Just In
Don't Miss!
- Sports
ಐಪಿಎಲ್ 2021: ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಸಂಗಕ್ಕರ ಬಲ
- News
ಭ್ರಷ್ಟಾಚಾರ ಮುಕ್ತ ಅಸ್ಸಾಂ ಬಗ್ಗೆ ಕೇಂದ್ರ ಸಚಿವ ಅಮಿತ್ ಶಾ ವಾಗ್ದಾನ
- Finance
Gold, Silver Rate: ಪ್ರಮುಖ ನಗರಗಳಲ್ಲಿ ಜ. 24ರ ಚಿನ್ನ, ಬೆಳ್ಳಿ ದರ
- Automobiles
ಕರೋಕ್ ಎಸ್ಯುವಿಯನ್ನು ಸ್ಥಳೀಯವಾಗಿ ಅಭಿವೃದ್ಧಿಪಡಿಸಲಿದೆ ಸ್ಕೋಡಾ
- Lifestyle
ವಾರ ಭವಿಷ್ಯ: 12 ರಾಶಿಗಳ ರಾಶಿ ಫಲ ಹೇಗಿದೆ ನೋಡಿ
- Education
NIT Recruitment 2021: ರಿಸರ್ಚ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಆರೋಗ್ಯದಲ್ಲಿ ವ್ಯತ್ಯಯ: ಜೈಲಿನಿಂದ ಆಸ್ಪತ್ರೆಗೆ ರಾಗಿಣಿ ದ್ವಿವೇದಿ ಸ್ಥಳಾಂತರ
ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರಿಂದ ಬಂಧನಕ್ಕೆ ಒಳಗಾಗಿ ಪರಪ್ಪನ ಅಗ್ರಹಾರದಲ್ಲಿ ದಿನ ಕಳೆಯುತ್ತಿರುವ ನಟಿ ರಾಗಿಣಿ ದ್ವಿವೇದಿ ಆರೋಗ್ಯದಲ್ಲಿ ವ್ಯತ್ಯಯವಾಗಿದೆ.
ನಿನ್ನೆ (ಡಿಸೆಂಬರ್ 24) ರಾತ್ರಿ ರಾಗಿಣಿ ಆರೋಗ್ಯದಲ್ಲಿ ವ್ಯತ್ಯವಾಗಿದ್ದು, ಕೂಡಲೇ ಅವರನ್ನು ಜೈಲಿನಿಂದ ನಗರದ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ರಾಗಿಣಿ ಉಸಿರಾಟದ ತೊಂದರೆ ಮತ್ತು ಹೊಟ್ಟೆ ನೋವಿನಿಂದ ಬಳಲುತ್ತಿದ್ದರು ಎನ್ನಲಾಗಿದೆ. ಜೈಲು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರಾದರೂ, ನಿನ್ನೆ ರಾತ್ರಿ ಸಮಸ್ಯೆ ಹೆಚ್ಚಾದ ಕಾರಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಟಿ ರಾಗಿಣಿಯನ್ನು ಡ್ರಗ್ಸ್ ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು ಸೆಪ್ಟೆಂಬರ್ 4 ರಂದು ಬಂಧಿಸಿದ್ದರು. ಆರಂಭದಲ್ಲಿ ಕೆಲ ದಿನ ಸಿಸಿಬಿ ವಶದಲ್ಲಿದ್ದ ರಾಗಿಣಿ ನಂತರ ನ್ಯಾಯಾಂಗ ಬಂಧನದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.
ರಾಗಿಣಿ ನಂತರ ಬಂಧನಕ್ಕೆ ಒಳಗಾಗಿದ್ದ ಸಂಜನಾ ಗಲ್ರಾನಿಗೆ ಕೆಲವು ದಿನಗಳ ಮುಂಚೆಯಷ್ಟೆ ಜಾಮೀನು ದೊರೆತಿದೆ. ಸಂಜನಾ ಗಲ್ರಾನಿಯು ಆರೋಗ್ಯ ಕಾರಣ ಮುಂದಿಟ್ಟು ಜಾಮೀನಿಗೆ ಅರ್ಜಿ ಹಾಕಿದ್ದರು, ಅಂತೆಯೇ ಆರೋಗ್ಯ ವಿಷಯದ ಆಧಾರದಲ್ಲಿ ಸಂಜನಾ ಗೆ ಜಾಮೀನು ನೀಡಲಾಗಿದೆ.
ಇದೀಗ ರಾಗಿಣಿಗೂ ಆರೋಗ್ಯ ಸಮಸ್ಯೆ ಎದುರಾಗಿದ್ದು, ರಾಗಿಣಿಯೂ ಸಹ ಆರೋಗ್ಯದ ಕಾರಣ ಮುಂದಿಟ್ಟು ಜಾಮೀನಿಗೆ ಅರ್ಜಿ ಹಾಕುವ ಸಾಧ್ಯತೆ ಇದೆ.