For Quick Alerts
  ALLOW NOTIFICATIONS  
  For Daily Alerts

  ಡ್ರಗ್ಸ್ ಪ್ರಕರಣ: ಸಿಸಿಬಿ ಅಧಿಕಾರಿಗಳಿಂದ ನಟಿ ರಾಗಿಣಿ ಬಂಧನ

  |

  ಸ್ಯಾಂಡಲ್‌ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟಿ ರಾಗಿಣಿ ದ್ವಿವೇದಿ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸಿಸಿಬಿ ಕಚೇರಿಯಲ್ಲಿ ವಿಚಾರಣೆಯ ಮಧ್ಯೆ ರಾಗಿಣಿಯನ್ನು ಅರೆಸ್ಟ್ ಮಾಡಲಾಗಿದೆ.

  Sanjjanaa Galrani ಮಾಧ್ಯಮದವರ ಮೇಲೆ ಗರಂ ಆಗಿದ್ದೇಕೆ ? | Filmibeat Kannada

  ಡ್ರಗ್ಸ್ ಕೇಸ್‌ನಲ್ಲಿ ರಾಗಿಣಿ ಆಪ್ತ ರವಿಶಂಕರ್ ಅವರನ್ನು ವಶಕ್ಕೆ ಪಡೆದಿದ್ದರು. ರವಿಶಂಕರ್ ಅವರ ಜೊತೆ ಸಂಪರ್ಕದಲ್ಲಿದ್ದ ರಾಗಿಣಿ ಮನೆ ಮೇಲೆ ಇಂದು ಬೆಳಗ್ಗೆ ಸಿಸಿಬಿ ಪೊಲೀಸರ ತಂಡ ದಾಳಿ ನಡೆಸಿತ್ತು.

  ಮಧ್ಯಾಹ್ನದ ವೇಳೆಗೆ ರಾಗಿಣಿ ಅವರನ್ನು ಸಿಸಿಬಿ ಕಚೇರಿಗೆ ಕರೆತಂದ ಅಧಿಕಾರಿಗಳು ಸತತ ಏಳು ಗಂಟೆಗೂ ಹೆಚ್ಚು ಕಾಲ ವಿಚಾರಣೆ ನಡೆಸಿದ್ದಾರೆ. ರಾಗಿಣಿ ಅವರ ಬಳಿ ಎರಡು ಮೊಬೈಲ್, ಲ್ಯಾಪ್‌ಟ್ಯಾಪ್ ಸಹ ವಶ ಪಡೆದುಕೊಂಡಿದ್ದರು.

  ನಟಿ ರಾಗಿಣಿ ಮನೆ ಮೇಲೆ ಸಿಸಿಬಿ ಅಧಿಕಾರಿಗಳ ದಿಢೀರ್ ದಾಳಿನಟಿ ರಾಗಿಣಿ ಮನೆ ಮೇಲೆ ಸಿಸಿಬಿ ಅಧಿಕಾರಿಗಳ ದಿಢೀರ್ ದಾಳಿ

  ಇದಕ್ಕೂ ಮುಂಚೆ ನಟಿ ರಾಗಿಣಿ ನಿರೀಕ್ಷಣಾ ಜಾಮೀನಿಗಾಗಿ ಪ್ರಯತ್ನ ಮಾಡಿದ್ದರು. ಆದರೆ, ಈ ಪ್ರಯತ್ನ ಸಫಲವಾಗಿರಲಿಲ್ಲ. ಇದೀಗ, ಪೊಲೀಸರು ಅರೆಸ್ಟ್ ಮಾಡಿದ ನಂತರ ವಿಡಿಯೋ ಕಾನ್ಫೆರೆನ್ಸ್ ಮೂಲಕ ನ್ಯಾಯಾಧೀಶರ ಮುಂದೆ ರಾಗಿಣಿ ಅವರನ್ನು ಹಾಜರು ಪಡಿಸಲಾಗುತ್ತದೆ.

  ಹೆಚ್ಚಿನ ತನಿಖೆಗಾಗಿ ಸಿಸಿಬಿ ಅಧಿಕಾರಿಗಳು ಇನ್ನು ಕೆಲವು ದಿನ ವಶಕ್ಕೆ ಕೇಳುವ ಸಾಧ್ಯತೆ ಹೆಚ್ಚಿದೆ.

  English summary
  Drugs in Sandalwood: Actress Ragini Dwivedi arrested by CCB police today.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X