For Quick Alerts
  ALLOW NOTIFICATIONS  
  For Daily Alerts

  ಬೆಂಗಳೂರಿನಲ್ಲಿ 'ಆರ್ಯನ್' ಜೊತೆ ರಮ್ಯಾ ಮೇಡಂ

  By Rajendra
  |

  ಸದ್ಯಕ್ಕೆ ಲಕ್ಕಿ ಸ್ಟಾರ್ ರಮ್ಯಾ ಅವರು ಮಂಡ್ಯ ಜನರ ಕಷ್ಟ ಸುಖಗಳನ್ನು ವಿಚಾರಿಸುವುದರಲ್ಲಿ ಬಿಜಿಯಾಗಿದ್ದಾರೆ. ಟ್ವಿಟ್ಟರ್ ನಲ್ಲಿ ಅವರ ಸಮಸ್ಯೆಗಳನ್ನು ಆಲಿಸುತ್ತಾ ಪರಿಹರಿಸುವ ಪ್ರಯತ್ನವನ್ನು ಮಾಡುತ್ತಿದ್ದಾರೆ. ಅವರು ಯಾವಾಗ ಬಣ್ಣ ಹಚ್ಚುತ್ತಾರೆ ಎಂಬ ಬಗ್ಗೆ ಇನ್ನೂ ನಿಖರವಾದ ಉತ್ತರ ಸಿಕ್ಕಿಲ್ಲ. ಆದರೆ ರಮ್ಯಾ ನಾಯಕಿಯಾಗಿರುವ 'ಆರ್ಯನ್' ಚಿತ್ರದ ಚಿತ್ರೀಕರಣ ಮಾತ್ರ ಬಿರುಸಿನಿಂದ ಸಾಗುತ್ತಿದೆ.

  ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ನಾಯಕ ನಟರಾಗಿರುವ ಈ 'ಆರ್ಯನ್' ಚಿತ್ರವನ್ನು ಡಿ.ಕೇಶವ್ ಫಿಲಂಸ್ ಲಾಂಛನದಲ್ಲಿ ಡಿ.ಕಮರ್ ಅವರು ನಿರ್ಮಿಸುತ್ತಿದ್ದಾರೆ. ಬೆಂಗಳೂರಿನಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ.

  ಖ್ಯಾತ ನಿರ್ದೇಶಕ ಡಿ.ರಾಜೇಂದ್ರಬಾಬು ನಿರ್ದೇಶಿಸುತ್ತಿರುವ ಈ ಚಿತ್ರದಲ್ಲಿ ಇದೇ ಮೊಟ್ಟ ಮೊದಲ ಬಾರಿಗೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಕ್ರೀಡಾ ತರಬೇತುದಾರನಾಗಿ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ. ಚಿತ್ರದಲ್ಲಿ ಅವರದು ಅಥ್ಲೀಟ್ ಕೋಚ್ ಪಾತ್ರ.

  ಆದರೆ ರಮ್ಯಾ ಭಾಗದ ಚಿತ್ರೀಕರಣ ಎಂದಿನಿಂದ ಶುರುವಾಗಲಿದೆ ಎಂಬ ಬಗ್ಗೆ ಸದ್ಯಕ್ಕೆ ಮಾಹಿತಿ ಇಲ್ಲ. ಈ ಚಿತ್ರದ ತಾರಾಬಳಗದಲ್ಲಿ ಶರತ್ ಬಾಬು, ಬುಲೆಟ್ ಪ್ರಕಾಶ್, ವಿನಯಾ ಪ್ರಸಾದ್, ಅರ್ಚನಾಗುಪ್ತ ಮುಂತಾದವರಿದ್ದಾರೆ.

  ಚಂದ್ರಶೇಖರ್ ಛಾಯಾಗ್ರಾಹಕರಾಗಿರುವ ಈ ಚಿತ್ರಕ್ಕೆ ಜನಾರ್ದನ್ ಮಹರ್ಷಿ ಸಂಭಾಷಣೆ ಬರೆದಿದ್ದಾರೆ. ಜೆಸ್ಸಿಗಿಫ್ಟ್ ಸಂಗೀತ ನಿರ್ದೇಶನದ 'ಆರ್ಯನ್' ಚಿತ್ರದ ಹಾಡುಗಳನ್ನು ಜಯಂತ ಕಾಯ್ಕಿಣಿ, ಕವಿರಾಜ್, ಯೋಗರಾಜಭಟ್, ನಾಗೇಂದ್ರಪ್ರಸಾದ್ ಬರೆದಿದ್ದಾರೆ. (ಒನ್ಇಂಡಿಯಾ ಕನ್ನಡ)

  English summary
  Golden Girl Ramya and Hat Trick Hero Shivarajkumar lead 'Aryan' directed by D.Rajendra Babu brisk progress in Bangalore. Jassie Gift is the music director and Chandrashekar is the cinematographer of the film.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X