106 ದಿನ ಪ್ರದರ್ಶನ ಕಂಡ 'ಕೃಷ್ಣಂ ಪ್ರಣಯ ಸಖಿ' ಸಿನಿಮಾ ಒಟ್ಟು ಕಲೆಕ್ಷನ್ ಎಷ್ಟು?

ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ 'ಕೃಷ್ಣಂ ಪ್ರಣಯ ಸಖಿ' ಸಿನಿಮಾ ಭರ್ಜರಿ ಶತದಿನೋತ್ಸವ ಆಚರಿಸಿದೆ. ಇದೀಗ ಸಿನಿಮಾ ಓಟಿಟಿ ಸ್ಟ್ರೀಮಿಂಗ್‌ಗೆ ಸಜ್ಜಾಗಿದೆ. ಆಗಸ್ಟ್ 15ಕ್ಕೆ ತೆರೆಗೆ ಬಂದಿದ್ದ ಸಿನಿಮಾ ಬಹಳ ತಡವಾಗಿಯೇ ಡಿಜಿಟಲ್ ಪ್ಲಾಟ್‌ಫಾರ್ಮ್‌ಗೆ ಬರ್ತಿದೆ.

ಸನ್‌ನೆಕ್ಸ್ಟ್ ಓಟಿಟಿ ಪ್ಲಾಟ್‌ಫಾರ್ಮ್‌ನಲ್ಲಿ 'ಕೃಷ್ಣಂ ಪ್ರಣಯ ಸಖಿ' ಚಿತ್ರ ರಿಲೀಸ್ ಆಗುತ್ತಿದೆ. ಅಂದಹಾಗೆ ಚಿತ್ರಮಂದಿರಗಳಲ್ಲಿ ಸಿನಿಮಾ ಯಶಸ್ವಿಯಾಗಿ 106 ದಿನ ಪ್ರದರ್ಶನ ಕಂಡಿದೆ. ಇತ್ತೀಚಿನ ದಿನಗಳಲ್ಲಿ ದೊಡ್ಡ ಸಿನಿಮಾಗಲೇ 50 ದಿನ ಪ್ರದರ್ಶನ ಕಾಣುವುದು ಕಷ್ಟ ಎನ್ನುವಂತಾಗಿದೆ. ಬ್ಲಾಕ್‌ಬಸ್ಟರ್ ಟಾಕ್ ಪಡೆದುಕೊಂಡ 'ಬಘೀರ' ಸಿನಿಮಾ 20 ದಿನಕ್ಕೆ ಓಟಿಟಿಗೆ ಬಂದಿತ್ತು.

Ahead of Krishnam Pranaya Sakhi s OTT release here s how much Ganesh film collect in Theatrical run

ಮೂರುವರೆ ತಿಂಗಳ ಬಳಿಕ 'ಕೃಷ್ಣಂ ಪ್ರಣಯ ಸಖಿ' ಸಿನಿಮಾ ಓಟಿಟಿಗೆ ಕಡೆ ಮುಖ ಮಾಡಿದೆ. ಶ್ರೀನಿವಾಸ್ ರಾಜು ನಿರ್ದೇಶನದ ರೊಮ್ಯಾಂಟಿಕ್ ಫ್ಯಾಮಿಲಿ ಎಂಟರ್‌ಟೈನರ್ ಸಿನಿಮಾ ಪ್ರೇಕ್ಷಕರ ಮನಗೆದ್ದಿತ್ತು. ಒಂದೊಳ್ಳೆ ಸಕ್ಸಸ್‌ಗಾಗಿ ಕಾಯುತ್ತಿದ್ದ ಗಣಿಗೆ ಭರ್ಜರಿ ಗೆಲುವು ಸಿಕ್ಕಂತಾಗಿದೆ. ಓಟಿಟಿ ಸ್ಟ್ರೀಮಿಂಗ್‌ಗೆ ಕ್ಷಣಗಣನೆ ಶುರುವಾಗಿದ್ದರೂ ಶಿರಸಿಯ ಮಲ್ಟಿಪ್ಲೆಕ್ಸ್‌ನಲ್ಲಿ ಸಿನಿಮಾ ಪ್ರದರ್ಶನ ಕಂಡಿದೆ.

ಒಟ್ಟಾರೆ 106 ದಿನಗಳ ಯಶಸ್ವಿ ಪ್ರದರ್ಶನದ ಬಳಿಕ ಸಿನಿಮಾ ಸ್ಮಾಲ್‌ಸ್ಕ್ರೀನ್‌ಗೆ ಎಂಟ್ರಿ ಕೊಟ್ಟಿದೆ. ಸನ್ ನೆಟ್‌ವರ್ಕ್ ಭರ್ಜರಿ ಬೆಲೆಗೆ ಚಿತ್ರದ ಡಿಜಿಟಲ್ ಹಾಗೂ ಸ್ಯಾಟಲೈಟ್ ರೈಟ್ಸ್ ಕೊಂಡುಕೊಂಡಿದೆ. ಕ್ರಿಸ್‌ಮಸ್ ಅಥವಾ ಸಂಕ್ರಾಂತಿಗೆ ಉದಯ ಟಿವಿಯಲ್ಲಿ 'ಕೃಷ್ಣಂ ಪ್ರಣಯ ಸಖಿ' ಸಿನಿಮಾ ಪ್ರೀಮಿಯರ್ ಆಗಲಿದೆ. ಇನ್ನು ಸಿನಿಮಾ ಬಾಕ್ಸಾಫೀಸ್‌ನಲ್ಲಿ ಭರ್ಜರಿ ಕಲೆಕ್ಷನ್ ಮಾಡಿದೆ.

ಚಿತ್ರದ ಕಲೆಕ್ಷನ್ ಬಗ್ಗೆ ಚಿತ್ರತಂಡ ಅಧಿಕೃತ ಮಾಹಿತಿ ನೀಡಿಲ್ಲ. ಆದರೆ ಒಂದು ಅಂದಾಜಿನ ಪ್ರಕಾರ ಸಿನಿಮಾ 22ರಿಂದ 25 ಕೋಟಿ ರೂ. ಗ್ರಾಸ್ ಕಲೆಕ್ಷನ್ ಮಾಡಿದೆ ಎನ್ನಲಾಗ್ತಿದೆ. ಬಹಳ ಅದ್ಧೂರಿಯಾಗಿಯೇ ಸಿನಿಮಾ ನಿರ್ಮಾಣವಾಗಿತ್ತು. ದೇಶ ವಿದೇಶಗಳಲ್ಲಿ ಚಿತ್ರೀಕರಣ ನಡೆದಿತ್ತು. 'ದ್ವಾಪರ ದಾಟುತಾ' ಸಾಂಗ್ 'ಕೃಷ್ಣಂ ಪ್ರಣಯ ಸಖಿ' ಚಿತ್ರದ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿತ್ತು.

Ahead of Krishnam Pranaya Sakhi s OTT release here s how much Ganesh film collect in Theatrical run

ಕ್ರೈಂ ಥ್ರಿಲ್ಲರ್ ಚಿತ್ರಗಳನ್ನು ಕಟ್ಟಿಕೊಟ್ಟು ಗೆದ್ದಿದ್ದ ನಿರ್ದೇಶಕ ಶ್ರೀನಿವಾಸ್ ರಾಜು ರೊಮ್ಯಾಂಟಿಕ್ ಸಿನಿಮಾ ಮಾಡಿ ಈ ಬಾರಿ ಮ್ಯಾಜಿಕ್ ಮಾಡಿದ್ದಾರೆ. ಸಿಂಪಲ್ ಕಥೆಯನ್ನು ಪರಿಣಾಮಕಾರಿಯಾಗಿ ತೆರೆಗೆ ತಂದು ಗೆದ್ದಿದ್ದಾರೆ. ಎಂದಿನಂತೆ ಗಣಿ ತಮ್ಮ ನಟನೆ ಮೂಲಕ ಪ್ರೇಕ್ಷಕರ ಮನಗೆದ್ದಿದ್ದಾರೆ. ಮಾಳವಿಕಾ ನಾಯರ್, ಶರಣ್ಯ ಶೆಟ್ಟಿ ನಾಯಕಿಯರಾಗಿ ಸಾಥ್ ಕೊಟ್ಟಿದ್ದಾರೆ.

ಸಾಧು ಕೋಕಿಲ, ರಂಗಾಯಣ ರಘು, ಶಶಿಕುಮಾರ್, ಅವಿನಾಶ್, ಶ್ರುತಿ, ಅಶೋಕ್ ರೀತಿಯ ಅನುಭವಿ ಕಲಾವಿದರ ದಂಡೇ ಚಿತ್ರದಲ್ಲಿದೆ. ತ್ರಿಶೂಲ್ ಎಂಟರ್‌ಟೈನ್‌ಮೆಂಟ್ಸ್ ಬ್ಯಾನರ್ ಅಡಿಯಲ್ಲಿ 'ಕೃಷ್ಣಂ ಪ್ರಣಯ ಸಖಿ' ಸಿನಿಮಾ ನಿರ್ಮಾಣವಾಗಿತ್ತು. ವೆಂಕಟ್ ರಾಮ್ ಪ್ರಸಾದ್ ಛಾಯಾಗ್ರಹಣ, ಅರ್ಜುನ್ ಜನ್ಯಾ ಸಂಗೀತ ಚಿತ್ರದ ಹೈಲೆಟ್.

ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದಲ್ಲಿ 'ಕೃಷ್ಣಂ ಪ್ರಣಯ ಸಖಿ' ಸಿನಿಮಾ ಬಿಡುಗಡೆ ಆಗಿತ್ತು. ಲಾಂಗ್ ವೀಕೆಂಡ್ ಚಿತ್ರದ ಕಲೆಕ್ಷನ್‌ಗೆ ಸಹಕಾರಿಯಾಗಿತ್ತು. ಫ್ಯಾಮಿಲಿ ಆಡಿಯನ್ಸ್ ಸಿನಿಮಾ ನೋಡಲು ಮುಗಿಬಿದ್ದರು. ಪರಿಣಾಮ ಎರಡು ವಾರ ಸಿನಿಮಾ ಸಾಕಷ್ಟು ಕಡೆಗಳಲ್ಲಿ ಹೌಸ್‌ಫುಲ್ ಪ್ರದರ್ಶನ ಕಂಡಿತ್ತು. ಚಿತ್ರತಂಡ ಕೂಡ ಇಂತಾದೊಂದು ಪ್ರತಿಕ್ರಿಯೆ ನಿರೀಕ್ಷಿರಲಿಲ್ಲ.

ಶ್ರೀಮಂತ ಮನೆತನದ ಹುಡುಗ ಅನಾಥಶ್ರಮದ ಹುಡುಗಿಯನ್ನು ಪ್ರೀತಿಸುವ ಕಥೆ ಚಿತ್ರದಲ್ಲಿದೆ. ತನ್ನ ಪ್ರೀತಿಗಾಗಿ ಆತ ಮಾಡುವ ಸಣ್ಣ ನಾಟಕ, ಮುಂದೆ ಏನೆಲ್ಲಾ ಆಗುತ್ತದೆ ಎನ್ನುವುದು 'ಕೃಷ್ಣಂ ಪ್ರಣಯ ಸಖಿ' ಚಿತ್ರದ ಇನ್ನುಳಿದ ಕಥೆ. ಟ್ರೈಲರ್ ಕೂಡ ಬಿಡುಗಡೆ ಮಾಡದೇ ಚಿತ್ರವನ್ನು ತೆರೆಗೆ ತರಲಾಗಿತ್ತು. ಇದೀಗ ಸನ್‌ನೆಕ್ಸ್ಟ್ ಸಣ್ಣ ಟ್ರೈಲರ್ ರಿಲೀಸ್ ಮಾಡಿ ಕುತೂಹಲ ಮೂಡಿಸಿದೆ.

More from Filmibeat

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X