Just In
Don't Miss!
- Automobiles
ಕುಟುಂಬ ನಿರ್ವಹಣೆಗಾಗಿ ಆಟೋ ಚಾಲಕಳಾದ 21 ವರ್ಷದ ಯುವತಿ
- News
ರೈತರ ಹೋರಾಟ ಬೆಂಬಲಿಸಿ ಜ.20ರಂದು ರಾಜ್ ಭವನ ಚಲೋ
- Sports
ಗಬ್ಬಾ ಸ್ಟೇಡಿಯಂನಲ್ಲಿ ಭಾರತೀಯರ ಮನ ಗೆದ್ದ ಬಡ ಕ್ರಿಕೆಟಿಗರ ಕತೆ
- Lifestyle
ಚೀನಾದ ಐಸ್ ಕ್ರೀಮ್ ನಲ್ಲಿ ಕೊರೊನಾ ವೈರಸ್ ಪತ್ತೆ!!!
- Finance
ಷೇರುಪೇಟೆಯಲ್ಲಿ ಉತ್ಸಾಹ; ಹೂಡಿಕೆದಾರರ ಸಂಪತ್ತು 3.50 ಲಕ್ಷ ಕೋಟಿ ರು. ಹೆಚ್ಚಳ
- Education
NBT Recruitment 2021: 26 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಡ್ರಗ್ಸ್ ಪ್ರಕರಣ: ಮತ್ತೊಬ್ಬ ನಟಿಯನ್ನು ಬಂಧಿಸಿದ ಎನ್‌ಸಿಬಿ
ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿಯ ಬಂಧನವಾಗಿದೆ. ಕನ್ನಡದ 'ರಿಂಗ್ ಮಾಸ್ಟರ್' ಸಿನಿಮಾದಲ್ಲಿ ನಟಿಸಿದ್ದ ಶ್ವೇತ ಕುಮಾರಿ ಅವರನ್ನು ಎನ್‌ಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.
ಮುಂಬೈ ಡ್ರಗ್ ಪೆಡ್ಲರ್ ಕರೀಂ ನ ಸಹಚರ ಆಗಿದ್ದ ಚಾಂದ್ ಶೇಖ್ ಎಂಬಾತನನ್ನು ಬಂಧಿಸಿದ್ದ ಎನ್.ಸಿ.ಬಿ ಅಧಿಕಾರಿಗಳು ಆತ ನೀಡಿದ ಮಾಹಿತಿಯ ಆಧಾರದ ಮೇಲೆ ಹೈದರಾಬಾದ್ ನಲ್ಲಿ ನಟಿ ಶ್ವೇತಾ ಕುಮಾರಿ ಅನ್ನು ಬಂಧಿಸಿದ್ದಾರೆ.
ಶ್ವೇತ ಕುಮಾರಿ ಅವರು ಕನ್ನಡಕ್ಕಿಂತಲೂ ತೆಲುಗು ಸಿನಿಮಾ ಉದ್ಯಮದಲ್ಲಿ ಹೆಚ್ಚು ಸಂಪರ್ಕ ಹೊಂದಿದ್ದಾರೆ. ತೆಲುಗು ಸಿನಿಮಾಗಳಲ್ಲಿ ಸಹ ಹೆಚ್ಚಾಗಿ ನಟಿಸಿರುವ ಶ್ವೇತಾ, ಒಂದು ತಮಿಳು ಸಿನಿಮಾದಲ್ಲಿಯೂ ನಟಿಸಿದ್ದಾರೆ.
ನಟಿ ಶ್ವೇತಾ, ಡ್ರಗ್ಸ್ ಪಡೆಯುತ್ತಿದ್ದರಲ್ಲದೆ, ಡ್ರಗ್ಸ್ ಮಾರಾಟದಲ್ಲಿಯೂ ತೊಡಗಿದ್ದಾರೆ ಎಂದು ಆರೋಪಿಸಲಾಗಿದೆ. ಸೈಯದ್ ಎಂಬ ಡ್ರಗ್ ಪೆಡ್ಲರ್ ಜೊತೆಗೆ ಸಂಪರ್ಕ ಸಹ ಹೊಂದಿದ್ದಾರೆ ಎನ್ನಲಾಗಿದೆ. ನಟಿಯ ಬಂಧನದ ವೇಳೆ ಹತ್ತು ಲಕ್ಷ ನಗದು, 10 ಗ್ರಾಂ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ.
ನಟಿಯ ಮೊಬೈಲ್ ಅನ್ನು ಎನ್‌ಸಿಬಿ ವಶಪಡಿಸಿಕೊಂಡಿದ್ದು ಕರೆ ಮಾಹಿತಿ, ಸಂಪರ್ಕ ಸಂಖ್ಯೆ, ವಾಟ್ಸ್‌ಆಪ್ ಚಾಟ್‌ಗಳನ್ನು ಜಾಲಾಡುತ್ತಿದ್ದಾರೆ. ನಟಿಯನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸುತ್ತಿದ್ದಾರೆ.