Shubha Poonja: ವಿಚ್ಛೇದನದ ಬಗ್ಗೆ ಕೊನೆಗೂ ಪ್ರತಿಕ್ರಿಯಿಸಿದ ನಟಿ ಶುಭಾ ಪೂಂಜಾ; ನಟಿ ನೀಡಿದ ಭರವಸೆ ಏನು?

ಕಳೆದ ಕೆಲವು ದಿನಗಳಿಂದ ನಟಿ ಶುಭಾ ಪೂಂಜಾ ಹಾಗೂ ಪತಿ ಸುಮಂತ್ ಬಿಲ್ಲವ ಅವರ ವಿಚ್ಛೇದನದ ವಿಷಯ ಹಲ್‌ಚಲ್ ಎಬ್ಬಿಸಿದೆ. ಇಬ್ಬರ ವೈವಾಹಿಕ ಜೀವನದಲ್ಲಿ ಬಿರುಕು ಮೂಡಿದೆ ಎಂದು ಕಳೆದ ಕೆಲವು ದಿನಗಳಿಂದ ಸುದ್ದಿ ಓಡಾಡುತ್ತಿದೆ. ಆದರೆ, ಈ ಬಗ್ಗೆ ಶುಭಾ ಪೂಂಜಾ ಆಗಲಿ, ಪತಿ ಸುಮಂತ್ ಆಗಲಿ ಎಲ್ಲಿಯೂ ಹೇಳಿಕೆಗಳನ್ನು ಕೊಟ್ಟಿಲ್ಲ. ಆದರೂ, ಚಿತ್ರರಂಗದಲ್ಲಿ ಶುಭ ಡಿವೋರ್ಸ್‌ ಬಗ್ಗೆನೇ ಸುದ್ದಿಯಾಗುತ್ತಿದೆ.

ಶುಭಾ ಪೂಂಜಾ ತನ್ನ ಇನ್‌ಸ್ಟಾಗ್ರಾಂನಲ್ಲಿ ವಿವಾಹಕ್ಕೆ ಸಂಬಂಧಿಸಿದ ಫೋಟೊಗಳನ್ನು ಡಿಲೀಟ್ ಮಾಡಿದ್ದರು. ಇಲ್ಲಿಂದ ಇಬ್ಬರ ವೈವಾಹಿಕ ಜೀವನದಲ್ಲಿ ಎಲ್ಲವೂ ಸರಿಯಿಲ್ಲ ಅನ್ನೋ ಮಾತುಗಳು ಚಿತ್ರರಂಗದಲ್ಲಿ ಓಡಾಡುತ್ತಿತ್ತು. ಕಳೆದ ಕೆಲವು ದಿನಗಳಿಂದ ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಯಾಗುತ್ತಿತ್ತು. ಅದರಲ್ಲೂ ಸೋಶಿಯಲ್ ಮೀಡಿಯಾದಲ್ಲಿ ನಾನಾ ರೀತಿಯ ಸುದ್ದಿಗಳನ್ನು ಹಬ್ಬಿಸಿದ್ದರು.

Actress Shubha Poonja requested privacy on divorce rumors on her Instagram post

ತಮ್ಮ ವಿಚ್ಛೇದನದ ಸುದ್ದಿ ಮಾಧ್ಯಮಗಳಲ್ಲಿ ಹಬ್ಬಿದ್ದರೂ ಶುಭಾ ಪೂಂಜಾ ಮಾತ್ರ ಪ್ರತಿಕ್ರಿಯೆ ನೀಡುವುದಕ್ಕೆ ಹೋಗಿರಲಿಲ್ಲ. ಇದೂವರೆಗೂ ಈ ಬಗ್ಗೆ ಮೌನ ವಹಿಸಿದ್ದ ನಟಿ ಶುಭಾ ಪೂಂಜಾ, ಇದೀಗ ಮೊದಲ ಬಾರಿಗೆ ತಮ್ಮ ಅಧಿಕೃತ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್ ಮಾಡುವ ಮೂಲಕ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಅದರಲ್ಲಿ ಶುಭ ಒಂದು ಭರವಸೆಯನ್ನು ನೀಡಿದ್ದಾರೆ. ಅದೇನು ಅಂತ ತಿಳಿಯುವುದಕ್ಕೆ ಮುಂದೆ ಓದಿ.

ಶುಭಾ ಪೂಂಜಾ ಭಾವನಾತ್ಮಕ ಮನವಿ

ಶುಭಾ ಪೂಂಜಾ ತಮ್ಮ ವೈಯಕ್ತಿಕ ಜೀವನದ ಬಗ್ಗೆ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಇನ್‌ಸ್ಟಾಗ್ರಾಂ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದು, ಶುಭಾ ಪೂಂಜಾ ತಮಗೆ ಹಾಗೂ ಪತಿ ಸುಮಂತ್ ಬಿಲ್ಲವ ಅವರ ಖಾಸಗಿತನವನ್ನು ಗೌರವಿಸುವಂತೆ ಹಾಗೂ ಈ ವಿಷಯದ ಬಗ್ಗೆ ಮಾತಾಡುವುದಕ್ಕೆ ಸ್ವಲ್ಪ ಸಮಯಾವಕಾಶ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ.

ಶುಭಾ ಪೋಸ್ಟ್‌ನಲ್ಲಿ ಏನಿದೆ?

ಶುಭಾ ಪೂಂಜಾ ಇನ್‌ಸ್ಟಾಗ್ರಾಂ ಪೋಸ್ಟ್‌ನಲ್ಲಿ ಹೀಗೆ ಬರೆದುಕೊಂಡಿದ್ದಾರೆ. "ನನ್ನೆಲ್ಲಾ ಆತ್ಮೀಯ ಮಾಧ್ಯಮ ಮಿತ್ರರಿಗೆ ಮತ್ತು ಪ್ರೀತಿಯ ಅಭಿಮಾನಿಗಳಿಗೆ ನಮಸ್ಕಾರಗಳು. ನಾನು ಚಿತ್ರರಂಗಕ್ಕೆ ಕಾಲಿಟ್ಟ ದಿನದಿಂದ ಇಂದಿನವರೆಗೂ ನನ್ನನ್ನು ನಿರಂತರವಾಗಿ ಬೆಂಬಲಿಸುತ್ತಾ, ಪ್ರೋತ್ಸಾಹಿಸುತ್ತಾ ಬಂದಿದ್ದೀರಿ. ಇದೀಗ ನಾನು ನಿಮ್ಮಲ್ಲಿ ಕೇಳಿಕೊಳ್ಳುವುದು ಇಷ್ಟೇ, ಸಮಯ ಬಂದಾಗ ನನ್ನ ವೈಯಕ್ತಿಕ ಜೀವನದಲ್ಲಿ ನಡೆಯುತ್ತಿರುವ ವಿಷಯದ ಬಗ್ಗೆ ನಾನೇ ನಿಮಗೆ ಖುದ್ದಾಗಿ ಎಲ್ಲವನ್ನೂ ತಿಳಿಸುತ್ತೇನೆ. ಅಲ್ಲಿಯವರೆಗೂ ನನಗೂ ಹಾಗೂ ಸುಮಂತ್ ಅವರಿಗೂ ಸ್ವಲ್ಪ ಸಮಯಾವಕಾಶ ಮತ್ತು ಪ್ರೈವಸಿಯನ್ನು ಕೊಡಿ" ಎಂದು ಮನವಿ ಮಾಡಿಕೊಂಡಿದ್ದಾರೆ.

Actress Shubha Poonja requested privacy on divorce rumors on her Instagram post

ನಾಲ್ಕೇ ವರ್ಷಕ್ಕೆ ದಾಂಪತ್ಯದಲ್ಲಿ ಬಿರುಗಾಳಿ

ನಟಿ ಶುಭಾ ಪೂಂಜಾ ನಾಲ್ಕು ವರ್ಷಗಳ ಹಿಂದೆ ಅಂದರೆ, 2022ರಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಉಡುಪಿ ಮೂಲದ ಉದ್ಯಮಿ ಹಾಗೂ ಕನ್ನಡ ಸಂಘಟನೆಗಳಲ್ಲಿ ಗುರುತಿಸಿಕೊಂಡಿರುವ ಸುಮಂತ್ ಬಿಲ್ಲವ ಅವರೊಂದಿಗೆ ಕುಟುಂಬಸ್ಥರ ಸಮ್ಮುಖದಲ್ಲಿ ವಿವಾಹವಾಗಿದ್ದರು. ಅಲ್ಲಿಂದ ಈ ಜೋಡಿ ಅನ್ನೋನ್ಯವಾಗಿಯೇ ಇತ್ತು. ಕೆಲ ಜನಪ್ರಿಯ ರಿಯಾಲಿಟಿ ಶೋನಲ್ಲೂ ಕಾಣಿಸಿಕೊಂಡಿತ್ತು. ಹಲವು ಸಂದರ್ಭಗಳಲ್ಲಿ ಪತಿ ಬಗ್ಗೆ ಶುಭಾ ಮೆಚ್ಚುಗೆಯನ್ನೂ ವ್ಯಕ್ತಪಡಿಸಿದ್ದರು. ಆದರೆ, ಕಳೆದ ಕೆಲವು ದಿನಗಳಿಂದ ಈ ದಂಪತಿ ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನ ಪಡೆಯಲು ಕೌಟುಂಬಿಕ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ ಎಂದು ವರದಿಯಾಗಿದೆ.

ಬೆಂಬಲಕ್ಕೆ ನಿಂತ ಫ್ಯಾನ್ಸ್

ಶುಭಾ ಪೂಂಜಾ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡುತ್ತಿದ್ದಂತೆ ಅವರ ಅಭಿಮಾನಿಗಳು ನಟಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. "ನಿಮ್ಮ ಜೊತೆ ನಾವಿದ್ದೇವೆ" ಎಂದು ಕೆಲವರು ಧೈರ್ಯ ತುಂಬುತ್ತಿದ್ದಾರೆ. ಇನ್ನು ಕೆಲವರು "ನೀವು ಯಾವುದೇ ನಿರ್ಧಾರ ಕೈಗೊಂಡರೂ ನಾವು ನಿಮ್ಮ ಜೊತೆಗಿರುತ್ತೇವೆ. ನಿಮ್ಮ ವೈಯಕ್ತಿಕ ನಿರ್ಧಾರವನ್ನು ಗೌರವಿಸುತ್ತೇವೆ" ಎಂದು ಕಾಮೆಂಟ್ ಮಾಡುತ್ತಿದ್ದಾರೆ. ಈ ಪೋಸ್ಟ್‌ನಲ್ಲಿ "ಸಮಯ ಬಂದಾಗ ನನ್ನ ವೈಯಕ್ತಿಕ ಜೀವನದಲ್ಲಿ ನಡೆಯುತ್ತಿರುವ ವಿಷಯದ ಬಗ್ಗೆ ನಾನೇ ನಿಮಗೆ ಖುದ್ದಾಗಿ ಎಲ್ಲವನ್ನೂ ತಿಳಿಸುತ್ತೇನೆ." ಎಂದು ಹೇಳಿದ್ದು, ಅಭಿಮಾನಿಗಳಲ್ಲಿ ಕೊಂಚ ಆತಂಕ ಮೂಡಿಸಿದೆ.

English summary
Actress Shubha Poonja requested privacy on divorce rumors on her Instagram post. She requested media to give privacy
Read more about: shubha poonja actress divorce
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X