twitter
    For Quick Alerts
    ALLOW NOTIFICATIONS  
    For Daily Alerts

    ನಂಬರ್ 1 ನಟನೆಂಬ ಅಹಂ ಬಿಟ್ಟುಬಿಡಿ: ಸ್ಟಾರ್ ನಟರಿಗೆ ಮತ್ತೊಮ್ಮೆ ಮನವಿ ಮಾಡಿದ ರಮ್ಯಾ

    By ಫಿಲ್ಮಿಬೀಟ್ ಡೆಸ್ಕ್
    |

    ದರ್ಶನ್ ಮೇಲೆ ಚಪ್ಪಲಿ ಎಸೆದ ಪ್ರಕರಣ ಸ್ಯಾಂಡಲ್‌ವುಡ್‌ನ ಒಳಗೆ ಹಾಗೂ ಹೊರಗೆ ಚರ್ಚೆಗಳನ್ನು ಹುಟ್ಟುಹಾಕಿದೆ.

    ಸ್ಟಾರ್ ನಟರ ವರ್ತನೆಗಳು, ಅವರ ಅಭಿಮಾನಿಗಳ ವರ್ತನೆಗಳು. ಹಿಂದೆ ಅಭಿಮಾನಿ ಸಂಘಗಳು ನಡೆದುಕೊಳ್ಳುತ್ತಿದ್ದ ರೀತಿ, ಈಗಿನ ಅಭಿಮಾನಿ ಸಂಘಗಳು ನಡೆದುಕೊಳ್ಳುತ್ತಿರುವ ರೀತಿಗಳ ಬಗ್ಗೆ ಜೋರಾದ ಚರ್ಚೆಗಳಾಗುತ್ತಿವೆ.

    ಇವುಗಳ ನಡುವೆ ನಟಿ ರಮ್ಯಾ ಕೆಲವು ಸಕಾಲಿಕ ಟ್ವೀಟ್‌ಗಳನ್ನು ಮಾಡುವ ಮೂಲಕ ಅಭಿಮಾನಿಗಳ ಅತಿರೇಕಗಳನ್ನು ತಿದ್ದುವ ಅವಶ್ಯಕತೆ ಕುರಿತು ಮಾತನಾಡುತ್ತಿದ್ದಾರೆ. ನಿನ್ನೆಯೇ ಈ ಬಗ್ಗೆ ಕೆಲವು ಟ್ವೀಟ್‌ಗಳನ್ನು ಮಾಡಿದ್ದ ನಟಿ ರಮ್ಯಾ, ಇಂದು ವಿವರವಾದ ಉದ್ದನೆಯ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ. ಆ ಮೂಲಕ ನಟ-ನಟಿಯರು ಸಾರ್ವಜನಿಕವಾಗಿ ಹೇಗೆ ಇರಬೇಕು, ಅಭಿಮಾನಿ ಸಂಘಗಳು ಹೀಗಿ ವರ್ತಿಸಿದರೆ ಚೆಂದ ಎಂದು ಹೇಳಿದ್ದಾರೆ.

    ಅನೇಕರು ಕಷ್ಟದ ದಿನಗಳನ್ನು ನೋಡಿದ್ದಾರೆ: ರಮ್ಯಾ

    ಅನೇಕರು ಕಷ್ಟದ ದಿನಗಳನ್ನು ನೋಡಿದ್ದಾರೆ: ರಮ್ಯಾ

    ಚಿತ್ರರಂಗದಲ್ಲಿ ಇವತ್ತು ತಲುಪಿರುವ ಹಂತಕ್ಕೆ ಬರಲು ಪ್ರತಿಯೊಬ್ಬರೂ ತಮ್ಮದೇ ಆದ ಸವಾಲುಗಳನ್ನು ಎದುರಿಸಿಕೊಂಡು ಬಂದಿರುತ್ತಾರೆ. ಕೇವಲ ನಾಯಕ ನಟರು ಮತ್ತು ನಾಯಕ ನಟಿಯರಷ್ಟೇ ಅಲ್ಲ, ಸಂಗೀತ ನಿರ್ದೇಶಕರು, ಗಾಯಕರು, ನೃತ್ಯ ನಿರ್ದೇಶಕರು, ಬರಹಗಾರರು, ಫೈಟ್ ಮಾಸ್ಟರ್ ಗಳು ಮುಂತಾದ

    ತಂತ್ರಜ್ಞರೂ ಅನೇಕ ಕಷ್ಟಕರವಾದ ಪರಿಸ್ಥಿತಿಗಳನ್ನು ಎದುರಿಸಿ ಸ್ಥಾನಕ್ಕೆ ಬಂದಿರುತ್ತಾರೆ. ಕೆಲವರ ಕಷ್ಟಗಳು ಸಾರ್ವಜನಿಕವಾಗಿ ನಮಗೆ ತಿಳಿದಿರುತ್ತೆ, ಮತ್ತಷ್ಟು ತಿಳಿದಿರುವುದಿಲ್ಲ. ಕೆಲವರು ಉನ್ನತ ಸ್ಥಾನಕ್ಕೆ

    ಏರಿದ್ದರೆ, ಅನೇಕರಿಗೆ ದೊಡ್ಡ ಯಶಸ್ಸು ಗಳಿಸಲು ಸಾಧ್ಯವಾಗಿಲ್ಲದೆ ಪ್ರತಿಯೊಬ್ಬ ಉನ್ನತ ಇರಬಹುದು.

    ಚಿತ್ರರಂಗದಲ್ಲಿ ತಮ್ಮ ಆಸೆಯ ಗೋಪುರ ಕಟ್ಟಿಕೊಂಡು ಬರುವವರ ಹಿನ್ನೆಲೆಗಳು ಬೇರೆಯೇ ಇರಬಹುದು. ಹಲವರಿಗೆ ಎರಡು ಹೊತ್ತು ಊಟ ಗಿಟ್ಟಿಸಿಕೊಳ್ಳುವುದುಕಷ್ಟವಾಗಿದ್ದರೆ, ಹಲವರಿಗೆ ಮೈ ತುಂಬಾ ಸಾಲ ಮಾಡಿಕೊಂಡು ಸಾಧನೆ ಮಾಡಬೇಕು ಅಂತ ಬಂದಿರಬಹುದು ಹಲವರು ಇದ್ದುದ್ದೆಲ್ಲವನ್ನು ಬಿಟ್ಟು ಚಿತ್ರರಂಗದಲ್ಲಿ ಸಾಧಿಸಬೇಕೆಂದು ಬಿಟ್ಟು ಬಂದದ್ದು ಉಂಟು. ಯಶಸ್ಸು ಬಹಳ ಕಡಿಮೆ ಜನರ ಪಾಲಾಗಿದೆ ಅಷ್ಟೇ ಆದರೆ ಶ್ರಮ ಪಟ್ಟವರ ಸಂಖ್ಯೆ ಎಣಿಸಲಸಾಧ್ಯ'' ಎಂದಿದ್ದಾರೆ ನಟಿ ರಮ್ಯಾ.

    ನಂಬರ್ 1 ಸ್ಥಾನದ ಅಹಂ ಬಿಡಿ: ರಮ್ಯಾ

    ನಂಬರ್ 1 ಸ್ಥಾನದ ಅಹಂ ಬಿಡಿ: ರಮ್ಯಾ

    ''ಎಲ್ಲಕ್ಕಿಂತ ಮುಖ್ಯ ಮನುಷ್ಯ ತನ್ನ ಬೇರುಗಳಿಗೆ ಗಟ್ಟಿಯಾಗಿ ಅಂಟಿಕೊಂಡಿರುವುದು ಮತ್ತು ತಾವು ತಮ್ಮ ಕ್ಷೇತ್ರದಲ್ಲಿ ಸಾಧನೆ ಮಾಡಿ ಮೇಲೆ ಬಂದ ಬಳಿಕ ತಮ್ಮಂತೆ ಕಷ್ಟ ಪಟ್ಟು ಶ್ರದ್ಧೆಯಿಂದ ಕೆಲಸ ಮಾಡಲು ಹಂಬಲ ಪ್ರತಿಭೆಗಳನ್ನು ಹುಡುಕಿ ಸಹಾಯ ಮಾಡುವುದು ಉತ್ತಮ ಇರುವ ನಡವಳಿಕೆ. ನಾನು ಯಾವತ್ತಿಗೂ ನಂಬರ್ 1 ಮತ್ತು ಈ ಸ್ಥಾನ ನನಗೆ ಮಾತ್ರ ಧಕ್ಕಬೇಕು ಅನ್ನುವ ಅಹಂ ಬಿಟ್ಟು ನಮ್ಮಲ್ಲಿ ಯಾರೇ ಮೇಲೆ

    ಬಂದರೂ ಅದನ್ನು ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಸಾಮಾನ್ಯ ಅರಿವು ಎಲ್ಲರಿಗೂ ಇರಬೇಕು. ಇಂದು ಅಭಿಮಾನಿ ಸಂಘಗಳು, ಅಭಿಮಾನಿ ಬಳಗಗಳು ತೋರುತ್ತಿರುವ ನಡವಳಿಕೆಬಹಳ ಚಿಂತಾಜನಕವಾಗಿದೆ. ತಮ್ಮ ಗುಂಪಿನಲ್ಲಿ ಅಥವಾ ಬಣದಲ್ಲಿ ಕಾಣಿಸಿಕೊಳ್ಳದ ಎಲ್ಲರನ್ನು ಬಹಳ ಅವಾಚ್ಯ ಶಬ್ದಗಳಿಂದ ನಿಂದಿಸುವುದು, ತಾಯಿ, ಹೆಂಡತಿ, ಮಗಳು ಅನ್ನುವ ಎಲ್ಲ ಪವಿತ್ರ ಸಂಬಂಧಗಳಿಗೆ ಮಸಿ ಬಳಿಯುವಂತ ಬಹಳ ಕೆಟ್ಟ ಮಾತುಗಳು ಆಡುವುದನ್ನು ಕಂಡಲ್ಲಿ ನೋವಾಗುತ್ತದೆ. ನಮ್ಮ ಪ್ರಜ್ಞಾವಂತ ಸಮಾಜ ಯಾವ ಮಟ್ಟಕ್ಕೆ ಇಳಿಯುತ್ತಿದೆ ಅನ್ನುವುದು ನೋಡಿ ಬೇಜಾರಾಗ್ತಿದೆ'' ಎಂದಿದ್ದಾರೆ ರಮ್ಯಾ.

    'ಅಭಿಮಾನಿ ಸಂಘಗಳು ಹಾಗಿದ್ದವು, ಈಗ ಹೀಗಾಗಿವೆ'

    'ಅಭಿಮಾನಿ ಸಂಘಗಳು ಹಾಗಿದ್ದವು, ಈಗ ಹೀಗಾಗಿವೆ'

    ಮುಂಚಿನಿಂದಲೂ ಅಭಿಮಾನಿ ಸಂಘಗಳು ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡುವುದು ನಾವು ಕಂಡಿದ್ದೇವೆ, ಕೇಳಿದ್ದೇವೆ. ರಕ್ತದಾನ ಶಿಬಿರ, ಅನ್ನದಾನ, ವೃದ್ಧಾಶ್ರಮ, ಅನಾಥಾಶ್ರಮದಲ್ಲಿ ಸೇವೆ ಮಾಡುವುದು, ಗಿಡ ನೆಡುವುದು, ಪ್ರಕೃತಿ ಕಾಪಾಡುವುದು, ಬಡವರಿಗೆ ಆಹಾರ ಮತ್ತು ಔಷಧಿ ಹಂಚುವುದು ಮುಂತಾದ ಅನೇಕ ಕಾರ್ಯಗಳನ್ನು ಮಾಡಿಕೊಂಡು ಬಂದಿರುವುದು ಅಭಿಮಾನಿ ಸಂಘಗಳಿಗೆ ಇರುವ ಹೆಗ್ಗಳಿಕೆ. ಆದರೆ ಅಭಿಮಾನಿಗಳು ಅನ್ನುವ ಹೆಸರಿನಲ್ಲಿ ಈಗ ಸೋಷಿಯಲ್ ಮೀಡಿಯಾದಲ್ಲಿ ತಮ್ಮ ನಿಜ

    ರೂಪವನ್ನು, ಹೆಸರನ್ನು ಹಾಕಿಕೊಳ್ಳದೆ ಅನಾಮಧೇಯವಾಗಿ ತಮಗೆ ಆಗದವರ ಬಗ್ಗೆ ಅತ್ಯಂತ ಕೆಟ್ಟ ರೀತಿಯಲ್ಲಿ ಮಾತಾಡುವುದು ವಿಷಾದನೀಯ. ಇಂತಹ ವರ್ತನೆಯನ್ನು ನಮ್ಮ ನಟರು ಖಂಡಿಸಿ ತಮ್ಮ

    ಅಭಿಮಾನಿಗಳಿಗೆ ತಿಳವಳಿಕೆ ಹೇಳಿ ಅವರನ್ನು ಸುಸಂಕೃತರಾಗಿ ಮಾಡುವ ಜವಾಬ್ದಾರಿ ಹೊರಬೇಕಿದೆ. ಪ್ರತ್ಯಕ್ಷವಾಗಿ, ಪರೋಕ್ಷವಾಗಿ ಅಭಿಮಾನಿಗಳು ಮಾಡುವ ಸಮಾಜ ವಿರೋಧಿ ಚಟವಟಿಕೆಗಳಿಗೆ

    ಬೆಂಬಲ ಕೊಡಬಾರದು ಎಂದು ರಮ್ಯಾ ಮನವಿ ಮಾಡಿದ್ದಾರೆ.

    ಸ್ಪೂರ್ತಿ ಪಡೆದುಕೊಳ್ಳಬೇಕಾದ ಸಮಯ ಇದು: ರಮ್ಯಾ

    ಸ್ಪೂರ್ತಿ ಪಡೆದುಕೊಳ್ಳಬೇಕಾದ ಸಮಯ ಇದು: ರಮ್ಯಾ

    ''ಕನ್ನಡ ಚಿತ್ರರಂಗ ಇವತ್ತು ದೇಶ ವಿದೇಶಗಳಲ್ಲಿ ದೊಡ್ಡ ಖ್ಯಾತಿಪಡೆದಿದೆ. IMDB ಉನ್ನತ 10 ಚಿತ್ರಗಳ ಪಟ್ಟಿಯಲ್ಲಿ 3 ಕನ್ನಡ ಚಿತ್ರಗಳಿವೆ ಅಂತ ಹೇಳಲು ನಮಗೆಲ್ಲ ಬಹಳ ಹೆಮ್ಮೆ ಕನ್ನಡ ಚಿತ್ರಗಳು ಈ ವರ್ಷ ಕಂಡ ಯಶಸ್ಸು ಬೇರಾವುದೇ ಚಿತ್ರಗಳಿಗೂ ಲಭ್ಯವಾಗಿಲ್ಲ. ಇದಕ್ಕಿಂತ ಹೆಮ್ಮೆಯ ವಿಚಾರ ಮತ್ತು ಸ್ಫೂರ್ತಿ ಬೇಕಿದೆಯೇ? ಆಗಬೇಕಿದೆ. ಭಾಷೆಯ ಕಲಾದೇವಿಯ ಸೇವೆ ಮಾಡಿಕೊಂಡು ಸಮಾಜಕ್ಕೂ, ನಮ್ಮ ಚಿತ್ರರಂಗಕ್ಕೂ ಒಳ್ಳೆಯ ಹೆಸರು ತರುವುದು ನಮ್ಮೆಲ್ಲರ ಗುರಿ ಆಗಿರಬೇಕು. ಇದು ನಮ್ಮೆಲ್ಲರ ಜವಾಬ್ದಾರಿಯೂ ಹೌದು. ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆ ಕಾಪಾಡುವ ನಿಟ್ಟಿನಲ್ಲಿ ನಮ್ಮ ಅಭಿಮಾನಿಗಳು ಮತ್ತು ಬೆಂಬಲಿಗರನ್ನು ಉತ್ತೇಜಿಸೋಣ. ಪ್ರೀತಿ ಮತ್ತು ವಿಶ್ವಾಸ ತುಂಬಿದ ಉತ್ತಮ ಸಮಾಜ ನಿರ್ಮಿಸೋಣ.

    ದ್ವೇಷ ಮತ್ತು ಅಸೂಯೆಗಳನ್ನು ದಮನ ಮಾಡೋಣ ಎಲ್ಲರಿಗು ಒಳಿತಾಗಲಿ'' ಎಂದಿದ್ದಾರೆ.

    English summary
    Actress Ramya request star actors and fans to change their behavior. She said star actors Fans organization has been changed a lot.
    Tuesday, December 20, 2022, 19:03
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X