For Quick Alerts
  ALLOW NOTIFICATIONS  
  For Daily Alerts

  ರಾಧಿಕಾ ಪಂಡಿತ್ ಹುಟ್ಟುಹಬ್ಬ: ಅಭಿಮಾನಿಗಳಿಗೆ ಪ್ರೀತಿಯ ಪತ್ರ ಬರೆದ ಸಿಂಡ್ರೆಲ್ಲಾ

  |

  ಸ್ಯಾಂಡಲ್ ವುಡ್ ನ ಸಿಂಡ್ರೆಲ್ಲಾ ರಾಧಿಕಾ ಪಂಡಿತ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ. ರಾಧಿಕಾ ಪ್ರತಿವರ್ಷ ತನ್ನ ಹುಟ್ಟುಹಬ್ಬವನ್ನು ಅಭಿಮಾನಿಗಳ ಜೊತೆ ಆಚರಿಸಿಕೊಳ್ಳುತ್ತಿದ್ದರು. ಆದರೆ ಕಳೆದ ಎರಡು ವರ್ಷಗಳಿಂದ ಅಭಿಮಾನಿಗಳಲ್ಲಿದೆ, ಕುಟುಂಬದವರ ಜೊತೆ ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಂಡು ಸಂಭ್ರಮಿಸುತ್ತಿದ್ದಾರೆ.

  ಎರಡು ಮುದ್ದಾದ ಮಕ್ಕಳ ತಾಯಿ ರಾಧಿಕಾ ಈ ವರ್ಷ ಸಹ ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ. ಎಲ್ಲರಾ ಜೊತೆ ಹುಟ್ಟುಹಬ್ಬ ಆಚರಣೆ ಮಾಡಬೇಕು ಎನ್ನುವ ಆಸೆ ಇದ್ದರೂ ಸಹ ನಿಮ್ಮಲ್ಲರ ಆರೋಗ್ಯದ ದೃಷ್ಟಿಯಿಂದ ಭೇಟಿ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ. ಆದರೆ ಸಾಮಾಜಿಕ ಜಾಲತಾಣದ ಮೂಲಕ ವಿಶ್ ಮಾಡಿ, ಸಾಧ್ಯವಾದಷ್ಟು ಪ್ರತಿಕ್ರಿಯೆ ನೀಡುವುದಾಗಿ ಹೇಳಿ ಅಭಿಮಾನಿಗಳಿಗೆ ಪ್ರೀತಿಯ ಪತ್ರ ಬರೆದಿದ್ದಾರೆ.

  ಮಗಳು ಐರಾ ಕೇಳಿದ ಪ್ರಶ್ನೆಗೆ ಉತ್ತರ ಕೊಡಲು ಯಶ್ ತಬ್ಬಿಬ್ಬು!ಮಗಳು ಐರಾ ಕೇಳಿದ ಪ್ರಶ್ನೆಗೆ ಉತ್ತರ ಕೊಡಲು ಯಶ್ ತಬ್ಬಿಬ್ಬು!

  ರಾಧಿಕಾ ಪಂಡಿತ್ ಪತ್ರದಲ್ಲಿ ಏನಿದೆ?

  'ಪ್ರತಿ ವರ್ಷ ಬೇರೆ ಜಾಗಗಳಿಂದ ಬೇರೆ ಊರಿನಿಂದ ನನ್ನ ಹುಟ್ಟಿದ ಹಬ್ಬ ಆಚರಣೆ ಮಾಡಲು ಭೇಟಿ ಮಾಡಲು ಬರುತ್ತಿದ್ದಿರಿ. ಕಳೆದ ಎರಡು ವರ್ಷಗಳಿಂದ ಇದು ಸಾಧ್ಯವಾಗಲಿಲ್ಲ. ಕೊರೊನಾ ಎಲ್ಲೆಡೆ ಇರುವುದರಿಂದ ನಮ್ಮ ನಿಮ್ಮೆಲ್ಲರ ಆರೋಗ್ಯದ ದೃಷ್ಟಿಯಿಂದ ನಿಮ್ಮನ್ನ ಭೇಟಿ ಮಾಡಲು ಸಾಧ್ಯವಾಗುತ್ತಿಲ್ಲವೆಂದು ತುಂಬಾ ಕಾಡುತ್ತಿದೆ. ಈ ಬಾರಿ ಯಾವುದೇ ಆಚರಣೆ ಮನೆಯ ಬಳಿ ಇರುವುದಿಲ್ಲ. ದಯವಿಟ್ಟು ಯಾರು ಬೇಜಾರಾಗಬೇಡಿ. ಆದರೂ ನಿಮ್ಮ ಎಲ್ಲಾ ಸೋಷಿಯಲ್ ಮೀಡಿಯಾ ಮೆಸೇಜ್ ನೋಡುತ್ತೇನೆ, ಸಾಧ್ಯವಾದಷ್ಟು ರಿಪ್ಲೈ ಕೊಡುತ್ತೇನೆ. ಎಲ್ಲರ ಪ್ರೀತಿಗೂ ಧನ್ಯವಾದ ಹೇಳಲು ಇಷ್ಟಪಡುತ್ತೇನೆ. ನಿಮ್ಮ ರಾಧಿಕಾ ಪಂಡಿತ್' ಎಂದು ಹೇಳಿದ್ದಾರೆ.

  ಕನ್ನಡದ ಟಾಪ್ ನಟಿಯಾಗಿ, ಅಪ್ಪಟ ಕನ್ನಡದ ನಟಿಯಾಗಿಯೇ ಉಳಿದುಕೊಂಡ ರಾಧಿಕಾ ಪಂಡಿತ್ ಅವರಿಗೆ ಜನ್ಮದಿನದ ಶುಭಾಶಯಗ ಮಹಾಪೂರವೇ ಹರಿದುಬರುತ್ತಿವೆ. ಸಂಸಾರ ಬಂಧನದಲ್ಲಿ, ಮಕ್ಕಳೊಂದಿಗೆ ಬ್ಯುಸಿಯಾಗಿದ್ದರೂ ರಾಧಿಕಾ ಅವರ ಅಭಿಮಾನಿಗಳೇನೂ ಕಡಿಮೆಯಾಗಿಲ್ಲ. ಅವರು ಚಿತ್ರರಂಗಕ್ಕೆ ರೀ ಎಂಟ್ರಿ ಕೊಡಲಿ ಎನ್ನುವುದು ಅಭಿಮಾನಿಗಳ ಬಯಕೆಯಾಗಿದೆ.

  ಅಪ್ಪನ ಕೆನ್ನೆಗೆ ಹೊಡೆದು ತುಂಟಾಟ ಮಾಡಿದ ಯಶ್ ಪುತ್ರ ಯಥರ್ವ್ | Yash Playing With His Son | Filmibeat Kannada

  ಅಭಿಮಾನಿಗಳ ಆಸೆಯಂತೆ ರಾಧಿಕಾ ಮತ್ತೆ ಚಿತ್ರರಂಗದಲ್ಲಿ ಸಕ್ರೀಯರಾಗುತ್ತಾರಾ, ಮತ್ತೆ ಬಣ್ಣ ಹಚ್ಚುತ್ತಾರಾ ಎನ್ನುವುದು ಅಭಿಮಾನಿಗಳ ಕುತೂಹಲ. ಸದ್ಯ ರಾಧಿಕಾ ಇಬ್ಬರು ಮುದ್ದಾದ ಮಕ್ಕಳ ಆರೈಕೆಯಲ್ಲಿ ನಿರತರಾಗಿದ್ದಾರೆ.

  English summary
  Actress Radhika Pandit Message To Fans On Her Birthday, She says not not celebrating birthday.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X