Yash19: ಬಿಗ್ ಅನೌನ್ಸ್‌ಮೆಂಟ್ ಎಂದ ಕೆವಿಎನ್: ಮುಹೂರ್ತ ಫಿಕ್ಸ್? ಮತ್ತೆ ಟ್ರೆಂಡಿಂಗ್‌ನಲ್ಲಿ ಯಶ್‌19

ರಾಕಿಂಗ್ ಸ್ಟಾರ್ ಯಶ್ ನಟನೆಯ ಮುಂದಿನ ಸಿನಿಮಾ ಯಾವುದು ಎನ್ನುವ ಮಿಲಿಯನ್ ಡಾಲರ್ ಪ್ರಶ್ನೆಗೆ ಇನ್ನು ಉತ್ತರ ಸಿಕ್ಕಿಲ್ಲ. ಅಭಿಮಾನಿಗಳು ಈ ಬಗ್ಗೆ ಕೇಳಿ ಕೇಳಿ ಸುಸ್ತಾಗಿದ್ದಾರೆ. 'KGF- 2' ಸಿನಿಮಾ ಬಂದೋಗಿ ಒಂದೂವರೆ ವರ್ಷ ಕಳೆದರೂ ಯಶ್ ಹೊಸ ಸಿನಿಮಾ ಒಪ್ಪಿಕೊಂಡಿಲ್ಲ. ಇಡೀ ಭಾರತೀಯ ಚಿತ್ರರಂಗವೇ ಯಶ್‌19ಗಾಗಿ ಕಾಯ್ತಿದೆ.

ಯಶ್ ಹೊಸ ಸಿನಿಮಾ ಅನೌನ್ಸ್ ಮಾಡದೇ ಇದ್ದರೂ ಜಾಹೀರಾತುಗಳಲ್ಲಿ ಮಿಂಚುತ್ತಿದ್ದಾರೆ. ಈ ವರ್ಷ ಹುಟ್ಟುಹಬ್ಬದ ಸಂಭ್ರಮದಲ್ಲಿ ರಾಕಿಂಗ್ ಸ್ಟಾರ್ ಅಭಿಮಾನಿಗಳಿಗೆ ಬಹಿರಂಗ ಪತ್ರ ಬರೆದಿದ್ದರು. ಬಹಳ ದೊಡ್ಡದಾಗಿ ಪ್ಲ್ಯಾನ್ ಮಾಡುತ್ತಿದ್ದೇನೆ. ಅದಕ್ಕಾಗಿ ಮತ್ತಷ್ಟು ಸಮಯ ಬೇಕು ಎಂದಿದ್ದರು. ಇತ್ತೀಚೆಗೆ ಮಾಧ್ಯಮಗಳ ಮುಂದೆ ಮಾತನಾಡುತ್ತಾ ಆದಷ್ಟು ಬೇಗ ಸಿನಿಮಾ ಘೋಷಿಸುವುದಾಗಿ ಹೇಳಿದ್ದರು.

After KVN Big Update Post, Yash19 tag trend in India

ಸೋಶಿಯಲ್ ಮೀಡಿಯಾದಲ್ಲಿ ಯಶ್‌19 ಅಪ್‌ಡೇಟ್‌ಗಾಗಿ ಅಭಿಮಾನಿಗಳು ಮನವಿ ಮಾಡುತ್ತಲೇ ಇದ್ದಾರೆ. ಇನ್ನು ಈ ಹಿಂದೆ ಕೆವಿಎನ್‌ ಪ್ರೊಡಕ್ಷನ್ಸ್ ಬ್ಯಾನರ್‌ನಲ್ಲಿ ಯಶ್‌19 ಸಿನಿಮಾ ಬರುತ್ತದೆ ಎಂದು ಸುದ್ದಿಯಾಗಿತ್ತು. ಇದೀಗ ಕೆವಿಎನ್‌ ಸೋಶಿಯಲ್ ಮೀಡಿಯಾ ಪೇಜ್‌ನಲ್ಲಿ ಹಾಕಿರುವ ಪೋಸ್ಟ್ ಭಾರೀ ನಿರೀಕ್ಷೆ ಹುಟ್ಟಾಕಿದೆ. ವರಮಹಾಲಕ್ಷ್ಮಿ ಹಬ್ಬ ಹತ್ತಿರ ಇರುವಾಗ ಈ ಪೋಸ್ಟ್ ಸಹಜವಾಗಿಯೇ ಕುತೂಹಲ ಮೂಡಿಸಿದೆ.

'ಬಿಗ್ ಅನೌನ್ಸ್‌ಮೆಂಟ್ ಕಮ್ಮಿಂಗ್ ಸೂನ್' ಎಂದು ಕೆವಿಎಲ್‌ ಪ್ರೊಡಕ್ಷನ್ಸ್ ಸಂಸ್ಥೆ ಪೋಸ್ಟ್ ಮಾಡಿದೆ. ಈ ಪೋಸ್ಟ್ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಯಶ್19 ಸಿನಿಮಾ ಅಪ್‌ಡೇಟ್ ಬಗ್ಗೆನೇ ಸುಳಿವು ಕೊಟ್ಟಿದ್ದಾರಾ? ಎನ್ನುವ ಚರ್ಚೆ ಶುರುವಾಗಿದೆ. ಅಭಿಮಾನಿಗಳು ಬೇಗ ಹೇಳಿ ಎಂದು ಕೇಳುತ್ತಿದ್ದಾರೆ. ವರಮಹಾಲಕ್ಷ್ಮಿ ಹಬ್ಬದ ಸಂಭ್ರಮದಲ್ಲಿ ಯಶ್ ತಮ್ಮ ಮುಂದಿನ ಸಿನಿಮಾ ಘೋಷಿಸುತ್ತಾರಾ? ಎನ್ನುವ ಕುತೂಹಲ ಕೆಲವರಲ್ಲಿದೆ.

After KVN Big Update Post, Yash19 tag trend in India

ಒಟ್ನಲ್ಲಿ ಯಶ್ ಮುಂದಿನ ಸಿನಿಮಾ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಬಿಸಿಬಿಸಿ ಚರ್ಚೆ ಆಗುತ್ತಿದೆ. ಪರಿಣಾಮ ಯಶ್‌19 ಹ್ಯಾಷ್‌ಟ್ಯಾಗ್ ಈಗ ಇಂಡಿಯಾ ಮಟ್ಟದಲ್ಲಿ ಟ್ರೆಂಡಿಂಗ್‌ನಲ್ಲಿದೆ. ಈ ಹಿಂದೆ ಕೂಡ ಇದೇ ರೀತಿ ಹಲವು ಯಶ್‌19 ಹ್ಯಾಶ್‌ಟ್ಯಾಗ್ ಟ್ರೆಂಡ್ ಆಗಿತ್ತು. ಸಿನಿಮಾವೊಂದು ಅನೌನ್ಸ್‌ ಆಗುವುದಕ್ಕು ಮುನ್ನ ಹ್ಯಾಷ್‌ಟ್ಯಾಗ್‌ವೊಂದು ಇಷ್ಟೊಂದು ಸದ್ದು ಮಾಡುತ್ತಿರುವುದು ಇದೇ ಮೊದಲು.

ಯಶ್‌19 ಚಿತ್ರಕ್ಕೆ ಯಾರು ಆಕ್ಷನ್ ಕಟ್ ಹೇಳುತ್ತಾರೆ ಎನ್ನುವ ಕುತೂಹಲ ಕೂಡ ಅಭಿಮಾನಿಗಳಲ್ಲಿದೆ. KGF ಸರಣಿಯನ್ನು ಮೀರಿಸುವಂತಹ ಚಿತ್ರಕ್ಕಾಗಿ ಯಶ್ ಪ್ಲ್ಯಾನ್ ಮಾಡುತ್ತಿದ್ದಾರೆ. ಹಾಗಾಗಿ ಆ ಚಿತ್ರವನ್ನು ಯಾರು ಹ್ಯಾಂಡಲ್ ಮಾಡುತ್ತಾರೆ ಎನ್ನುವ ಪ್ರಶ್ನೆ ಕೆಲವರಲ್ಲಿದೆ. ಈ ಹಿಂದೆ ಯಶ್‌19 ಚಿತ್ರಕ್ಕೆ ನರ್ತನ್ ಹೆಸರು ಕೇಳಿ ಬಂದಿತ್ತು. ಆದರೆ ಕಥೆ ಸೆಟ್ ಆಗದ ಕಾರಣ ಅದು ಸಾಧ್ಯವಾಗಲಿಲ್ಲ.

ಯಶ್ ಮುಂದಿನ ಚಿತ್ರಕ್ಕೆ ಮಲಯಾಳಂ ನಿರ್ದೇಶಕಿ ಗೀತು ಮೋಹನ್ ದಾಸ್ ಆಕ್ಷನ್ ಕಟ್ ಹೇಳುತ್ತಾರೆ ಎನ್ನುವ ಚರ್ಚೆ ಕೂಡ ನಡೀತು. ಆದರೆ ಯಾವುದು ಕೂಡ ಫೈನಲ್ ಆಗಿದೆ. ಅಧಿಕೃತವಾಗಿ ಯಾರು ಮಾಹಿತಿ ನೀಡಿಲ್ಲ. ತಮ್ಮ ಮುಂದಿನ ಪ್ರಾಜೆಕ್ಟ್ ಬಗ್ಗೆ ತೆರೆಮರೆಯಲ್ಲಿ ಕಸರತ್ತು ನಡೆಸುತ್ತಿದ್ದಾರೆ. ವರಮಹಾಲಕ್ಷ್ಮಿ ಹಬ್ಬಕ್ಕೆ ಸಿಹಿಸುದ್ದಿ ಸಿಕ್ಕರೂ ಸಿಗಬಹುದು ಎನ್ನುವ ಊಹಾಪೋಹ ಇದೆ.

ಗಣೇಶ್ ನಟನೆಯ 'ಸಖತ್' ಸಿನಿಮಾ ಮೂಲಕ ಕೆವಿಎನ್ ಸಂಸ್ಥೆ ಚಿತ್ರರಂಗ ಪ್ರವೇಶಿಸಿತು. 'ಬೈಟು ಲವ್' ಸಿನಿಮಾ ಕೂಡ ಅದೇ ಬ್ಯಾನರ್‌ನಲ್ಲಿ ತೆರೆಗೆ ಬಂದಿತ್ತು. ಬಳಿಕ ಒಂದಷ್ಟು ಸಿನಿಮಾಗಳನ್ನು ವಿತರಣೆ ಮಾಡಿದ ಸಂಸ್ಥೆ ಈಗ ಧ್ರುವ ಸರ್ಜಾ ನಟನೆಯ 'ಕೆಡಿ' ಚಿತ್ರವನ್ನು ಕೈಗೆತ್ತಿಕೊಂಡಿದೆ. ರಾಮ್‌ಚರನ್ ಜೊತೆ ಸಿನಿಮಾ ಮಾಡುವ ಬಗ್ಗೆ ಚರ್ಚೆ ನಡೀತಿದೆ. ಇದೆಲ್ಲದರ ನಡುವೆ ಯಶ್‌19 ಸಿನಿಮಾ ಜವಾಬ್ದಾರಿಯನ್ನು ವಹಿಸಿಕೊಂಡಿದೆ ಎನ್ನಲಾಗುತ್ತಿದೆ.

More from Filmibeat

English summary
Yash19 tag again in India Trending.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X