ಪ್ರಜ್ವಲ್ ರೇವಣ್ಣ ಪ್ರಕರಣ ನನ್ನ ಮನಸನ್ನು ದಿಗ್ಭ್ರಮೆಗೊಳಿಸಿದೆ ; ಚೇತನ್

By ಫಿಲ್ಮಿಬೀಟ್ ಡೆಸ್ಕ್

ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಪೆನ್ ಡ್ರೈವ್ ಬಗ್ಗೆ ಕೇವಲ ಕರುನಾಡು ಚರ್ಚೆಯನ್ನ ಮಾಡ್ತಿಲ್ಲ. ಬದಲಿಗೆ ಭಾರತದೆಲ್ಲೆಡೆ ಹಾಸನದ ಪೆನ್ ಡ್ರೈವ್ ಪ್ರಜ್ವಲಿಸುತ್ತಿದೆ.

ಇನ್ನೂ ರಾಜಕೀಯ ಪಡಸಾಲೆಯಲ್ಲಿ ಅಷ್ಟೇ ಅಲ್ಲ, ಚಿತ್ರರಂಗದಲ್ಲಿ ಕೂಡ ಪೆನ್ ಡ್ರೈವ್ ದ್ದೇ ಸದ್ದು ಮತ್ತು ಸುದ್ದಿ. ಆದರೂ ಪೆನ್ ಡ್ರೈವ್ ಎಂಬ ಶೀರ್ಷಿಕೆಯನ್ನ ಇನ್ನೂ ಯಾರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನೊಂದಾಯಿಸಿಲ್ಲ ಅನ್ನುವುದು ಅಚ್ಚರಿ.

ahimsa-chetan-kumar-responded-to-the-sex-scandal-involving-hassan-mp-prajwal-revanna

ಇರಲಿ.. ಸದ್ಯದ ಸಮಾಚಾರ ಏನೆಂದರೆ, ಪೆನ್ ಡ್ರೈವ್ ಮತ್ತು ಪ್ರಜ್ವಲ್ ಬಗ್ಗೆ ಕನ್ನಡ ಚಿತ್ರರಂಗದ ಹೋರಾಟಗಾರ ಚೇತನ್ ಮಾತನಾಡಿದ್ದಾರೆ. ತಪ್ಪು..ತಪ್ಪೇ.. ತಪ್ಪು ಸಾಬೀತಾದರೆ ಶಿಕ್ಷೆ ಆಗಬೇಕು ಎಂದು ಅಭಿಪ್ರಾಯವನ್ನ ವ್ಯಕ್ತಪಡಿಸಿದ್ದಾರೆ ಚೇತನ್.

ಪ್ರಜ್ವಲ್ ರೇವಣ್ಣ ವಿರುದ್ಧದ ಆರೋಪಗಳು ಗಂಭೀರವಾದದ್ದು ತಪ್ಪು ಸಾಬೀತಾದರೆ ಅವರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಅಂದಿದ್ದಾರೆ. ಅನ್ಯಾಯಕ್ಕೊಳಗಾದ ಮಹಿಳೆಯರು ತಮ್ಮ ಕಷ್ಟಗಳನ್ನ ವಿವರಿಸಲು ಧೈರ್ಯದಿಂದ ಮುಂದೆ ಬರುತ್ತಿರುವುದನ್ನು ನೋಡಿ ಸಂತೋಷವಾಗಿದೆ ಎಂದಿರುವ ಚೇತನ್, ಪ್ರಜ್ವಲ್ ರೇವಣ್ಣ ಅವರ ಪ್ರಕರಣವನ್ನ ಸಾವಿರಾರು ನಿರ್ಭಯಾಗಳಿಗೆ ಹೋಲಿಸಿದ್ದು, ಅದಕ್ಕೆ ಪ್ರಧಾನಿ ಮೋದಿ ಮತ್ತು ಬಿಜೆಪಿ ಹೊಣೆ ಹೊರಬೇಕೆಂದು ಒತ್ತಾಯಿಸುತ್ತಿರುವ ಕಾಂಗ್ರೆಸ್ ಪಕ್ಷದ ಮಹಿಳೆಯರ ನಡೆ ಹಾಸ್ಯಾಸ್ಪದವಾಗಿದೆ ಎಂದು ಕೂಡ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಚೇತನ್

ಇನ್ನೂ ಲೈಂಗಿಕ ಹಗರಣದಲ್ಲಿ ಭಾಗಿಯಾಗಿರುವ ಪ್ರಜ್ವಲ್ ರೇವಣ್ಣ ಅವರಿಗೆ ಅಂಜಿಕೆ ಇಲ್ಲದಿರುವುದು ನನ್ನ ಮನಸನ್ನು ದಿಗ್ಭ್ರಮೆಗೊಳಿಸಿದೆ ಎಂದಿರುವ ಚೇತನ್, 2900 ಚಿತ್ರಗಳು ಅಥವಾ ವಿಡಿಯೋಗಳನ್ನ ಒಳಗೊಂಡಿರುವ ಪೆನ್ ಡ್ರೈವ್‌ನ್ನೂ ಸಾರ್ವಜನಿಕಗೊಳಿಸಿದರೆ ಜೆಡಿಎಸ್ ಪಕ್ಷ ಮತ್ತು ಕುಟುಂಬದವರ ಮೇಲೆ ಆಗುವ ಪರಿಣಾಮಗಳ ಬಗ್ಗೆ ಪ್ರಜ್ವಲ್ ರೇವಣ್ಣ ಅವರಿಗೆ ಯಾವುದೇ ಭಯ ಇರಲಿಲ್ಲವೇ ಎಂದು ಪ್ರಶ್ನೆಯನ್ನೂ ಮಾಡಿದ್ದಾರೆ ಆ ದಿನಗಳು ಖ್ಯಾತಿಯ ಚೇತನ್

ಕೇವಲ ಚೇತನ್ ಮಾತ್ರ ಅಲ್ಲ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಬಗ್ಗೆ ತಮಿಳು ನಟಿ ಕಸ್ತೂರಿ, ತೆಲುಗು ನಟಿ ಪೂನಂ ಕೌರ್ ಕೆಂಡ ಕಾರಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಗ್‌ಬಾಸ್ ಸ್ಪರ್ಧಿ ಪ್ರಥಮ್ ಕೂಡ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಪ್ರಕಾಶ್ ರಾಜ್ ಕೂಡ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ವಾಗ್ದಾಳಿಯನ್ನ ಮಾಡಿದ್ದಾರೆ.

ಉಳಿದಂತೆ ಜೆಡಿಎಸ್ ಶಾಸಕ ಎಚ್‌ಡಿ ರೇವಣ್ಣ ಹಾಗೂ ಅವರ ಪುತ್ರ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಕಿರುಕುಳ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಎಸ್ಐಟಿ, ತಂದೆ-ಮಗನಿಂದ ಕಿರುಕುಳಕ್ಕೊಳಗಾದ ಐವರು ಮಹಿಳೆಯರಿಂದ ಮಾಹಿತಿ ಕಲೆಹಾಕಿದೆ. ಈಮಧ್ಯೆ, ಎಸ್‌ಐಟಿ ಆರೋಪಿಗಳಿಗೆ ನೋಟಿಸ್ ಜಾರಿ ಮಾಡಲು ಸಿದ್ಧತೆ ನಡೆಸಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸುವ ಸಾಧ್ಯತೆಯಿದೆ.

ವಿಡಿಯೋಗಳ ಆಧಾರದ ಮೇಲೆ ಗುರುತಿಸಲ್ಪಟ್ಟ ಐವರು ಮಹಿಳೆಯರನ್ನು ಎಸ್‌ಐಟಿಯ ಹಿರಿಯ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದು, ಸಂತ್ರಸ್ತರು ಆರೋಪಿಗಳ ಸಂಪರ್ಕಕ್ಕೆ ಬಂದಿದ್ದು ಹೇಗೆ ಮತ್ತು ಅವರ ಜೊತೆ ಲೈಂಗಿಕ ಕ್ರಿಯೆ ನಡೆಸುವಂತೆ ಬಲವಂತಪಡಿಸಿದ ಬಗ್ಗೆ ಅಧಿಕಾರಿಗಳು ಮಾಹಿತಿ ಸಂಗ್ರಹಿಸಿದ್ದಾರೆ ಎಂದು ತಿಳಿದುಬಂದಿದೆ.

More from Filmibeat

English summary
Sandalwood Actor Chetan Kumar And Activist Chetan Kumar Ahimsa Responded To The Sex Scandal Involving Hassan MP Prajwal Revanna
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X