ನಟಿ ಶರ್ಮಿಳಾ ಮಾಂಡ್ರೆಗೆ ಕೊರೊನಾ ವೈರಸ್ ದೃಢ
ಕನ್ನಡ ನಟಿ ಶರ್ಮಿಳಾ ಮಾಂಡ್ರೆಗೆ ಕೊರೊನಾ ವೈರಸ್ ದೃಢಪಟ್ಟಿದೆ. ಈ ಕುರಿತು ಸ್ವತಃ ನಟಿಯೇ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ನೀಡಿದ್ದಾರೆ.
Recommended Video
ಅಡುಗೆ ಮಾಡೋಕಂತೂ ಬರಲ್ಲ ನೆಟ್ಟುಗೆ ತಿನ್ನು ಅಂತ ಬೈತಿದ್ರು ಸುದೀಪ್ | Filmibeat Kannada
''ಎಲ್ಲರಿಗೂ ನಮಸ್ಕಾರ....ನನಗೆ ಮತ್ತು ನನ್ನ ಕುಟುಂಬದ ಕೆಲವರಿಗೆ ಕೊರೊನಾ ವೈರಸ್ ರೋಗ ಲಕ್ಷಣಗಳು ಕಾಣಿಸಿಕೊಂಡಿತ್ತು. ಪರೀಕ್ಷಿಸಿದಾಗ ಪಾಸಿಟಿವ್ ಬಂದಿದೆ. ಹಾಗಾಗಿ, ಹೋಮ್ ಐಸೋಲೇಶನ್‌ಗೆ ಒಳಗಾಗಿದ್ದೇವೆ'' ಎಂದು ಟ್ವಿಟ್ಟರ್‌ನಲ್ಲಿ ಸ್ಪಷ್ಟನೆ ನೀಡಿದ್ದಾರೆ.

ಇನ್ನು ವೈದ್ಯರ ಸಲಹೆಯಂತೆ ನಾನು ಕ್ವಾರಂಟೈನ್‌ಗೆ ಒಳಗಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ಏಪ್ರಿಲ್ 4ರಂದು ನಡೆದಿದ್ದ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಶರ್ಮಿಳಾ ಮಾಂಡ್ರೆ ಅವರಿಗೆ ಕ್ಲೀನ್ ಚಿಟ್ ನೀಡಿದೆ. ಕಾರು ಚಾಲಕ ಡಾನ್ ಥಾಮಸ್ ಈ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದು, ಸುಮಾರು 33 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆಯಾಗಿತ್ತು.
ಸದ್ಯ, ಶರ್ಮಿಳಾ ಮಾಂಡ್ರೆ ಅವರು ಮೈಸೂರು ಡೈರೀಸ್, ಗಾಳಿಪಟ 2 ಹಾಗೂ ದಸರಾ ಅಂತಹ ಚಿತ್ರಗಳಲ್ಲಿ ನಟಿಸುತ್ತಿದ್ದಾರೆ.
More from Filmibeat
English summary
Actress Sharmilea Mandre and few of her family members tested positive for COVID-19.


Click it and Unblock the Notifications











