ಮತ್ತೆ ಬೆಳ್ಳಿತೆರೆಗೆ ಬರುತ್ತಿದ್ದಾರೆ ಸ್ಯಾಂಡಲ್‌ವುಡ್ ರಾಣಿ ರಮ್ಯಾ!

ಸ್ಯಾಂಡಲ್‌ವುಡ್ ಕ್ವೀನ್ ಎಂದೇ ಹೆಸರಾಗಿರುವ ನಟಿ ರಮ್ಯಾ ಚಿತ್ರರಂಗದಿಂದ ದೂರವಾಗಿ ರಾಜಕೀಯ ಪ್ರವೇಶ ಮಾಡಿದರು. ಸಂಸದೆಯೂ ಆದರು ಬಳಿಕ ಅಲ್ಲಿಂದಲೂ ದೂರವಾಗಿ ಬಿಟ್ಟಿದ್ದಾರೆ. ಆದರೆ ಇದೀಗ ಅವರೇ ಹೇಳಿರುವಂತೆ ರಮ್ಯಾ ಮತ್ತೆ ಬೆಳ್ಳಿ ತೆರೆಯ ಮೇಲೆ ಬರಲು ಸಜ್ಜಾಗುತ್ತಿದ್ದಾರೆ.

2003 ರಲ್ಲಿ ಪುನೀತ್ ರಾಜ್‌ಕುಮಾರ್ ಜೊತೆಗೆ 'ಅಭಿ' ಸಿನಿಮಾದ ಮೂಲಕ ಚಿತ್ರರಂಗ ಪ್ರವೇಶಿಸಿದ ರಮ್ಯಾ ಒಂದು ದಶಕ ಚಿತ್ರರಂಗದಲ್ಲಿ ಟಾಪ್ ನಟಿಯಾಗಿದ್ದರು. ಕನ್ನಡದಲ್ಲಿ ಮಾತ್ರವಲ್ಲ ತೆಲುಗು, ತಮಿಳು ಸಿನಿಮಾಗಳಲ್ಲಿಯೂ ನಟಿಸಿ ಸೈ ಎನಿಸಿಕೊಂಡರು.

ಆದರೆ 2012 ರಲ್ಲಿ ರಾಜಕೀಯ ಪ್ರವೇಶಿಸಿದ ಬಳಿಕ ಚಿತ್ರರಂಗದಿಂದ ನಿಧಾನಕ್ಕೆ ನಂಟು ಕಳೆದುಕೊಂಡರು ರಮ್ಯಾ. 2012 ರಲ್ಲಿ ನಾಲ್ಕು ಸಿನಿಮಾದಲ್ಲಿ ನಟಿಸಿದ್ದ ರಮ್ಯಾ ಬಳಿಕ 2014 ರಲ್ಲಿ ಒಂದು ಹಾಗೂ 2016 ರಲ್ಲಿ ಒಂದು ಸಿನಿಮಾದಲ್ಲಷ್ಟೆ ನಟಿಸಿದರು. ಆದರೆ ಇದೀಗ ರಮ್ಯಾ ಮತ್ತೆ ನಟನೆ ಕಡೆಗೆ ಮರಳುವ ಉತ್ಸಾಹದಲ್ಲಿದ್ದಾರೆ ಅದಕ್ಕಾಗಿ ತಯಾರಿಯನ್ನೂ ಆರಂಭಿಸಿದ್ದಾರೆ.

ಬೀದಿ ನಾಯಿಯ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡಿದ್ದ ರಮ್ಯಾ

ಬೀದಿ ನಾಯಿಯ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡಿದ್ದ ರಮ್ಯಾ

ರಾಜಕಾರಣಿ, ಉದ್ಯಮಿ ಆದಿಕೇಶವಲು ಮೊಮ್ಮಗ ಆದಿನಾರಾಯಣ, ಲಾರಾ ಹೆಸರಿನ ಬೀದಿ ನಾಯಿ ಮೇಲೆ ಕಾರು ಹತ್ತಿಸಿ ಕೊಂದ ಘಟನೆಯನ್ನು ಖಂಡಿಸಿದ್ದ ನಟಿ ರಮ್ಯಾ, ಮಂಗಳವಾರ ನಡೆದ ನಾಯಿ ಲಾರಾಳ ಅಂತಿಮ ಸಂಸ್ಕಾರದಲ್ಲಿ ಪಾಲ್ಗೊಂಡಿದ್ದರು. ಈ ಸಮಯ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ ಸಿನಿಮಾ ರಂಗಕ್ಕೆ ಮರಳುವುದಾಗಿ ಹೇಳಿದ್ದಾರೆ.

ಮಾರ್ಚ್ ತಿಂಗಳಲ್ಲಿ ಮಾಹಿತಿ ಹಂಚಿಕೊಳ್ಳುತ್ತೇನೆ: ರಮ್ಯಾ

ಮಾರ್ಚ್ ತಿಂಗಳಲ್ಲಿ ಮಾಹಿತಿ ಹಂಚಿಕೊಳ್ಳುತ್ತೇನೆ: ರಮ್ಯಾ

''ಅವಕಾಶಗಳು ಸಾಕಷ್ಟು ಬರುತ್ತಲೇ ಇವೆ. ನಾನೀಗ ಕೆಲವು ಚಿತ್ರಕತೆಗಳನ್ನು ಓದುತ್ತಿದ್ದೇನೆ. ಆದಷ್ಟು ಶೀಘ್ರವಾಗಿ ಈ ಬಗ್ಗೆ ನಿಖರ ಮಾಹಿತಿ ನೀಡುತ್ತೇನೆ. ನನ್ನ ಕಮ್‌ ಬ್ಯಾಕ್‌ ಸಿನಿಮಾದ ಬಗ್ಗೆ ಮಾರ್ಚ್‌ನಲ್ಲಿ ನಾನು ಮಾಧ್ಯಮಗಳೊಟ್ಟಿಗೆ ಮಾಹಿತಿ ಹಂಚಿಕೊಳ್ಳುತ್ತೇನೆ'' ಎಂದಿದ್ದಾರೆ ನಟಿ ರಮ್ಯಾ. ಆ ಮೂಲಕ ತಾವು ಚಿತ್ರರಂಗಕ್ಕೆ ಮರಳುತ್ತಿರುವ ಸುದ್ದಿಯನ್ನು ಖಾತ್ರಿಪಡಿಸಿದ್ದಾರೆ.

ದೇಹ ತೂಕ ಇಳಿಸಿಕೊಳ್ಳುತ್ತಿದ್ದೇನೆ: ರಮ್ಯಾ

ದೇಹ ತೂಕ ಇಳಿಸಿಕೊಳ್ಳುತ್ತಿದ್ದೇನೆ: ರಮ್ಯಾ

ಸಿನಿಮಾ ರಂಗಕ್ಕೆ ಕಮ್‌ ಬ್ಯಾಕ್ ಮಾಡಲು ಸಾಕಷ್ಟು ತಯಾರಿಯನ್ನು ರಮ್ಯಾ ಮಾಡಿಕೊಳ್ಳುತ್ತಿದ್ದಾರೆ. ಮಾಧ್ಯಮಗಳೊಟ್ಟಿಗೆ ಮಾತನಾಡಿದ ರಮ್ಯಾ, ''ಶಸ್ತ್ರಚಿಕಿತ್ಸೆಯ ಬಳಿಕ ನಾನು ತುಸು ದೇಹ ತೂಕ ಹೆಚ್ಚಿಸಿಕೊಂಡಿದ್ದೇನೆ. ಅದನ್ನು ನಿವಾರಣೆ ಮಾಡಿಕೊಳ್ಳಬೇಕಿದೆ. ನಟನೆಗೆ ಬೇಕಾದ ದೇಹ ಸ್ಥಿತಿಯನ್ನು ಮರಳಿ ಪಡೆದುಕೊಳ್ಳಬೇಕಿದೆ. ಆ ನಿಟ್ಟಿನಲ್ಲಿ ನಾನೀಗ ಕೆಲಸ ಮಾಡುತ್ತಿದ್ದೇನೆ'' ಎಂದಿದ್ದಾರೆ ನಟಿ ರಮ್ಯಾ.

ಈಗಲೂ ರಮ್ಯಾಗೆ ಅಭಿಮಾನಿಗಳಿದ್ದಾರೆ

ಈಗಲೂ ರಮ್ಯಾಗೆ ಅಭಿಮಾನಿಗಳಿದ್ದಾರೆ

ನಟಿ ರಮ್ಯಾಗೆ ಈಗಲೂ ಹಲವು ಅಭಿಮಾನಿಗಳಿದ್ದಾರೆ. ಕೆಲವು ದಿನಗಳ ಹಿಂದಷ್ಟೆ 'ರತ್ನನ್ ಪ್ರಪಂಚ' ಸಿನಿಮಾವನ್ನು ಮೆಚ್ಚಿ ರಮ್ಯಾ ಪೋಸ್ಟ್ ಹಾಕಿದ್ದಾಗ ಮಾತನಾಡಿದ್ದ ನಟ ಡಾಲಿ ಧನಂಜಯ್, 'ರಮ್ಯಾ ಅವರು ಸಿನಿಮಾಗಳನ್ನು ಮೆಚ್ಚುವುದು ಮಾತ್ರವಲ್ಲ ಅವರು ಮತ್ತೆ ನಮ್ಮೊಂದಿಗೆ ಬಂದು ಕೆಲಸ ಮಾಡಬೇಕು, ಸಿನಿಮಾಗಳಲ್ಲಿ ನಟಿಸಬೇಕು'' ಎಂದು ಒತ್ತಾಯಿಸಿದ್ದರು. ಡಾಲಿ ಧನಂಜಯ್ ಮಾತ್ರವೇ ಅಲ್ಲದೆ ಹಲವು ನಿರ್ದೇಶಕರು, ನಿರ್ಮಾಪಕರು ಸಹ ರಮ್ಯಾ ಅವರೊಟ್ಟಿಗೆ ಕೆಲಸ ಮಾಡಲು ಉತ್ಸುಕರಾಗಿದ್ದಾರೆ.

More from Filmibeat

English summary
Actress and politician Ramya confirms that she will coming back to sandalwood. Ramya said she is reading some scripts right now will announce the news in March officially.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X