Harshika-Bhuvan Wedding: ಶಿವಣ್ಣ, ಕ್ರೇಜಿಸ್ಟಾರ್, ಬೊಮ್ಮಾಯಿ, ಯಡಿಯೂರಪ್ಪ ಸೇರಿದಂತೆ ಗಣ್ಯರಿಗೆ ಆಹ್ವಾನ.. ಫೋಟೊಗಳು ವೈರಲ್!

By ಫಿಲ್ಮಿಬೀಟ್ ಡೆಸ್ಕ್

ಸ್ಯಾಂಡಲ್‌ವುಡ್‌ನ ಮತ್ತೊಂದು ತಾರಾ ಜೋಡಿ ವೈವಾಹಿಕ ಜೀವನಕ್ಕೆ ಕಾಲಿಡುವುದಕ್ಕೆ ಸಜ್ಜಾಗಿದೆ. ಕಳೆದ ಹಲವು ವರ್ಷಗಳಿಂದ ಹರ್ಷಿಕಾ ಪೂಣಚ್ಚ ಹಾಗೂ ಭುವನ್ ಪೊನ್ನಣ್ಣ ಜೋಡಿ ಚಿತ್ರರಂಗದಲ್ಲಿ ಸ್ನೇಹಿತರಾಗಿದ್ದರು. ಒಬ್ಬರಿಬ್ಬರು ಸಿನಿಮಾ ಹಾಗೂ ಸಮಾಜಮುಖಿ ಕೆಲಸದಲ್ಲಿ ಬೆಂಬಲವಾಗಿ ನಿಂತಿದ್ದರು.

ಪ್ರತಿಬಾರಿ ಇಬ್ಬರ ಡೇಟಿಂಗ್ ಬಗ್ಗೆ ಸುದ್ದಿ ಬಂದಾಗಲೂ ಸ್ನೇಹಿತರು ಅಂತಲೇ ಹೇಳಿಕೊಂಡು ತಪ್ಪಿಸಿಕೊಳ್ಳುತ್ತಿದ್ದರು. ಆದ್ರೀಗ ಇಬ್ಬರೂ ವೈವಾಹಿಕ ಜೀವನಕ್ಕೆ ಕಾಲಿಡುವುದಕ್ಕೆ ಸಜ್ಜಾಗಿದ್ದಾರೆ. ಈ ಸಂಬಂಧ ಕನ್ನಡ ಚಿತ್ರರಂಗ ಹಾಗೂ ರಾಜಕೀಯ ಮುಖಂಡರಿಗೆ ಮದುವೆಯ ಆಮಂತ್ರಣ ಪತ್ರಿಕೆಯನ್ನು ನೀಡಿದ್ದಾರೆ.

Harshika-Bhuvan Wedding

ಹರ್ಷಿಕಾ ಪೂಣಚ್ಚ ಇತ್ತೀಚೆಗೆ ಗೆಳೆತಿಯರೊಂದಿಗೆ ಬ್ಯಾಚುಲರ್ ಪಾರ್ಟಿ ಮಾಡಿದ್ದರು. ಸೋಶಿಯಲ್ ಮೀಡಿಯಾಗಳಲ್ಲಿ ಈ ಫೋಟೊಗಳು ಹರಿದಾಡಿದ್ದವು. ಈ ಗ್ಯಾಪ್‌ನಲ್ಲಿ ಕಳೆದ ಕೆಲವು ದಿನಗಳಿಂದ ಸಿನಿಮಾ ಹಾಗೂ ರಾಜಕೀಯ ಕ್ಷೇತ್ರದ ಆತ್ಮೀಯರನ್ನು ಮದುವೆ ಆಹ್ವಾನ ನೀಡುತ್ತಿದ್ದಾರೆ.

ಹರ್ಷಿಕಾ ಪೂಣಚ್ಚ ಸ್ಯಾಂಡಲ್‌ವುಡ್, ಬೋಜ್‌ಪುರಿ ಭಾಷೆಯ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಈಗಾಗಲೇ ಹಲವು ಬೋಜ್‌ಪುರಿ ಸಿನಿಮಾ ಹಾಗೂ ಅಲ್ಬಮ್ ಹಾಡುಗಳಲ್ಲಿ ನಟಿಸಿ ಬಂದಿದ್ದಾರೆ. ಸಿನಿಮಾಗಳಲ್ಲಿ ಬ್ಯುಸಿಯಾಗಿರುವಾಗಲೇ ಹರ್ಷಿಕಾ ಪೂಣಚ್ಚ ಬಹು ದಿನದ ಗೆಳೆಯ ಭುವನ್ ಪೊನ್ನಣ್ಣ ಜೊತೆ ಹಸೆಮಣೆ ಏರಲಿದ್ದಾರೆ.

Harshika-Bhuvan Wedding

ಹರ್ಷಿಕ ಪೂಣಚ್ಚ ಹಾಗೂ ಭುವನ್ ಪೊನ್ನಣ್ಣ ಇಬ್ಬರೂ ಕೊಡಗಿನವರೇ ಆಗಿದ್ದಾರೆ. ಸಿನಿಮಾರಂಗಕ್ಕೆ ಕಾಲಿಟ್ಟ ದಿನದಿಂದ ಈ ಜೋಡಿ ಒಬ್ಬರಿಗೆ ಮತ್ತೊಬ್ಬರು ಬೆಂಬಲವಾಗಿಯೇ ನಿಂತಿದ್ದಾರೆ. ಸದ್ಯ ತಮ್ಮ ಮದುವೆ ಆಮಂತ್ರಣ ಪತ್ರಿಕೆ ನೀಡುವುದರಲ್ಲಿ ಈ ಜೋಡಿ ಬ್ಯುಸಿಯಾಗಿದೆ.

ಸ್ಯಾಂಡಲ್‌ವುಡ್‌ನ ಸೆಂಚುರಿ ಸ್ಟಾರ್ ಶಿವಣ್ಣ, ಕ್ರೇಜಿಸ್ಟಾರ್ ರವಿಚಂದ್ರನ್, ಗೋಲ್ಡನ್ ಸ್ಟಾರ್ ಗಣೇಶ್, ಶ್ರೀನಾಥ್ ದಂಪತಿ, ಸುಧಾರಾಣಿ, ದೊಡ್ಡಣ್ಣ, ಮಾಲಾಶ್ರೀ, ತಾರಾ, ಅನುಪ್ರಭಾಕರ್, ಅಶ್ವಿನಿ ಪುನೀತ್ ರಾಜ್ ಕುಮಾರ್ , ರಾಘವೇಂದ್ರ ರಾಜ್ ಕುಮಾರ್, ಉಪೇಂದ್ರ, ಪ್ರಿಯಾಂಕಾ ಉಪೇಂದ್ರ, ಅಮೂಲ್ಯ, ದಿಗಂತ್ ಸೇರಿದಂತೆ ಹಲವು ಚಿತ್ರರಂಗದ ಆತ್ಮೀಯರಿಗೆ ಆಹ್ವಾನ ನೀಡಿದ್ದಾರೆ.

ಹಾಗೇ ರಾಜಕೀಯ ಕ್ಷೇತ್ರದಿಂದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಬಿ ಎಸ್ ಯಡಿಯೂರಪ್ಪ, ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಮುಖಂಡರಿಗೆ, ಪೊಲೀಸ್ ಅಧಿಕಾರಿಗಳು ಆಹ್ವಾನ ಪತ್ರಿಕೆಯನ್ನು ನೀಡಲಾಗಿದೆ.

ಹರ್ಷಿಕ ಪೂಣಚ್ಚ ಹಾಗೂ ಭುವನ್ ಗೌಡ ಮದುವೆ ಇದೇ ಆಗಸ್ಟ್ 24ರಂದು ವಿರಾಜಪೇಟೆಯಲ್ಲಿ ಅದ್ಧೂರಿಯಾಗಿ ನೆರವೇರಲಿದೆ. ಕೊಡವ ಸಂಪ್ರದಾಯದಂತೆ ಮದುವೆ ನಡೆಯಲಿದ್ದು, ವಿರಾಜಪೇಟೆಯ ಅಮ್ಮತ್ತಿಯಲ್ಲಿ ಗ್ರ್ಯಾಂಡ್ ಆಗಿ ವಿವಾಹ ನಡೆಯಲಿದೆ.

ಮದುವೆ ಇನ್ನು ಕೇವಲ 10 ದಿನಗಳು ಬಾಕಿ ಉಳಿದಿದ್ದು, ಈಗಾಗಲೇ ವಿವಾಹಕ್ಕೆ ಸಂಬಂಧಿಸಿದ ಕಾರ್ಯಗಳು ಜರುಗುತ್ತಿವೆ. ಇನ್ನು ಕೆಲವೇ ದಿನಗಳಲ್ಲಿ ಸ್ಯಾಂಡಲ್‌ವುಡ್‌ನ ಮತ್ತೊಂದು ತಾರಾ ಜೋಡಿ ಮದುವೆಗೆ ಸಾಕ್ಷಿಯಾಗಲಿದೆ.

More from Filmibeat

English summary
Harshika Poonacha and Bhuvan Ponnanna wedding invition to celebrities
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X