ಹೀರೋ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಜೀವನಾಧಾರಿತ ಸಿನಿಮಾದ ರಿಲೀಸ್ ಡೇಟ್ ಫಿಕ್ಸ್
26/11ರ ಹೀರೋ ಮೇಜರ್ ಉನ್ನಿಕೃಷ್ಣನ್ ಅವರ ಜೀವನಾಧಾರಿತ ಸಿನಿಮಾದ ರಿಲೀಸ್ ಡೇಟ್ ಅನೌನ್ಸ್ ಆಗಿದೆ. ಬಹುನಿರೀಕ್ಷೆಯ ಮೇಜರ್ ಸಿನಿಮಾ ಯಾವಾಗ ರಿಲೀಸ್ ಆಗುತ್ತೆ ಎಂದು ಅಭಿಮಾನಿಗಳು ಕಾಯುತ್ತಿದ್ದರು. ಇದೀಗ ಈ ಕುತೂಹಲಕ್ಕೆ ತೆರೆಬಿದ್ದಿದೆ.
ಟಾಲಿವುಡ್ ಪ್ರಿನ್ಸ್ ಮಹೇಶ್ ಬಾಬು ನಿರ್ಮಾಣದಲ್ಲಿ ಮೂಡಿಬರುತ್ತಿರುವ, ಮೇಜರ್ ಸಿನಿಮಾ ಜುಲೈ 2ರಂದು ತೆರೆಗೆ ಬರುತ್ತಿದೆ. ಈ ಬಗ್ಗೆ ನಿರ್ಮಾಪಕ ಮಹೇಶ್ ಬಾಬು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹೊಂಚಿಕೊಂಡಿದ್ದಾರೆ. ರಿಲೀಸ್ ಡೇಟ್ ಬಹಿರಂಗಗೊಳಿಸಿ 'ಜುಲೈ 2 ಮೇಜರ್ ಡೇ' ಎಂದು ಬರೆದುಕೊಂಡಿದ್ದಾರೆ.
ಅಂದಹಾಗೆ ಸಂದೀಪ್ ಉನ್ನಿಕೃಷ್ಣನ್ ಪಾತ್ರದಲ್ಲಿ ನಟ ಅದ್ವಿಶೇಷ್ ಕಾಣಿಸಿಕೊಂಡಿದ್ದಾರೆ. ಈಗಾಗಲೇ ರಿಲೀಸ್ ಆಗಿರುವ ಮೊದಲ ಲುಕ್ ಅಭಿಮಾನಿಗಳ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿತ್ತು. ಚಿತ್ರಕ್ಕೆ ಶಶಿ ಕಿರಣ್ ಆಕ್ಷನ್ ಕಟ್ ಹೇಳಿದ್ದಾರೆ.

'ಮೇಜರ್' ಸಿನಿಮಾ ತೆಲುಗು ಮಾತ್ರವಲ್ಲದೆ ಹಿಂದಿಯಲ್ಲೂ ಬಿಡುಗಡೆಯಾಗುತ್ತಿದೆ. ಚಿತ್ರದಲ್ಲಿ ಮೇಜರ್ ಸಂದೀಪ್ ಅವರ ಜೀವನ ಮತ್ತು 26/11ರ ಮುಂಬೈ ದಾಳಿಯ ಬಗ್ಗೆ ಕಟ್ಟಿಕೊಡಲಾಗಿದೆ ಎನ್ನಲಾಗುತ್ತಿದೆ. ಚಿತ್ರದಲ್ಲಿ ಸಾಯಿ ಮಂಜ್ರೇಕರ್, ಪ್ರಕಾಶ್ ರಾಜ್ ರೇವತಿ, ಮುರಳಿ ಶರ್ಮಾ ಸೇರಿದಂತೆ ಅನೇಕರು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.


Click it and Unblock the Notifications











