ಕೊಲೆ ಕೇಸ್‌ನಲ್ಲಿ ಜೈಲು ಸೇರಿದ ದರ್ಶನ್; ಪತಿಯನ್ನು ಅನ್‌ಫಾಲೋ ಮಾಡಿದ ವಿಜಯಲಕ್ಷ್ಮಿ
ನಿನ್ನೆ (ಜೂನ್ 11) ರೇಣಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಬಂಧಿಸಲಾಗಿತ್ತು. ಈ ವಿಷಯ ಹೊರ ಬೀಳುತ್ತಿದ್ದಂತೆ ಅವರ ಅಭಿಮಾನಿಗಳಿಗೆ ಆಪ್ತರಿಗೆ ದೊಡ್ಡ ಶಾಕ್ ಆದಿತ್ತು. ಇಡೀ ದಿನ ದರ್ಶನ್ ಅವರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದರು. ಕೊಲೆ ಕೇಸ್‌ನಲ್ಲಿ ದರ್ಶನ್ ಪಾತ್ರದ ಬಗ್ಗೆ ವಿಚಾರಣೆ ಮಾಡಿ ನ್ಯಾಯಾಲಕ್ಕೆ ಒಪ್ಪಿಸಿದರು.
24ನೇ ಎಸಿಎಂಎಂ ಕೋರ್ಟ್ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಒಟ್ಟು 13 ಮಂದಿಯನ್ನು ಪೊಲೀಸ್ ಕಸ್ಟಡಿಗೆ ನೀಡಿತ್ತು. ಕೊಲೆ ಪ್ರಕರಣದಲ್ಲಿ ದರ್ಶನ್ ಹೆಸರು ಕೇಳಿ ಬಂದಿದ್ದರೂ, ಪತ್ನಿ ವಿಜಯಲಕ್ಷ್ಮಿ ಇದೂವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೂವರೆಗೂ ಮೌನ ವಹಿಸಿದ್ದಾರೆ.

ಅಚ್ಚರಿಯ ಬೆಳವಣಿಗೆ ಎಂಬಂತೆ ದರ್ಶನ್ ಅವರನ್ನು ತಮ್ಮ ಇನ್‌ಸ್ಟಾಗ್ರಾಂ ಖಾತೆಯಿಂದ ಅನ್‌ಫಾಲೋ ಮಾಡಿದ್ದಾರೆ. ಜೊತೆಗೆ ತಮ್ಮ ಡಿಪಿಯನ್ನೂ ತೆಗೆದು ಹಾಕಿದ್ದಾರೆ. ಹಾಗಾಗಿ ವಿಜಯಲಕ್ಷ್ಮಿ ದರ್ಶನ್ ಅವರ ಮುಂದಿನ ನಡೆ ಬಗ್ಗೆ ಸಾಕಷ್ಟು ಅನುಮಾನವನ್ನು ಹುಟ್ಟಾಕಿದೆ. ವಿಜಯಲಕ್ಷ್ಮಿ ಮುಂದೇ ಏನು ಮಾಡುತ್ತಾರೆ ಅನ್ನೋದು ಎಲ್ಲರ ಅಚ್ಚರಿಗೆ ಕಾರಣವಾಗಿದೆ.
ದರ್ಶನ್ ಹಾಗೂ ಅವರ ಸಂಗಡಿಗರು ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು ಬೆಂಗಳೂರಿಗೆ ಕರೆಸಿಕೊಂಡು ಹಿಂಸೆ ಕೊಟ್ಟು ಕೊಲೆ ಮಾಡಿದ್ದರು. ಪವಿತ್ರಾ ಗೌಡ ಇನ್‌ಸ್ಟಾಗ್ರಾಂಗೆ ರೇಣುಕಾಸ್ವಾಮಿ ಅಶ್ಲೀಲ ಮೆಸೇಜ್ ಕಳುಹಿಸುತ್ತಿದ್ದ ಅನ್ನುವ ಕಾರಣಕ್ಕೆ ಈ ಕೊಲೆ ನಡೆದಿದೆ ಎಂದು ತಿಳಿದು ಬಂದಿದೆ. ಇದರಲ್ಲಿ ದರ್ಶನ್ ಪಾತ್ರವಿದೆ ಎಂಬ ಆರೋಪದಡಿಯಲ್ಲಿ ಪವಿತ್ರಾ ಗೌಡನೂ ಸೇರಿ 13 ಮಂದಿಯನ್ನು ಬಂಧಿಸಲಾಗಿದೆ.
ಸದ್ಯ ಪೊಲೀಸರು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪವಿತ್ರಾಗೌಡರನ್ನು ಎ 1, ದರ್ಶನ್ ಅವರನ್ನು ಎ 2 ಮಾಡಿದ್ದಾರೆ. ಹಾಗೇ ಇವರಿಬ್ಬರನ್ನೂ ಸೇರಿಸಿ ಒಟ್ಟು 13 ಮಂದಿಯನ್ನು ಬಂಧಿಸಲಾಗಿದೆ. ಸದ್ಯ 6 ದಿನಗಳ ಕಾಲ ಪೊಲೀಸರ ಕಸ್ಟಡಿಯಲ್ಲಿ 13 ಮಂದಿ ಇರುತ್ತಾರೆ. ಇವರಿಂದ ಪೊಲೀಸರು ಇನ್ನಷ್ಟು ಮಾಹಿತಿ ಹಾಗೂ ಸಾಕ್ಷಿಗಳನ್ನು ಕಲೆ ಹಾಕುವ ಸಾಧ್ಯತೆಯಿದೆ.

ಕೆಲವು ದಿನಗಳ ಹಿಂದೆ ದರ್ಶನ್ ಜೊತೆಗಿನ ಫೋಟೊಗಳನ್ನು ಪವಿತ್ರಾ ಗೌಡ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್ ಮಾಡಿದ್ದರು. ಈ ಸಂಬಂಧ ವಿಜಯಲಕ್ಷ್ಮಿ ಹಾಗೂ ಪವಿತ್ರಾ ಗೌಡ ನಡುವೆ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಯುದ್ಧವೇ ನಡೆದಿತ್ತು. ಈ ವೇಳೆ ದರ್ಶನ್ ಅಭಿಮಾನಿಗಳು ವಿಜಯಲಕ್ಷ್ಮಿ ಪರ ನಿಂರಿದ್ದರು.
ದರ್ಶನ್ ಜೊತೆಗಿನ ಫೋಟೊಗಳನ್ನು ಹರಿಬಿಟ್ಟ ಬಳಿಕ ಪವಿತ್ರಾ ಗೌಡಗೆ ಇನ್‌ಸ್ಟಾಗ್ರಾಂನಲ್ಲಿ ವಿರೋಧ ವ್ಯಕ್ತವಾಗಿತ್ತು. ಕೆಲವರು ಪವಿತ್ರಾ ಗೌಡ ವಿರುದ್ಧ ಕಾಮೆಂಟ್ ಮಾಡುತ್ತಿದ್ದರು. ಅದರಲ್ಲಿ ರೇಣುಕಾಸ್ವಾಮಿ ಕೂಡ ಒಬ್ಬರು ಎನ್ನಲಾಗಿದೆ. ಇದೇ ಹಿನ್ನೆಲೆಯಲ್ಲಿ ದರ್ಶನ್ ಹಾಗೂ ಪವಿತ್ರಾ ಗೌಡ ತಮ್ಮ ಸಹಚರರೊಂದಿಗೆ ಸೇರಿ ರೇಣುಕಾಸ್ವಾಮಿಯನ್ನು ಕೊಲೆ ಮಾಡಿದ್ದಾರೆನ್ನುವ ಆರೋಪ ವಿಜಯಲಕ್ಷ್ಮಿಯವರಿಗೆ ಬೇಸರ ಮೂಡಿಸಿದೆ ಎನ್ನಲಾಗಿದೆ. ಇದೇ ಬೇಸರದಲ್ಲಿ ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡುವುದನ್ನು ನಿಲ್ಲಿಸಿದ್ದಾರೆ ಎಂದು ವರದಿಗಳಾಗಿವೆ.


Click it and Unblock the Notifications