ಬಜೆಟ್‌ನಲ್ಲಿ 'ಮೇಕೆದಾಟು' ಯೋಜನೆ ಬಗ್ಗೆ ಸಿಎಂ ಪ್ರಸ್ತಾಪ: "ಇದೊಂದು ಕೆಟ್ಟ ಯೋಜನೆ" ಎಂದ ನಟ ಚೇತನ್

'ಮೇಕೆದಾಟು' ಯೋಜನೆ ಅನುಷ್ಠಾನಕ್ಕೆ ತರಬೆಕು ಅನ್ನೋದು ಹಲವು ವರ್ಷಗಳಿಂದ ಹೋರಾಟ ನಡೆಯುತ್ತಿಲೇ ಇದೆ. ಇದರಿಂದ ಬೆಂಗಳೂರು ಸುತ್ತಮುತ್ತಲಿನ ಪ್ರದೇಶದ ಜನರಿಗೆ ಕುಡಿಯುವ ನೀರಿನ ಕಲ್ಪಿಸಲು ಅನುಕೂಲ ಆಗಲಿದೆ. ಆದರೆ, ಈ ಯೋಜನೆಗೆ ತಮಿಳುನಾಡಿನಲ್ಲಿ ವಿರೋಧ ವ್ಯಕ್ತವಾಗುತ್ತಿವೆ.

ಈ ಯೋಜನೆಗೆ ತಮಿಳುನಾಡು ವಿರೋಧ ವ್ಯಕ್ತಪಡಿಸಿದ್ದರೂ, ಡಿಸಿಎಂ ಡಿಕೆಶಿ ಶಿವಕುಮಾರ್ ಹೆಚ್ಚು ಆಸಕ್ತಿ ತೋರುತ್ತಿದ್ದಾರೆ. ಅಲ್ಲದೆ ಸಿಎಂ ಸಿದ್ಧರಾಮಯ್ಯ ಕೂಡ ಇಂದಿನ ಬಜೆಟ್‌ನಲ್ಲಿ ಮೇಕೆದಾಟು ಯೋಜನೆ ಬಗ್ಗೆ ಸಕರಾತ್ಮಕವಾಗಿ ಮಾತಾಡಿದ್ದಾರೆ.

Chetan Kumar- Mekedatu

'ಮೇಕೆದಾಟು' ಯೋಜನೆಯನ್ನು ಅನುಷ್ಠಾನಕ್ಕೆ ತರಲು ಸರ್ಕಾರ ಪೂರ್ವ ತಯಾರಿಗಳನ್ನು ಮಾಡಿಕೊಳ್ಳುತ್ತಿದೆ. ಇಂದಿನ (ಜುಲೈ 7) ಬಜೆಟ್‌ನಲ್ಲೂ ಸಿದ್ದರಾಮಯ್ಯ ಮೇಕೆದಾಟು ಯೋಜನೆ ಬಗ್ಗೆ ಪ್ರಸ್ತಾಪ ಮಾಡಿದ್ದು, ಈ ಬಗ್ಗೆ ಪರ-ವಿರೋಧ ಚರ್ಚೆಯಾಗುತ್ತಿದೆ. ಆ ದಿನಗಳು ಖ್ಯಾತಿಯ ನಟ ಚೇತನ್ ಕುಮಾರ್ ಮೇಕೆದಾಟು ಯೋಜನೆಯನ್ನು ವಿರೋಧಿಸಿದ್ದಾರೆ.

ಶೀಘ್ರದಲ್ಲೇ ಭೂಸ್ವಾಧೀನ ಪ್ರಕ್ರಿಯೆ

ಮೇಕೆದಾಟು ಯೋಜನೆಗೆ ತಮಿಳುನಾಡು ವಿರೋಧ ವ್ಯಕ್ತಪಡಿಸುತ್ತಿದೆ. ಹೀಗಾಗಿ ಪ್ರತಿಬಾರಿ ಮೇಕೆದಾಟು ಯೋಜನೆ ಪ್ರಸ್ತಾಪ ಮಾಡಿದಾಗಲೂ ಹಿನ್ನೆಲೆಯಾಗುತ್ತಲೇ ಇದೆ. ಈ ಬಾರಿ ಸಿ ಎಂ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಇಬ್ಬರೂ ಈ ಯೋಜನೆ ಜಾರಿ ಮಾಡುವುದಕ್ಕೆ ಹೆಚ್ಚು ಆಸಕ್ತಿ ತೋರಿದ್ದಾರೆ.

ಬೆಂಗಳೂರು ನಗರಕ್ಕೆ ಕುಡಿಯುವ ನೀರು ಪೂರೈಸಿವ ಯೋಜನೆಯಾಗಿದ್ದರಿಂದ ತಮಿಳುನಾಡಿಗೆ ತೊಂದರೆಯಾಗುವುದಿಲ್ಲ. ಹೆಚ್ಚುವರಿ ನೀರು ಸಮುದ್ರಕ್ಕೆ ಸೇರುವ ಬದಲು ಸದ್ಭಳಕೆ ಮಾಡಿಕೊಳ್ಳಲಾಗುವುದು ಎಂಬು ಕರ್ನಾಟಕದ ವಾದ. ಆದರೆ, ಅದನ್ನು ತಮಿಳುನಾಡು ಒಪ್ಪುತ್ತಿಲ್ಲ. ಹೀಗಿದ್ದರೂ ಶೀಘ್ರದಲ್ಲೇ ಭೂಸ್ವಾಧೀನ ಪ್ರಕ್ರಿಯೆಗಳನ್ನು ಜರುಗಿಸಲು ಆದ್ಯತೆ ಮೇರೆಗೆ ಕ್ರಮವಹಿಸಲಾಗುವುದು ಸಿಎಂ ಸಿದ್ಧರಾಮಯ್ಯ ಬಜೆಟ್‌ನಲ್ಲಿ ಹೇಳಿದ್ದಾರೆ. ಹೀಗಾಗಿ ಚೇತನ್ ಮತ್ತೆ ಈ ಯೋಜನೆ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದಾರೆ.

'ಮೇಕೆದಾಟು' ಕೆಟ್ಟ ಯೋಜನೆ

ನಟ ಹಾಗೂ ಸಾಮಾಜಿಕ ಹೋರಾಟಗಾರ 'ಆ ದಿನಗಳು ಚೇತನ್' ಕೆಲವು ವಿಷಯಗಳನ್ನು ವಿರೋಧಿಸುತ್ತಲೇ ಬಂದಿದ್ದಾರೆ. ಅದರಲ್ಲಿ ಮೇಕೆ ದಾಟು ಯೋಜನೆ ಕೂಡ ಒಂದು. ಈ ಯೋಜನೆ ಸರಿಯಿಲ್ಲ. ಪ್ರಕೃತಿಗೆ ವಿರುದ್ಧವಾಗಿದೆ ಎಂಬುದು ನಟ ಚೇತನ್ ವಾದ.

ಇಂದು(ಜುಲೈ 7) ಸಿಎಂ ಸಿದ್ಧರಾಮಯ್ಯ ಮೇಕೆದಾಟು ಯೋಜನೆ ಪ್ರಸ್ತಾಪ ಮಾಡುತ್ತಿದ್ದಂತೆ, "ಇದೊಂದು ಕೆಟ್ಟ ಯೋಜನೆ" ಎಂದು ಫೇಸ್‌ಬುಕ್‌ನಲ್ಲಿ ಆಕ್ರೋಶ ಹೊರಹಾಕಿದ್ದಾರೆ. ಇದು ಪರಿಸರದ ವಿರುದ್ಧವಾದ ಯೋಜನೆ ಎಂದು ಅಭಿಪ್ರಾಯ ಪಟ್ಟು ಆಕ್ರೋಶ ಹೊರಹಾಕಿದ್ದಾರೆ.

ನಟ ಚೇತನ್ ವಾದವೇನು?

"ಮೇಕೆದಾಟು ಯೋಜನೆಗೆ ಅನುಮತಿ ಪಡೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಬಜೆಟ್ ಭಾಷಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದ್ದಾರೆ. ಇದೊಂದು ಕೆಟ್ಟ ಯೋಜನೆ. ವಿಪರ್ಯಾಸವೆಂದರೆ, 'ಪರಿಸರ' ಮತ್ತು 'ಪ್ರವಾಹ ನಿರ್ವಹಣೆ'ಯೇ ನಮ್ಮ ಸರ್ಕಾರವು ಜಯಿಸಲು ಪ್ರಯತ್ನಿಸುತ್ತಿರುವ ಮುಖ್ಯ ಸವಾಲುಗಳು (ಬ್ರಾಂಡ್ ಬೆಂಗಳೂರು). ಮೇಕೆದಾಟು ಅಣೆಕಟ್ಟು ಪರಿಸರವನ್ನು ನಾಶಪಡಿಸುತ್ತದೆ. ಬೆಂಗಳೂರಿನ ಬಳಿಯ ಹಳ್ಳಿಗಳಲ್ಲಿ ಇದರಿಂದ ಪ್ರವಾಹ ಸಂಭವಿಸುತ್ತದೆ." ಎಂದು ಫೇಸ್‌ಬುಕ್ ಖಾತೆಯಲ್ಲಿ ಬರೆದು ವಿರೋಧ ವ್ಯಕ್ತಪಡಿಸಿದ್ದಾರೆ.

ಆ ದಿನಗಳು ಚೇತನ್ ತನಗನ್ನಿಸಿದ್ದನ್ನು ವಿರೋಧಿಸುತ್ತಲೇ ಬಂದಿದ್ದಾರೆ. ಇದರಿಂದ ಸಂಕಷ್ಟಕ್ಕೆ ಸಿಕ್ಕಿಕೊಂಡಿದ್ದೂ ಇದೆ. ಚೇತನ್ ವಿರೋಧಿಸುವ ಅಂಶಗಳನ್ನು ಬೆಂಬಲಿಸುವವರೂ ಇದ್ದಾರೆ. ಅದೇ ರೀತಿ ವಿರೋಧಿಸುವವರೂ ಇದ್ದಾರೆ. ಸದ್ಯ 'ಮೇಕೆದಾಟು' ಯೋಜನೆ ಬೇಡ, ಇದರಿಂದ ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪ್ರವಾಹ ಸ್ಥಿತಿ ನಿರ್ಮಾಣ ಆಗುತ್ತೆ ಅನ್ನೋದು ಚೇತನ್ ವಾದ.

More from Filmibeat

English summary
Ahimsa Chetan Stands Against Mekedatu Project Highlighting Concerns for Environmental Impact, know more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X