'ಕಾಂತಾರ ಚಾಪ್ಟರ್ 1' ಬಳಿಕ 'ಕೊರಗಜ್ಜ' ಸಿನಿಮಾ ಪ್ಯಾನ್ ಇಂಡಿಯಾ ರಿಲೀಸ್; 6 ಭಾಷೆಯಲ್ಲಿ ಬಿಡುಗಡೆ

'ಕಾಂತಾರ ಚಾಪ್ಟರ್ 1' ವಿಶ್ವದಾದ್ಯಂತ ಉತ್ತಮ ಪ್ರದರ್ಶನವನ್ನು ಕಾಣುತ್ತಿದೆ. ತುಳುನಾಡಿನ ದೈವದ ಕಥೆಯನ್ನು ತೆರೆಮೇಲೆ ಕಂಡು ಮೆಚ್ಚಿಕೊಂಡಿದ್ದಾರೆ. ಬಾಕ್ಸಾಫೀಸ್‌ನಲ್ಲಿಯೂ ಈ ಸಿನಿಮಾ ಮೆಗಾ ಹಿಟ್ ಅಂತ ಸಾಬೀತಾಗಿದೆ. ಈಗ ಮತ್ತೊಂದು ಸಿನಿಮಾ ತುಳುನಾಡಿನ ದೈವದ ಮಹಿಮೆಯನ್ನು ಹೇಳುವುದಕ್ಕೆ ಹೊರಟಿದೆ. ಅದುವೇ 'ಕೊರಗಜ್ಜ'.

ಸುಧೀರ್ ಅತ್ತಾವರ್ ನಿರ್ದೇಶಿಸಿರುವ ಈ ಬಹು ನಿರೀಕ್ಷಿತ ಸಿನಿಮಾವನ್ನು ತ್ರಿವಿಕ್ರಮ ಸಪಲ್ಯ ನಿರ್ಮಾಣ ಮಾಡಿದ್ದಾರೆ. ಈಗಾಗಲೇ 'ಕೊರಗಜ್ಜ' ಸಿನಿಮಾದ ಫಸ್ಟ್ ಲುಕ್ ಟೀಸರ್ ಹಾಗೂ ತ್ರಿಡಿ ಮೋಷನ್ ಪೋಸ್ಟರ್ ಇತ್ತೀಚೆಗೆ ಅದ್ದೂರಿಯಾಗಿ ರಿಲೀಸ್ ಮಾಡಲಾಗಿದೆ. 'ಕೊರಗಜ್ಜ' ಸಿನಿಮಾಗೆ ಫಸ್ಟ್ ಲುಕ್ ಟೀಸರ್‌ಗೆ ಪ್ರೇಕ್ಷಕರು ಕೂಡ ಉತ್ತಮ ಪ್ರತಿಕ್ರಿಯೆ ನೀಡಿದ್ದಾರೆ.

After Kantara Chapter 1 another Tulunadu Daiva based movie Koragajja releasing pan india

ಇತ್ತೀಚೆಗೆ 'ಕೊರಗಜ್ಜ' ಸಿನಿಮಾ ಫಸ್ಟ್ ಲುಕ್ ಟೀಸರ್ ಅನ್ನು ಗಣ್ಯರ ಸಮ್ಮುಖದಲ್ಲಿ ರಿಲೀಸ್ ಮಾಡಲಾಗಿದೆ. ಮಾಜಿ ಸಚಿವೆ ಮೋಟಮ್ಮ, ನಿರ್ಮಾಪಕಿ ಹಾಗೂ ನಿರ್ದೇಶಕಿ ವಿಜಯಲಕ್ಷ್ಮಿ ಸಿಂಗ್, ಸಿನಿಮಾದ ನಿರ್ದೇಶಕ, ನಿರ್ಮಾಪಕ, ನಟ ನಟಿಯರೆಲ್ಲ 'ಕೊರಗಜ್ಜ'ನ ಕಟೌಟ್‌ಗೆ ಪುಷ್ಪಾರ್ಚನೆ ಮಾಡಿರುವುದು ಭಕ್ತಿಯನ್ನು ತೋರುವಂತಿತ್ತು. ಸುಮಾರು ಮೂರು ವರ್ಷಗಳ ಹಿಂದೆ ಆರಂಭವಾದ ಈ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಅದೂ ಪ್ಯಾನ್ ಇಂಡಿಯಾ ಲೆವೆಲ್‌ನಲ್ಲಿ ರಿಲೀಸ್ ಮಾಡಲು ಚಿತ್ರತಂಡ ಮುಂದಾಗಿದೆ.

"ಮೂರು ವರ್ಷಗಳ ಹಿಂದೆ ಆರಂಭವಾದ ಸಿನಿಮಾ ಈಗ ಅನೇಕ ಅಡೆತಡೆಗಳನ್ನು ದಾಟಿ ಬಿಡುಗಡೆಯ ಹಂತ ತಲುಪಿದೆ. ಇದರ ಪೂರ್ವಭಾವಿಯಾಗಿ ಇಂದು ಫಸ್ಟ್ ಲುಕ್ ಟೀಸರ್ ಹಾಗೂ ತ್ರಿಡಿ ಮೋಷನ್ ಪೋಸ್ಟರ್ ಬಿಡುಗಡೆ ಮಾಡಿದ್ದೇವೆ.ಕೊರಗಜ್ಜನ ಆಶೀರ್ವಾದದಿಂದ ಸಿನಿಮಾ ಅಂದುಕೊಂಡ ಹಾಗೆ ಬಂದಿದೆ. ಈ ಸಿನಿಮಾ ಒಟ್ಟು ಆರು ಭಾಷೆಗಳಲ್ಲಿ ಮೂಡಿಬಂದಿದ್ದು, 31 ಹಾಡುಗಳಿವೆ(ಆರು ಭಾಷೆಗಳಿಂದ). ಗೋಪಿ ಸುಂದರ್ ಅವರ ಸಂಗೀತ ನೀಡಿದ್ದು, ಭಾರತದ ಪ್ರಸಿದ್ದ ಗಾಯಕ-ಗಾಯಕಿಯರು ಈ ಹಾಡಗಳನ್ನು ಹಾಡಿದ್ದಾರೆ. ಸುಮಾರು ಇಪ್ಪತ್ತನಾಲ್ಕು ವರ್ಷದ ತನಿಯ ದೈವತ್ವಕ್ಕೇರಿ ಕೊರಗಜ್ಜನಾದ ಕಥೆಯನ್ನು ಈ ಚಿತ್ರದಲ್ಲಿ ತೋರಿಸಲಾಗುತ್ತಿದೆ" ಎಂದು ನಿರ್ದೇಶಕ ಸುಧೀರ್ ಅತ್ತಾವರ್ ತಿಳಿಸಿದ್ದಾರೆ.

'ಕೊರಗಜ್ಜ'ನ ಕುರಿತ ಸಿನಿಮಾವನ್ನು ಕನ್ನಡ ಚಿತ್ರರಂಗದ ಹಿರಿಯ ನಟಿ, ನಿರ್ದೇಶಕಿ ಹಾಗೂ ನಿರ್ಮಾಪಕಿ ವಿಜಯಲಕ್ಷ್ಮಿ ಸಿಂಗ್, ಜೈ ಜಗದೀಶ್ ಆರಂಭಿಸಿದ್ದರು. ಆದರೆ, 25 ಸಿನಿಮಾಗಳನ್ನು ನಿರ್ಮಾಣ ಮಾಡಿರುವ ಇವರಿಗೆ ಕೊರಗಜ್ಜನ ಸಿನಿಮಾ ಮಾಡುವುದಕ್ಕೆ ಸಾಧ್ಯವಾಗಲಿಲ್ಲ. ಹೀಗಾಗಿ ಈ ಪ್ರಾಜೆಕ್ಟ್‌ನಿಂದ ಹಿಂದೆ ಸರಿದೆವು. ಇದು ಸುಧೀರ್ ಅತ್ತಾವರ ಅವರಿಗೆ ಒಲಿದು ಬಂದಿದೆ ಎಂದು ವಿಜಯಲಕ್ಷ್ಮಿ ಸಿಂಗ್ ವೇದಿಕೆ ಮೇಲೆ ಹೇಳಿದ್ದಾರೆ.

ನಿರ್ದೇಶಕ ಸುಧೀರ್ ಅತ್ತಾವರ್ ಹಾಗೂ ಸಹ ಕಲಾವಿದರ ಶ್ರಮವನ್ನು ಹೊಗಳುತ್ತಾ ಈ ಸಿನಿಮಾದ ಚಿತ್ರೀಕರಣದ ಅನುಭವಗಳನ್ನು ಹಿರಿಯ ನಟಿ ಭವ್ಯಾ ಹಂಚಿಕೊಂಡಿದ್ದಾರೆ. ರಾಣಿ 'ಪಂಜಂದಾಯಿ' ಪಾತ್ರದಲ್ಲಿ ಖ್ಯಾತ ನಟ ಕಬೀರ್ ಬೇಡಿಯೊಂದಿಗೆ ನಟಿಸಿದ ಅನುಭವವನ್ನು ಹಂಚಿಕೊಂಡಿದ್ದಾರೆ.

ಇನ್ನು ಹಿರಿಯ ನಟಿ ಶ್ರುತಿ ಇದು ತನ್ನ ವೃತ್ತಿ ಬದುಕಿನ ವಿಭಿನ್ನ ಸಿನಿಮಾ ಹೇಳಿಕೊಂಡಿದ್ದಾರೆ. "ನಾನು ಈ ಚಿತ್ರದಲ್ಲಿ ಕೊರಗಜ್ಜನ ಸಾಕು ತಾಯಿಯ ಪಾತ್ರ ನಿರ್ವಹಿಸಿದ್ದೇನೆ. ಈ ಚಿತ್ರಕ್ಕಾಗಿ ಸತತ ಇಪ್ಪತ್ತೆಂಟು ಗಂಟೆಗಳ ಚಿತ್ರೀಕರಣ ಮಾಡಿದ್ದೇನೆ. ಇದು ಮರೆಯಲಾರದ ಅನುಭವ. ಅಷ್ಟು ಹೊತ್ತು ಕೆಲಸ ಮಾಡಿದರೂ ನಿರ್ದೇಶಕರಲ್ಲಿದ್ದ ಉತ್ಸಾಹ ಒಂದು ಚೂರು ಕಡಿಮೆ ಆಗಿರಲಿಲ್ಲ. ಕೊರಗಜ್ಜನ ಆಶೀರ್ವಾದದಿಂದ ಈ ಸಿನಿಮಾ ಯಶಸ್ವಿಯಾಗಲಿ" ಎಂದು ಶ್ರುತಿ ಹಾರೈಸಿದ್ದಾರೆ.

'ಕೊರಗಜ್ಜ' ಸಿನಿಮಾವನ್ನು ನವೆಂಬರ್ ಕೊನೆಗೆ ರಿಲೀಸ್ ಮಾಡುವ ಆಲೋಚನೆಯಲ್ಲಿ ನಿರ್ಮಾಪಕ ತಿವಿಕ್ರಮ ಸಪಲ್ಯ ಇದ್ದಾರೆ. ಈ ಸಿನಿಮಾವನ್ನು ಆರು ಭಾಷೆಗಳಲ್ಲಿ ರಿಲೀಸ್ ಮಾಡುವುದಕ್ಕೆ ಮುಂದಾಗಿದ್ದಾರೆ. ಹೀಗಾಗಿ 'ಕಾಂತಾರ ಚಾಪ್ಟರ್ 1'ರಂದು 'ಕೊರಗಜ್ಜ' ಕೂಡ ಜನರಿಗೆ ಹತ್ತಿರವಾಗುತ್ತಾ? ಎಂದು ನೋಡಬೇಕಿದೆ.

More from Filmibeat

English summary
After Kantara Chapter 1 another Tulunadu Daiva based movie Koragajja releasing Pan India.
Read more about: kantara chapter 1 kannada movie
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X