವಿಜಯ್ ಕಾರ್ತಿಕೇಯನ್ ನಿರ್ದೇಶನದ ಆಕ್ಷನ್ ಥ್ರಿಲ್ಲರ್ 'ಮ್ಯಾಕ್ಸ್' ಸಿನಿಮಾ ಕ್ರಿಸ್‌ಮಸ್ ಸಂಭ್ರಮದಲ್ಲಿ ಬಿಡುಗಡೆ ಆಗಿತ್ತು. ಈಗಾಗಲೇ ಸಿನಿಮಾ 50 ಕೋಟಿ ರೂ. ಗ್ರಾಸ್ ಕಲೆಕ್ಷನ್ ಮಾಡಿದೆ ಎಂದು ಹೇಳಲಾಗುತ್ತಿದೆ. ಇದು ಕಿಚ್ಚನ ಅಭಿಮಾನಿಗಳ ಸಂಭ್ರಮಕ್ಕೆ ಕಾರಣವಾಗಿದೆ. ನಿರ್ಮಾಪಕರು, ವಿತರಕರು, ಪ್ರದರ್ಶಕರು ಎಲ್ಲರೂ ಲಾಭದಲ್ಲಿ ಇದ್ದಾರೆ.

Actress Prathima thakur whistling while watching Sudeep s Max movie

ಬಾದ್‌ಶಾ ಕಿಚ್ಚ ಸುದೀಪ್ ನಟನೆಗೆ ದೊಡ್ಡ ಅಭಿಮಾನಿ ಬಳಗ ಇದೆ. ಖ್ಯಾತ ನಟ- ನಟಿಯರು ಕೂಡ ಕಿಚ್ಚನ ಆಂಗ್ರಿ ಯಂಗ್‌ಮ್ಯಾನ್ ಇಮೇಜ್‌ಗೆ ಫಿದಾ ಆಗಿದ್ದಾರೆ. ಸದ್ಯ 'ಮ್ಯಾಕ್ಸ್' ಸಿನಿಮಾ ನೋಡಿ ನಟಿಯೊಬ್ಬರು ಶಿಳ್ಳೆ ಚಪ್ಪಾಳೆ ಹೊಡೆದು ಸಂಭ್ರಮಿಸಿದ ವೀಡಿಯೋ ವೈರಲ್ ಆಗುತ್ತಿದೆ. ಸ್ವತಃ ಆ ನಟಿಯೇ ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ಹಂಚಿಕೊಂಡಿದ್ದಾರೆ.

ಒಂದು ರಾತ್ರಿಯಲ್ಲಿ ನಡೆಯುವ ಕಥೆ 'ಮ್ಯಾಕ್ಸ್' ಚಿತ್ರದಲ್ಲಿದೆ. ಖಡಕ್ ಪೊಲೀಸ್ ಆಫೀಸರ್ ಅರ್ಜುನ್ ಮಹಾಕ್ಷಯ್ ಮಾತ್ರದಲ್ಲಿ ಕಿಚ್ಚ ಅಬ್ಬರಿಸಿದ್ದಾರೆ. ಕಿಚ್ಚ ಖಡಕ್ ನಟನೆಗೆ ಪ್ರೇಕ್ಷಕರು ಫಿದಾ ಆಗಿದ್ದಾರೆ. ಕೊಟ್ಟ ಕಾಸಿಗೆ ಮೋಸ ಇಲ್ಲ, ಪಕ್ಕಾ ಪೈಸಾ ವಸೂಲ್ ಸಿನಿಮಾ ಎಂದು ಮೆಚ್ಚುಗೆ ಸೂಚಿಸುತ್ತಿದ್ದಾರೆ. 'ಮ್ಯಾಕ್ಸ್' ಸಕ್ಸಸ್ ಇಡೀ ಚಿತ್ರತಂಡಕ್ಕೆ ಖುಷಿ ತಂದಿದೆ. ಕಿಚ್ಚನ ಮುಂದಿನ ಸಿನಿಮಾ ಬಗ್ಗೆ ಕುತೂಹಲ ಕೆರಳುವಂತಾಗಿದೆ.

ಎರಡು ವರ್ಷಗಳ ಬಳಿಕ ಸುದೀಪ್ ನಟನೆಯ ಸಿನಿಮಾ ತೆರೆಗೆ ಬಂದಿತ್ತು. ಅಭಿಮಾನಿಗಳು ಪದೇ ಪದೆ ಸಿನಿಮಾ ನೋಡಿ ಎಂಜಾಯ್ ಮಾಡಿದ್ದಾರೆ. ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ ದೊಡ್ಡ ಬಲ ತುಂಬಿದೆ. ವರಲಕ್ಷ್ಮಿ ಶರತ್‌ಕುಮಾರ್, ಸುಕೃತಾ ವಾಗ್ಲೆ, ಸಂಯುಕ್ತಾ ಹೊರನಾಡ್, ಸುನಿಲ್, ಉಗ್ರಂ ಮಂಜು ಸೇರಿದಂತೆ ದೊಡ್ಡ ತಾರಾಗಣ ಚಿತ್ರದಲ್ಲಿದೆ.

ಕಿಚ್ಚ ಸುದೀಪ್ ದೊಡ್ಡ ಅಭಿಮಾನಿ ಕಿರುತೆರೆ ನಟಿ ಪ್ರತಿಮಾ ಠಾಕೂರ್. ಕನ್ನಡ ಹಾಗೂ ತೆಲುಗು ಧಾರಾವಾಹಿಗಳಲ್ಲಿ ಆಕೆ ನಟಿಸಿದ್ದಾರೆ. ಕನ್ನಡದ 'ದೊರೆಸಾನಿ' ಧಾರಾವಾಹಿಯಲ್ಲಿ ಮೊದಲಿಗೆ ನಟಿಸಿದ್ದರು. ಬಳಿಕ ತೆಲುಗು ಕಿರುತೆರೆಗೂ ಕಾಲಿಟ್ಟಿದ್ದರು. ಇತ್ತೀಚೆಗೆ ಆಕೆ ಮ್ಯಾಕ್ಸ್ ಸಿನಿಮಾ ನೋಡಿ ಎಂಜಾಯ್ ಮಾಡಿದ್ದಾರೆ.

ಚಿತ್ರಮಂದಿರದಲ್ಲಿ 'ಮ್ಯಾಕ್ಸ್' ಸಿನಿಮಾ ನೋಡುವ ಕಿಚ್ಚನ ಆಕ್ಷನ್ ಧಮಾಕ ನೋಡಿ ಶಿಳ್ಳೆ ಚಪ್ಪಾಳೆ ಹೊಡೆದು ಖುಷಿಪಟ್ಟಿದ್ದಾರೆ. "ಬಾಸ್" ಎಂದು ಕ್ಯಾಪ್ಷನ್ ಕೊಟ್ಟು ವೀಡಿಯೋ ಹಂಚಿಕೊಂಡಿದ್ದಾರೆ. ಆಕೆಯ ಪೋಸ್ಟ್‌ಗೆ ಸುದೀಪ್ ಅಭಿಮಾನಿಗಳು ಲೈಕ್ಸ್, ಕಾಮೆಂಟ್ಸ್ ಮೂಲಕ ಮೆಚ್ಚುಗೆ ಸೂಚಿಸುತ್ತಿದ್ದಾರೆ. ಸದ್ಯ ಆ ಪೋಸ್ಟ್ ವೈರಲ್ ಆಗುತ್ತಿದೆ.

ಮೊದಲಿಗೆ ಆಲ್ಬಮ್ ಸಾಂಗ್ಸ್, ಶಾರ್ಟ್ ಫಿಲ್ಮ್ಸ್, ರೀಲ್ಸ್ ಮಾಡುತ್ತಿದ್ದ ಪ್ರತಿಮಾ ಬಳಿಕ ಆಡಿಷನ್ ಕೊಟ್ಟು ಧಾರಾವಾಹಿಗೆ ಆಯ್ಕೆ ಆಗಿದ್ದರು. 'ದೊರೆಸಾನಿ' ಧಾರಾವಾಹಿಯಲ್ಲಿ ನಾಯಕಿಯ ತಂಗಿ ಗೌತಮಿ ಎಂಬ ಪಾತ್ರದಲ್ಲಿ ನಟಿಸಿದ್ದರು. ತೆಲುಗಿನ 'ಶಿವಾಂಗಿ' ಎಂಬ ಧಾರಾವಾಹಿಯಲ್ಲಿ ಕೂಡ ಪ್ರತಿಮಾ ಬಣ್ಣ ಹಚ್ಚಿದ್ದರು. ದ್ವಿತಿಯ ಪಿಯುಸಿ ಮುಗಿಸಿರುವ ಪ್ರತಿಮಾ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟೀವ್ ಆಗಿದ್ದಾರೆ.

ಜನವರಿ 31ಕ್ಕೆ ಸಿನಿಮಾ ಜೀ-5 ಓಟಿಟಿ ಪ್ಲಾಟ್‌ಫಾರ್ಮ್‌ನಲ್ಲಿ ಸ್ಟ್ರೀಮಿಂಗ್ ಆಗುತ್ತದೆ ಎನ್ನುವ ಚರ್ಚೆ ಸೋಶಿಯಲ್ ಮೀಡಿಯಾದಲ್ಲಿ ನಡೀತಿದೆ. ಆದರೆ ಸಿನಿಮಾ ಓಟಿಟಿ ರಿಲೀಸ್ ಬಗ್ಗೆ ಅಧಿಕೃತ ಮಾಹಿತಿ ಸಿಕ್ಕಿಲ್ಲ. ಈಗಾಗಲೇ ಬುಕ್‌ಮೈಶೋನಲ್ಲಿ ಮಾತ್ರ 8 ಲಕ್ಷಕ್ಕೂ ಅಧಿಕ ಟಿಕೆಟ್ ಬುಕ್ ಮಾಡಿ ಪ್ರೇಕ್ಷಕರು ಸಿನಿಮಾ ನೋಡಿದ್ದಾರೆ ಎನ್ನಲಾಗ್ತಿದೆ. ಒಟ್ಟಾರೆ ಸಿನಿಮಾ ಬ್ಲಾಕ್‌ಬಸ್ಟರ್ ಹಿಟ್ ಲಿಸ್ಟ್ ಸೇರಿದೆ.

More from Filmibeat

English summary
Actress enjoys Kichcha sudeep starrer Max movie in theater with fans
Read more about: max sudeep sandalwood
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X